Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:60 - ಪರಿಶುದ್ದ ಬೈಬಲ್‌

60 ಆದರೆ ನೀನು ಎಳೆಯವಳಾಗಿದ್ದಾಗ ನಿನ್ನೊಡನೆ ನಾನು ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ. ನಾನು ಅದನ್ನು ಶಾಶ್ವತವಾದ ಒಡಂಬಡಿಕೆಯನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು, ನಿನ್ನ ಸಂಗಡ ಎಂದಿಗೂ ತಪ್ಪದ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

60 ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನಿನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

60 ಹೀಗಾದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಸಂಗಡ ಎಂದಿಗೂ ತಪ್ಪದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

60 ಆದರೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ನಿನಗಾಗಿ ನಿತ್ಯವಾದ ಒಡಂಬಡಿಕೆಯೊಂದನ್ನು ಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:60
24 ತಿಳಿವುಗಳ ಹೋಲಿಕೆ  

ದೇವರಿಂದ ಹೊಸ ಒಡಂಬಡಿಕೆಯನ್ನು ತಂದಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮ ಸಂಗತಿಗಳನ್ನು ನಮಗೆ ತಿಳಿಸುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ನಾನು ಇಸ್ರೇಲರೊಡನೆ ಮುಂದಿನ ದಿನಗಳಲ್ಲಿ ಮಾಡಿಕೊಳ್ಳುವ ಹೊಸ ಒಡಂಬಡಿಕೆಯು ಇಂತಿದೆ: ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇರಿಸುವೆನು; ಅವರ ಹೃದಯದ ಮೇಲೆ ಬರೆಯುವೆನು; ನಾನು ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು.


ನಾನು ಮತ್ತೆ ಹಾದುಹೋಗುವಾಗ ನಿನ್ನನ್ನು ನೋಡಲಾಗಿ ನೀನು ಸಂಭೋಗಿಸಲು ತಯಾರಾಗಿದ್ದೆ. ನಾನು ನನ್ನ ಹೊದಿಕೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಬೆತ್ತಲೆ ದೇಹವನ್ನು ಮುಚ್ಚಿದೆನು. ನಿನ್ನನ್ನು ವಿವಾಹವಾಗಲು ಮಾತುಕೊಟ್ಟೆನು. ನಾನು ನಿನ್ನೊಡನೆ ಒಡಂಬಡಿಕೆ ಮಾಡಿಕೊಂಡೆನು. ಆಗ ನೀನು ನನ್ನವಳಾದೆ.’” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಅವರು ಚೀಯೋನಿಗೆ ಹೋಗುವ ಮಾರ್ಗವನ್ನು ವಿಚಾರಿಸುವರು. ಆ ದಿಕ್ಕಿನಲ್ಲಿ ಹೋಗಲು ಪ್ರಾರಂಭಿಸುವರು. ‘ಬನ್ನಿ, ನಾವೆಲ್ಲರೂ ಯೆಹೋವನ ಆಶ್ರಯಪಡೆಯೋಣ. ಆತನೊಂದಿಗೆ ಶಾಶ್ವತವಾದ ಮತ್ತು ನಾವೆಂದೂ ಮರೆಯಲಾಗದ ಒಡಂಬಡಿಕೆಯನ್ನು ಮಾಡಿಕೊಳ್ಳೋಣ’ ಎಂದು ಅವರು ಹೇಳುವರು.


ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.


ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಂಡನು. ತನ್ನ ಮಹಾಪ್ರೀತಿಯಿಂದ ಅವರನ್ನು ಸಂತೈಸಿದನು.


ಆಗ ನಾನು ಯಾಕೋಬನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ಇಸಾಕನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ಅಬ್ರಹಾಮನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.


ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.


ಕರುಣೆ ತೋರುವುದಾಗಿ ನಮ್ಮ ಪಿತೃಗಳಿಗೆ ನೀಡಿದ ತನ್ನ ಪವಿತ್ರ ವಾಗ್ದಾನವನ್ನು ಆತನು ಜ್ಞಾಪಿಸಿಕೊಂಡಿದ್ದಾನೆ.


ಅಲ್ಲಿ ಆಕೆಗೆ ನಾನು ದ್ರಾಕ್ಷಿತೋಟಗಳನ್ನು ಕೊಡುವೆನು. ಆಕೆಗೆ ಆಕೋರ್ ತಗ್ಗುಪ್ರದೇಶವನ್ನು ನಿರೀಕ್ಷೆಯ ಬಾಗಿಲಾಗಿ ಕೊಡುವೆನು. ಆಗ ಅವಳು ತಾನು ಈಜಿಪ್ಟಿನಿಂದ ಹೊರಬಂದ ತನ್ನ ಯೌವನದ ದಿನಗಳಲ್ಲಿ ಹೇಗೆ ನನ್ನ ಸಂಗಡ ಮಾತನಾಡಿದಳೋ ಹಾಗೆಯೇ ನನ್ನೊಂದಿಗೆ ಮಾತನಾಡುವಳು.”


“ಯೆರೆಮೀಯನೇ, ಹೋಗಿ ಜೆರುಸಲೇಮಿನ ಜನರೊಂದಿಗೆ ಮಾತನಾಡು, ಅವರಿಗೆ ಹೀಗೆ ಹೇಳು: “ಯೆಹೋವನು ಹೀಗೆನ್ನುತ್ತಾನೆ: ‘ನೀವು ಯುವ ರಾಷ್ಟ್ರವಾಗಿದ್ದಾಗ ನನಗೆ ನಂಬಿಗಸ್ತರಾಗಿದ್ದಿರಿ; ಯುವತಿಯಾದ ಮದುಮಗಳಂತೆ ನನ್ನನ್ನು ಹಿಂಬಾಲಿಸಿದಿರಿ. ಎಂದೂ ಬೇಸಾಯಕ್ಕೆ ಬಳಸದ ಭೂಮಿಯಲ್ಲಿಯೂ ಮರಳುಗಾಡಿನಲ್ಲಿಯೂ ನನ್ನನ್ನು ಹಿಂಬಾಲಿಸಿದಿರಿ.


ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವನು. ಆತನು ತನ್ನ ಆಜ್ಞೆಗಳನ್ನು ಸಾವಿರ ತಲೆಮಾರುಗಳವರೆಗೂ ಜ್ಞಾಪಿಸಿಕೊಳ್ಳುವನು.


“ಯೆಹೋವನು ನನ್ನ ಕುಟುಂಬವನ್ನು ಸ್ಥಿರಗೊಳಿಸಿದನು. ಆತನು ನನ್ನೊಡನೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಈ ಒಡಂಬಡಿಕೆಯನ್ನು ಸಂಪೂರ್ಣವಾಗಿ ಸುಭದ್ರಗೊಳಿಸಿದನು. ಆತನು ನನಗೆ ಎಲ್ಲೆಲ್ಲಿಯೂ ಜಯ ಕೊಡುವನು. ಆತನು ನನಗೆ ಬೇಕಾದದ್ದನ್ನೆಲ್ಲಾ ಕೊಡುವನು.


ಅವರಿಗೋಸ್ಕರ ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆ. ನಾನು ಅವರ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆದುಕೊಂಡು ಬಂದೆನು. ಬೇರೆ ಜನಾಂಗಗಳವರು ಆ ಸಂಗತಿಗಳನ್ನು ನೋಡಿದರು. ನಾನೇ ಯೆಹೋವನು!”


ನಾನು ಈ ಮುಗಿಲುಬಿಲ್ಲನ್ನು ನೋಡುವಾಗ, ನನಗೂ ನಿಮಗೂ ಮತ್ತು ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಆಗಿರುವ ಒಡಂಬಡಿಕೆಯನ್ನು ನೆನಪುಮಾಡಿಕೊಳ್ಳುವೆನು. ಜಲಪ್ರಳಯವು ಇನ್ನೆಂದಿಗೂ ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ನಾಶಗೊಳಿಸುವುದಿಲ್ಲ ಎಂಬುದೇ ಈ ಒಡಂಬಡಿಕೆ.


“ನಾನು ನನ್ನ ಕುರಿಗಳೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡುವೆನು. ಕೆಟ್ಟ ಕುರಿಗಳನ್ನು ನಾನು ದೇಶದೊಳಗಿಂದ ತೆಗೆದುಬಿಡುವೆನು. ಆಮೇಲೆ ನನ್ನ ಕುರಿಗಳು ಅಡವಿಯಲ್ಲಿ ಸುರಕ್ಷಿತವಾಗಿದ್ದು ಕಾಡುಗಳಲ್ಲಿ ಮಲಗಿಕೊಳ್ಳುವವು.


ಮುಂದಿನ ದಿವಸಗಳಲ್ಲಿ ಯೆಹೋವನು ಯಾಕೋಬನ ಮೇಲೆ ಮತ್ತೆ ಪ್ರೀತಿತೋರುವನು. ಯೆಹೋವನು ಮತ್ತೆ ಇಸ್ರೇಲರನ್ನು ಆರಿಸುವನು. ಆ ಸಮಯದಲ್ಲಿ ಅವರ ದೇಶವನ್ನು ಅವರಿಗೆ ಹಿಂತಿರುಗಿಸುವನು. ಆಗ ಯೆಹೂದ್ಯರಲ್ಲದವರು ಯೆಹೂದ್ಯರೊಂದಿಗೆ ಸೇರಿಕೊಳ್ಳುವರು. ಅವರೆಲ್ಲರೂ ಒಂದೇ ವಂಶದವರಾಗುವರು. ಅದು ಯಾಕೋಬನ ವಂಶ.


ಯಾಕೆಂದರೆ ನಾನೇ ಯೆಹೋವನು. ನಾನು ನ್ಯಾಯದಲ್ಲಿ ಸಂತೋಷಿಸುವೆನು. ನಾನು ಕದಿಯುವದನ್ನೂ ಎಲ್ಲಾ ದುಷ್ಟತ್ವಗಳನ್ನೂ ದ್ವೇಷಿಸುತ್ತೇನೆ. ಅದಕ್ಕಾಗಿ ನಾನು ಅಂಥಾ ಜನರಿಗೆ ದೊರಕಬೇಕಾದ ಶಿಕ್ಷೆಯನ್ನು ಕೊಡುವೆನು. ನನ್ನ ಜನರೊಂದಿಗೆ ನಿತ್ಯಕಾಲದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು