ಯೆಹೆಜ್ಕೇಲನು 17:19 - ಪರಿಶುದ್ದ ಬೈಬಲ್19 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಜೀವದಾಣೆ, ನಾನು ಯೆಹೂದದ ರಾಜನನ್ನು ಶಿಕ್ಷಿಸುವೆನು. ಯಾಕೆಂದರೆ ಅವನು ನನ್ನ ಮುಂದೆ ಮಾಡಿದ ಪ್ರಮಾಣಕ್ಕೆ ಗಮನಕೊಡಲಿಲ್ಲ ಮತ್ತು ನಾನು ಸಾಕ್ಷಿಯಾಗಿದ್ದ ಒಪ್ಪಂದವನ್ನು ಅವನು ಮುರಿದುಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ, ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಗೆ ಕಟ್ಟುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಯ ಮೇಲೆ ಹೊರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಗೆ ಕಟ್ಟುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ ನಿಶ್ಚಯವಾಗಿ ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ, ಅವನು ಮೀರಿದ ಒಡಂಬಡಿಕೆಯನ್ನೂ ಅವನ ತಲೆಯ ಮೇಲೆಯೇ ಹೊರಿಸುವೆನು. ಅಧ್ಯಾಯವನ್ನು ನೋಡಿ |
“‘ಆದರೆ ಈಗ ಕೆಲವು ಜನಾಂಗಗಳು ಅಥವಾ ರಾಜ್ಯಗಳು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಸೇವಿಸಲು ಒಪ್ಪಲಿಲ್ಲ. ಅವುಗಳು ಅವನ ನೊಗವನ್ನು ತಮ್ಮ ಕತ್ತಿನ ಮೇಲೆ ಇಟ್ಟುಕೊಳ್ಳಲು ಒಪ್ಪಲಿಲ್ಲ. ಆದ್ದರಿಂದ ನಾನು ಆ ಜನಾಂಗವನ್ನು ಖಡ್ಗ, ಹಸಿವು ಮತ್ತು ಭಯಂಕರ ವ್ಯಾಧಿಗಳಿಂದ ಶಿಕ್ಷಿಸುತ್ತೇನೆ, ಇದು ಯೆಹೋವನಿಂದ ಬಂದ ಸಂದೇಶ. ನಾನು ಆ ಜನಾಂಗವನ್ನು ನಾಶಗೊಳಿಸುವವರೆಗೂ ಹಾಗೆ ಮಾಡುವೆನು. ಅವನ ವಿರುದ್ಧ ಹೋರಾಡುವ ಜನಾಂಗವನ್ನು ನಾಶಮಾಡುವದಕ್ಕಾಗಿ ನಾನು ನೆಬೂಕದ್ನೆಚ್ಚರನನ್ನು ಉಪಯೋಗಿಸುತ್ತೇನೆ.
ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರೆಂದರೆ, ನೇರನ ಮಗನಾದ ಅಬ್ನೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ನೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಆ ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ.
ಇವೆಲ್ಲಾ ಯಾಕೆ ಸಂಭವಿಸಬೇಕು? ಯಾಕೆಂದರೆ ನೀನು ಎಳೆಯವಳಾಗಿದ್ದಾಗ ಏನು ಸಂಭವಿಸಿತೆಂದು ಮರೆತುಬಿಟ್ಟಿರುವೆ. ನೀನು ಕೆಟ್ಟಕೆಲಸಗಳನ್ನು ಮಾಡಿ ನಾನು ಕೋಪಿಸಿಕೊಳ್ಳುವಂತೆ ಮಾಡಿರುವೆ. ಆದ್ದರಿಂದ ಆ ಕೆಟ್ಟಕಾರ್ಯ ಮಾಡಿದ್ದಕ್ಕಾಗಿ ನಿನ್ನನ್ನು ಶಿಕ್ಷಿಸಬೇಕಾಗಿ ಬಂತು. ನೀನು ಅದಕ್ಕಿಂತಲೂ ಭಯಂಕರಕೃತ್ಯ ನಡಿಸಲು ಯೋಜನೆ ಹಾಕಿಕೊಂಡಿರುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.