ಯೆಹೆಜ್ಕೇಲನು 16:61 - ಪರಿಶುದ್ದ ಬೈಬಲ್61 ನಿನ್ನ ಅಕ್ಕತಂಗಿಯಂದಿರನ್ನು ನಾನು ನಿನ್ನ ಬಳಿಗೆ ತಂದು ಅವರನ್ನು ನಿನ್ನ ಮಕ್ಕಳನ್ನಾಗಿ ಮಾಡುವೆನು. ಅದು ನಮ್ಮ ಒಡಂಬಡಿಕೆಯಲ್ಲಿಲ್ಲದಿದ್ದರೂ ನಾನು ಅದನ್ನು ನಿನಗಾಗಿ ಮಾಡುವೆನು. ಆಗ ನೀನು ಮಾಡಿದ ಭಯಂಕರ ಸಂಗತಿಗಳನ್ನು ಜ್ಞಾಪಕಕ್ಕೆ ತಂದು ನೀನು ನಾಚಿಕೊಳ್ಳುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201961 ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ಮತ್ತು ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಪಿಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)61 ಇದಕ್ಕನುಸಾರ ನಾನು ಕುವರಿಯನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವರು. ಆಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಸಿಕೊಂಡು ನಾಚಿಕೆಪಡುವೆ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)61 ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ [ಹಿಂದಿನ] ಒಡಂಬಡಿಕೆಯ ಫಲವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ61 ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು, ನಿನ್ನ ಸಹೋದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವೆ. ಅವರನ್ನು ನಿನ್ನ ಪುತ್ರಿಯರಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆಯಿಂದಲ್ಲ. ಅಧ್ಯಾಯವನ್ನು ನೋಡಿ |
ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.
ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.