13 ಯೆಹೂದದ ರಾಜನನ್ನಾಗಿ ಮಾಡುವುದಾಗಿ ನೆಬೂಕದ್ನೆಚ್ಚರನು ರಾಜನ ಕುಟುಂಬದವರಲ್ಲೊಬ್ಬನೊಡನೆ ಒಪ್ಪಂದಮಾಡಿಕೊಂಡು ತನಗೆ (ನೆಬೂಕದ್ನೆಚ್ಚರನಿಗೆ) ಆಧಿನವಾಗಿರುವದಾಗಿ ಅವನಿಂದ (ರಾಜನ ಕುಟುಂಬದವನಿಂದ) ಪ್ರಮಾಣ ಮಾಡಿಸಿಕೊಂಡನು. ಅವನು ಯೆಹೂದದ ಬಲಿಷ್ಠರೆಲ್ಲರನ್ನು ಸಹ ಈ ಒಪ್ಪಂದದಲ್ಲಿ ಸೇರಿಸಿದನು.
ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.
ನಂತರ ಆ ಹದ್ದು ದೇಶದ ಬೀಜಗಳಲ್ಲಿ ಒಂದನ್ನು (ಹಿಜ್ಕೀಯ) ತೆಗೆದುಕೊಂಡು ಅದನ್ನು ಒಳ್ಳೆಯ ಮಣ್ಣಿನಲ್ಲಿ ಬಿತ್ತಿತು; ಸಮೃದ್ಧಿಕರವಾದ ನೀರಿನ ಸಮೀಪದಲ್ಲಿ ಬೆಳೆಯುವ ನೀರವಂಜಿಯಂತೆ ಅದನ್ನು ಬೆಳೆಯಿಸಿತು.
(ರಾಜನಾದ ಯೆಹೋಯಾಕೀನನನ್ನು, ರಾಜಮಾತೆಯನ್ನು, ಯೆಹೂದದ ಮತ್ತು ಜೆರುಸಲೇಮಿನ ಅಧಿಕಾರಿಗಳನ್ನು, ಮುಂದಾಳುಗಳನ್ನು, ಬಡಗಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ತೆಗೆದುಕೊಂಡು ಹೋದ ಮೇಲೆ ಈ ಪತ್ರವನ್ನು ಕಳಿಸಲಾಯಿತು.)
ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)
ಅಮ್ಮೋನಿಯನಾದ ನಾಹಾಷನು ಒಂದು ತಿಂಗಳ ನಂತರ, ತನ್ನ ಸೈನ್ಯದೊಂದಿಗೆ ಯಾಬೇಷ್‌ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯಾಬೇಷಿನ ಜನರೆಲ್ಲ ನಾಹಾಷನಿಗೆ, “ನೀನು ನಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುವುದಾದರೆ, ನಾವು ನಿನ್ನ ಸೇವೆಮಾಡುತ್ತೇವೆ” ಎಂದು ಹೇಳಿದರು.
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನನ್ನ ಜೀವದಾಣೆ, ಈ ಹೊಸ ರಾಜನು ಬಾಬಿಲೋನಿನಲ್ಲಿ ಸಾಯುವನು. ಈ ಮನುಷ್ಯನನ್ನು ಯೆಹೂದದ ರಾಜನನ್ನಾಗಿ ಮಾಡಿದ ರಾಜ ನೆಬೂಕದ್ನೆಚ್ಚರನ ನಾಡಿನಲ್ಲಿ ಇವನು ಸಾಯುವನು. ಈ ಮನುಷ್ಯನು ಆ ರಾಜನೊಡನೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿ ಆ ರಾಜನೊಡನೆ ಮಾಡಿಕೊಂಡಿದ್ದ ಒಪ್ಪಂದವನ್ನು ಮುರಿದು ಹಾಕಿದನು.
ಅವರು ವಾಗ್ದಾನ ಮಾಡುತ್ತಾರೆ. ಆದರೆ ಅದು ಕೇವಲ ಸುಳ್ಳು, ಅವರು ಕೊಟ್ಟ ಮಾತನ್ನು ನಡಿಸುವದಿಲ್ಲ. ಬೇರೆ ದೇಶಗಳವರೊಂದಿಗೆ ಅವರು ಒಪ್ಪಂದ ಮಾಡುತ್ತಾರೆ. ದೇವರು ಆ ಒಪ್ಪಂದವನ್ನು ಒಪ್ಪುವುದಿಲ್ಲ. ಅವರ ನ್ಯಾಯಾಧೀಶರು ಉತ್ತ ಹೊಲದಲ್ಲಿ ಬೆಳೆಯುವ ವಿಷದ ಹಣಜಿಯಂತಿದ್ದಾರೆ.
ದೇವರು ಹೇಳಿದ್ದು, “ನರಪುತ್ರನೇ, ನನ್ನ ಪರವಾಗಿ ಜನರ ಕೂಡ ಮಾತನಾಡು. ‘ನನ್ನ ಒಡೆಯನಾದ ಯೆಹೋವನು ಅಮ್ಮೋನಿಯರ ಬಗ್ಗೆಯೂ ಅವರ ದೂಷಣೆಗಳ ಬಗ್ಗೆಯೂ ಹೀಗೆ ಹೇಳುತ್ತಾನೆ: “‘ನೋಡು, ಒಂದು ಖಡ್ಗ. ಆ ಖಡ್ಗವು ಒರೆಯಿಂದ ಹೊರಬಂದಿದೆ. ಆ ಖಡ್ಗವನ್ನು ಹರಿತಗೊಳಿಸಲಾಗಿದೆ ಮತ್ತು ನಯಗೊಳಿಸಲಾಗಿದೆ. ಖಡ್ಗವು ಕೊಲ್ಲಲು ಸಿದ್ಧವಾಗಿದೆ. ಮಿಂಚಿನಂತೆ ಹೊಳೆಯಲೆಂದು ಅದನ್ನು ನಯಗೊಳಿಸಲಾಗಿದೆ.