ಯೆಹೆಜ್ಕೇಲನು 17:10 - ಪರಿಶುದ್ದ ಬೈಬಲ್10 ಆ ಸಸಿಯು ನೆಟ್ಟಿದ ಸ್ಥಳದಲ್ಲಿ ಬೆಳೆಯುವುದೋ? ಇಲ್ಲ! ಪೂರ್ವದ ಬಿಸಿಗಾಳಿಯು ಬೀಸುವದು, ಆಗ ಸಸಿಯು ತಾನು ನೆಡಲ್ಪಟ್ಟಿದ್ದ ಸ್ಥಳದಲ್ಲೇ ಬಾಡಿಹೋಗಿ ಸಾಯುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಹಾ, ನಾಟಿಕೊಂಡಿದ್ದ ಆ ಲತೆಯು ಸಮೃದ್ಧವಾಗಿಯೇ ಇರುವುದೋ? ಮೂಡಣ ಗಾಳಿಯು ಬಡಿಯುವಾಗ ಬಾಡೇ ಬಾಡುವುದಲ್ಲವೇ? ಬೆಳೆದ ಪಾತಿಯಲ್ಲಿಯೇ ಒಣಗಿಹೋಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಾಟಿಕೊಂಡಿದ್ದ ಆ ಲತೆ ಸಮೃದ್ಧವಾಗಿಯೇ ಇರುವುದೇ? ಮೂಡಣಗಾಳಿ ಬಡಿಯುವಾಗ ಅದು ಖಂಡಿತವಾಗಿ ಬಾಡುವುದಲ್ಲವೆ? ಬೆಳೆದ ಪಾತಿಯಲ್ಲಿಯೇ ಅದು ಒಣಗಿಹೋಗುವುದಲ್ಲವೆ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಹಾ, ನಾಟಿಕೊಂಡಿದ್ದ ಆ ಲತೆಯು ಸಮೃದ್ಧವಾಗಿಯೇ ಇರುವದೋ? ಮೂಡಣ ಗಾಳಿಯು ಬಡಿಯುವಾಗ ಬಾಡೇ ಬಾಡುವದಲ್ಲವೆ; ಬೆಳೆದ ಪಾತಿಯಲ್ಲಿಯೇ ಒಣಗಿ ಹೋಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಹೌದು, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವುದೇ? ಅದಕ್ಕೆ ಪೂರ್ವದಿಕ್ಕಿನ ಗಾಳಿ ಬಡಿಯುವಾಗ ಅದು ಸಂಪೂರ್ಣವಾಗಿ ಒಣಗುವುದಿಲ್ಲವೇ? ಅದು ಮೊಳೆತ ಪಾತಿಗಳಲ್ಲಿಯೇ ಒಣಗಿ ಹೋಗುವುದಿಲ್ಲವೇ?’ ” ಅಧ್ಯಾಯವನ್ನು ನೋಡಿ |
ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ.
ನೀನು ಹೀಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ದ್ರಾಕ್ಷಾಲತೆಯು ಬದುಕಿ ಬೆಳೆಯುವುದೋ? ಇಲ್ಲ. ಮೊದಲನೆ ಹದ್ದು ದ್ರಾಕ್ಷಾಲತೆಗಳ ಬೇರುಗಳನ್ನು ಎಳೆದುಹಾಕಿ, ಅದರ ದ್ರಾಕ್ಷಿಹಣ್ಣುಗಳನ್ನು ಕಿತ್ತುಹಾಕುವುದು. ಆಗ ಚಿಗುರುಗಳು ಬಾಡಿ ಒಣಗಿಹೋಗುವವು. ಆ ಸಸಿಯು ಬಲಹೀನವಾಗುವುದು. ಆಗ ಅದನ್ನು ಬೇರುಸಹಿತ ಕಿತ್ತುಹಾಕಲು ಮಹಾ ಬಲವಾಗಲಿ ಅಥವಾ ದೊಡ್ಡಸೈನ್ಯವಾಗಲಿ ಅಗತ್ಯವಿರುವದಿಲ್ಲ.