ಯೆಹೆಜ್ಕೇಲನು 17:23 - ಪರಿಶುದ್ದ ಬೈಬಲ್23 ಸ್ವತಃ ನಾನೇ ಅದನ್ನು ಇಸ್ರೇಲಿನ ಉನ್ನತವಾದ ಪರ್ವತದ ಮೇಲೆ ನೆಡುವೆನು. ಅದು ಕೊಂಬೆಗಳನ್ನು ಬೆಳೆಸಿ, ಫಲವನ್ನು ಫಲಿಸಿ, ಅಮೋಘವಾದ ದೇವದಾರು ಮರವಾಗುವುದು; ಅದರ ಕೊಂಬೆಗಳ ಮೇಲೆ ಅನೇಕ ಬಗೆಯ ಪಕ್ಷಿಗಳು ವಾಸಿಸುವವು. ಅದರ ಕೊಂಬೆಯ ನೆರಳಿನಲ್ಲಿ ವಿವಿಧ ಬಗೆಯ ಪಕ್ಷಿಗಳು ವಾಸಿಸುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಾನು ಅದನ್ನು ಇಸ್ರಾಯೇಲಿನ ಉನ್ನತ ಪರ್ವತಾಗ್ರದಲ್ಲಿ ನೆಡಲು, ಅದು ಸೊಂಪಾದ ದೇವದಾರು ಮರವಾಗಿ ರೆಂಬೆಗಳನ್ನು ಹರಡಿ ಫಲಕೊಡುವುದು; ಅದರಲ್ಲಿ ಸಕಲವಿಧವಾದ ಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಹೌದು, ನೆಡುವೆನು ಇಸ್ರಯೇಲಿನಾ ಪರ್ವತಾಗ್ರದಲ್ಲಿ. ಆಗುವುದದು ಸೊಂಪಾದ ದೇವದಾರು ಮರ, ರೆಂಬೆಗಳನದು ಹರಡಿಕೊಂಡು ಕೊಡುವುದು ಫಲ. ಸಕಲವಿಧ ಪಕ್ಷಿಗಳು ವಾಸಿಸುವುವು ಅದರಲ್ಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಾನು ಅದನ್ನು ಇಸ್ರಾಯೇಲಿನ ಪರ್ವತಾಗ್ರದಲ್ಲಿ ನೆಡಲು ಅದು ಸೊಂಪಾದ ದೇವದಾರುಮರವಾಗಿ ರೆಂಬೆಗಳನ್ನು ಹರಡಿಸಿ ಫಲಕೊಡುವದು; ಅದರಲ್ಲಿ ಸಕಲವಿಧಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು. ಅದು ಕೊಂಬೆಗಳಲ್ಲಿ ಹುಟ್ಟಿಕೊಂಡು ಫಲಫಲಿಸುವುದು; ಸೊಂಪಾದ ದೇವದಾರು ಆಗುವುದು. ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಗಳೂ, ಅದರ ಕೊಂಬೆಗಳ ನೆರಳಿನ ಕೆಳಗೆ ವಾಸಮಾಡುವುವು. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಎತ್ತರವಾದ ನನ್ನ ಪವಿತ್ರಪರ್ವತಕ್ಕೆ ಜನರು ಬರಲೇಬೇಕು. ಅಲ್ಲಿ ಅವರು ನನ್ನ ಸೇವೆ ಮಾಡಲೇಬೇಕು. ಇಡೀ ಇಸ್ರೇಲ್ ಜನಾಂಗವು ತಮ್ಮ ದೇಶದಲ್ಲಿರುವುದು. ಅಲ್ಲಿ ನಾನು ಅವರನ್ನು ಸ್ವೀಕರಿಸಿಕೊಳ್ಳುವೆನು. ಅಲ್ಲಿ ನೀವು ನಿಮ್ಮ ಕಾಣಿಕೆಗಳನ್ನು ಪ್ರಥಮ ಫಲಗಳನ್ನು ಮತ್ತು ಎಲ್ಲಾ ಪವಿತ್ರ ಕಾಣಿಕೆಗಳನ್ನು ನನಗೆ ತರಬೇಕೆಂದು ಅಪೇಕ್ಷಿಸುತ್ತೇನೆ.