ಯೆಹೆಜ್ಕೇಲನು 16:6 - ಪರಿಶುದ್ದ ಬೈಬಲ್6 “‘ಆಗ ನಾನು (ದೇವರು) ಆ ಮಾರ್ಗವಾಗಿ ಹಾದುಹೋಗುವಾಗ ನೀನು ರಕ್ತಮಯವಾಗಿ ಹೊರಳಾಡುತ್ತಾ ಬಿದ್ದಿದ್ದೆ. ಆಗ ನಾನು “ಜೀವಿಸು” ಅಂದೆನು. ಹೌದು, ನೀನು ರಕ್ತದಲ್ಲಿ ಮುಳುಗಿದ್ದೀ. ಆಗ ನಾನು “ಜೀವಿಸು” ಅಂದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “‘ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿದೆನು. ಹೌದು, ‘ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ‘ನೀನು ರಕ್ತದಿಂದ ಅಶುದ್ಧವಾಗಿದ್ದರೂ ಬದುಕು’ ಎಂದು ಹೇಳಿದೆ; ಹೌದು, ‘ನೀನು ರಕ್ತದಿಂದ ಅಶುದ್ಧವಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಾನು ಹಾದುಹೋಗುತ್ತಾ ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು ಎಂದು ಹೇಳಿದೆನು, ಹೌದು, ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು ಎಂದು ಹೇಳಿ ಬದುಕಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ ‘ನಾನು ನಿನ್ನ ಬಳಿಯಲ್ಲಿ ಹಾದುಹೋಗುವಾಗ, ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದುದನ್ನು ನೋಡಿದಾಗ, “ಬದುಕು” ಎಂದೆನು. ಅಧ್ಯಾಯವನ್ನು ನೋಡಿ |
ಈಗ ನನ್ನ ಕೋಪದ ದೆಸೆಯಿಂದ ನಿನಗೆ ಹಾನಿ ಮಾಡಿದವರನ್ನು ಶಿಕ್ಷಿಸುವೆನು. ಅವರು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದರು. ‘ನಮ್ಮ ಮುಂದೆ ಸಾಷ್ಟಾಂಗಬೀಳು. ಆಗ ನಿನ್ನ ಮೇಲೆ ನಾವು ನಡೆಯುವೆವು’ ಎಂದು ಹೇಳಿದರು. ಅವರಿಗೆ ಅಡ್ಡಬೀಳಲು ನಿನ್ನನ್ನು ಬಲಾತ್ಕರಿಸಿದರು. ಆ ಬಳಿಕ ಅವರು ನೀನು ಮಣ್ಣಿನ ಧೂಳೋ ಎಂಬಂತೆ ನಿನ್ನ ಬೆನ್ನಿನ ಮೇಲೆ ನಡೆದಾಡಿದರು. ನೀನು ಅವರಿಗೆ ನಡೆಯಲು ಬೀದಿಯಾದಿ.”
ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.