ಯೆಹೆಜ್ಕೇಲನು 17:21 - ಪರಿಶುದ್ದ ಬೈಬಲ್21 ಅವನ ಸೈನ್ಯವನ್ನು ನಾಶಮಾಡುವೆನು. ಅವನಲ್ಲಿದ್ದ ಶೂರರನ್ನು ನಾಶಮಾಡುವೆನು. ಅಳಿದುಳಿದವರನ್ನು ಗಾಳಿ ಬೀಸುವ ಪ್ರತಿಯೊಂದು ದಿಕ್ಕಿನಲ್ಲಿಯೂ ಚದರಿಸಿಬಿಡುವೆನು. ಆಗ ಯೆಹೋವನಾದ ನಾನು ನಿಮಗೆ ಇದನ್ನು ಹೇಳಿದೆನೆಂದು ತಿಳಿಯುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲಾ ಕಡೆಯ ಗಾಳಿಗೂ ತೂರಿಬಿಡುವೆನು; ಈ ಮಾತನ್ನು ಆಡಿದವನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲ ಕಡೆಯ ಗಾಳಿಗೆ ತೂರಿಬಿಡುವೆನು; ಈ ಮಾತನ್ನು ಆಡಿದವನು ಸರ್ವೇಶ್ವರನಾದ ನಾನೇ ಎಂದು ನಿಮಗೆ ಗೊತ್ತಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ ಕತ್ತಿಯ ಬಾಯಿಗೆ ತುತ್ತಾಗುವವು; ಉಳಿದವರನ್ನು ಎಲ್ಲಾ ಕಡೆಯ ಗಾಳಿಗೂ ತೂರಿಬಿಡುವೆನು; ಈ ಮಾತನ್ನು ಆಡಿದವನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವನ ಸೈನ್ಯಗಳೆಲ್ಲಾ ಖಡ್ಗದಿಂದ ಬೀಳುವುದು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಹೋಗುವರು. ಆಗ ಯೆಹೋವ ದೇವರಾದ ನಾನೇ ಅದನ್ನು ಹೇಳಿದೆನೆಂದು ನಿಮಗೆ ತಿಳಿಯುವುದು. ಅಧ್ಯಾಯವನ್ನು ನೋಡಿ |
ಯಜ್ಞವೇದಿಕೆಯ ಬಳಿಯಲ್ಲಿ ನನ್ನ ಒಡೆಯನು ನಿಂತಿರುವುದನ್ನು ಕಂಡೆನು. ಆತನು ಹೇಳಿದ್ದೇನೆಂದರೆ, “ಸ್ತಂಭಗಳ ಮೇಲೆ ಹೊಡೆಯಿರಿ, ಆಗ ಕಟ್ಟಡವು ಹೊಸ್ತಿಲಿನ ತನಕ ಕಂಪಿಸುವದು. ಸ್ತಂಭಗಳು ಜನರ ತಲೆಗಳ ಮೇಲೆ ಕುಸಿದುಬೀಳುವಂತೆ ಮಾಡಿರಿ. ಅದರಿಂದ ಸಾಯದೆ ಉಳಿಯುವವರನ್ನು ನಾನು ಖಡ್ಗದಿಂದ ಸಾಯಿಸುವೆನು. ಅದರಿಂದ ತಪ್ಪಿಸಿಕೊಂಡು ಓಡಿಹೋಗಲು ಒಬ್ಬನು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಒಬ್ಬನಾದರೂ ತಪ್ಪಿಸಿಕೊಳ್ಳುವುದಿಲ್ಲ.