22 ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು: “ನಾನು ಎತ್ತರವಾದ ದೇವದಾರು ಮರದಿಂದ ಒಂದು ಕೊಂಬೆಯನ್ನು ಕೀಳುವೆನು. ಆ ಮರದ ಮೇಲಿರುವ ಒಂದು ಸಣ್ಣ ಕೊಂಬೆಯನ್ನು ಕೀಳುವೆನು. ಅದನ್ನು ನಾನು ಎತ್ತರವಾದ ಪರ್ವತದಲ್ಲಿ ನೆಡುವೆನು.
22 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನೇ ಎತ್ತರವಾದ ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ತೆಗೆದು ಅದನ್ನು ನೆಡುವೆನು; ತುಟ್ಟತುದಿಯ ಚಿಗುರುಗಳಲ್ಲಿ ಅತಿ ಕೋಮಲವಾದದ್ದನ್ನು ಚಿವುಟಿ ತಂದು, ಉನ್ನತೋನ್ನತವಾದ ಪರ್ವತದ ಮೇಲೆ ನೆಡುವೆನು.
22 ಸರ್ವೇಶ್ವರನಾದ ದೇವರ ವಾಣಿಯಿದು; ನಾನೇ ನೆಡುವೆನು ರೆಂಬೆಯೊಂದನು ಎತ್ತರದ ದೇವದಾರು ಮರದ ಮೇಲಿಂದ ತಂದು ತುಟ್ಟತುದಿಯ ಚಿಗುರುಗಳಲ್ಲೊಂದನ್ನು ತಂದು ಅತಿ ಕೋಮಲವಾದುದನ್ನು ಚಿವುಟಿ ತಂದು, ನೆಡುವೆನದನು ಉನ್ನತೋನ್ನತವಾದ ಪರ್ವತದಲ್ಲಿ.
22 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು. ಇದರ ತುದಿಯಲ್ಲಿರುವ ಎಳೆಯದಾದ ಕೊಂಬೆಯನ್ನು ಕತ್ತರಿಸಿ, ಎತ್ತರವಾದ ಪರ್ವತದ ಮೇಲೆ ನಾಟುವೆನು.
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಎತ್ತರವಾದ ನನ್ನ ಪವಿತ್ರಪರ್ವತಕ್ಕೆ ಜನರು ಬರಲೇಬೇಕು. ಅಲ್ಲಿ ಅವರು ನನ್ನ ಸೇವೆ ಮಾಡಲೇಬೇಕು. ಇಡೀ ಇಸ್ರೇಲ್ ಜನಾಂಗವು ತಮ್ಮ ದೇಶದಲ್ಲಿರುವುದು. ಅಲ್ಲಿ ನಾನು ಅವರನ್ನು ಸ್ವೀಕರಿಸಿಕೊಳ್ಳುವೆನು. ಅಲ್ಲಿ ನೀವು ನಿಮ್ಮ ಕಾಣಿಕೆಗಳನ್ನು ಪ್ರಥಮ ಫಲಗಳನ್ನು ಮತ್ತು ಎಲ್ಲಾ ಪವಿತ್ರ ಕಾಣಿಕೆಗಳನ್ನು ನನಗೆ ತರಬೇಕೆಂದು ಅಪೇಕ್ಷಿಸುತ್ತೇನೆ.
ಒಂದು ಸಣ್ಣ ಸಸಿಯು ಬೆಳೆಯುವ ರೀತಿಯಲ್ಲಿ ಯೆಹೋವನ ಮುಂದೆ ಆತನು ಬೆಳೆದನು. ಆತನು ಒಣ ನೆಲದಿಂದ ಚಿಗುರುವ ಬೇರಿನಂತಿದ್ದನು. ಆತನು ಒಬ್ಬ ವಿಶೇಷ ಪುರುಷನಂತೆ ತೋರಲಿಲ್ಲ. ಅಂಥ ಲಕ್ಷಣಗಳೇನೂ ಆತನಲ್ಲಿರಲಿಲ್ಲ. ನಾವು ಆತನನ್ನು ನೋಡಿದಾಗ ಆತನಲ್ಲಿ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.
ಪ್ರಧಾನ ಯಾಜಕನಾದ ಯೆಹೋಶುವನೇ, ಅವನೊಂದಿಗೆ ಸೇವೆಮಾಡುವ ಇತರ ಯಾಜಕರೇ, ನನ್ನ ಮಾತಿಗೆ ಕಿವಿಗೊಡಿರಿ. ಈ ಗಂಡಸರು ಮುಂದೆ ಏನಾಗಬಹುದೆಂಬುದಕ್ಕೆ ನಿದರ್ಶನವಾಗಿದ್ದಾರೆ. ಆಗ ನಾನು ನನ್ನ ವಿಶೇಷ ಸೇವಕನನ್ನು ಕರೆತರುವೆನು. ಆತನ ಹೆಸರು ಕೊಂಬೆ.
ಆಮೇಲೆ ಕಬ್ಬಿಣ, ಮಣ್ಣು, ಕಂಚು, ಬೆಳ್ಳಿ, ಚಿನ್ನ ಎಲ್ಲವೂ ಏಕಕಾಲಕ್ಕೆ ಒಡೆದು ಚೂರುಚೂರಾದವು. ಆ ಚೂರುಗಳೆಲ್ಲ ಬೇಸಿಗೆಕಾಲದ ಕಣದಲ್ಲಿನ ಹೊಟ್ಟಿನಂತಾದವು. ಗಾಳಿಯು ಆ ಚೂರುಗಳನ್ನು ಹಾರಿಸಿಕೊಂಡು ಹೋಯಿತು. ಅಲ್ಲಿ ಏನೂ ಉಳಿಯಲಿಲ್ಲ. ಹಿಂದೆಂದೂ ಅಲ್ಲೊಂದು ಪ್ರತಿಮೆ ಇತ್ತೆಂದು ಯಾರೂ ಹೇಳುವಂತಿರಲಿಲ್ಲ. ಆಮೇಲೆ ಆ ಪ್ರತಿಮೆಗೆ ಅಪ್ಪಳಿಸಿದ ಬಂಡೆಯು ಒಂದು ದೊಡ್ಡ ಪರ್ವತವಾಗಿ ಇಡೀ ಭೂಮಂಡಲವನ್ನು ವ್ಯಾಪಿಸಿತು.
ಆ ಸಮಯದಲ್ಲಿ ಯೆಹೋವನ ಸಸಿ (ಯೆಹೂದವು) ಬಹಳ ಚಂದವಾಗಿಯೂ ದೊಡ್ಡದಾಗಿಯೂ ಇರುವುದು. ಆ ಸಮಯದಲ್ಲಿ, ಚೀಯೋನಿನಲ್ಲಿ ಮತ್ತು ಜೆರುಸಲೇಮಿನಲ್ಲಿ ಇನ್ನೂ ವಾಸಿಸುತ್ತಿರುವ ಜನರು ತಮ್ಮ ದೇಶದಲ್ಲಿ ಬೆಳೆಯುವ ಫಲಗಳಿಗಾಗಿ ತುಂಬಾ ಹೆಚ್ಚಳಪಡುವರು.
ನಾನು ಅವರಿಗೆ ಭೂಮಿಯನ್ನು ಕೊಡುವೆನು. ಅದರಲ್ಲಿ ಅವರು ತೋಟವನ್ನು ಮಾಡುವರು. ಆ ನಾಡಿನಲ್ಲಿ ಅವರು ಇನ್ನೆಂದಿಗೂ ಹಸಿವೆಯಿಂದ ಸಂಕಟಪಡುವುದಿಲ್ಲ. ಇತರ ಜನಾಂಗದವರಿಂದ ಇನ್ನು ಮುಂದೆ ಅವಮಾನ ಹೊಂದುವುದಿಲ್ಲ.