Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:24 - ಪರಿಶುದ್ದ ಬೈಬಲ್‌

24 “ಆಗ ಬೇರೆ ಮರಗಳಿಗೆ, ನಾನು ದೊಡ್ಡ ಮರಗಳನ್ನು ನೆಲಕ್ಕೆ ಬೀಳಿಸುವೆನೆಂತಲೂ, ಚಿಕ್ಕ ಮರಗಳನ್ನು ಉದ್ದವಾಗಿ ಬೆಳೆಯುವಂತೆ ಮಾಡುತ್ತೇನೆಂತಲೂ ಗೊತ್ತಾಗುವದು. ಹಸಿರು ಮರಗಳು ಒಣಗಿಹೋಗುವಂತೆಯೂ ಒಣಗಿಹೋದ ಮರಗಳು ಹಸಿರಾಗಿ ಬೆಳೆಯುವಂತೆಯೂ ನಾನು ಮಾಡುತ್ತೇನೆ. ನಾನೇ ಯೆಹೋವನು. ಇದನ್ನು ನಾನೇ ಹೇಳಿದ್ದೇನೆ; ಮತ್ತು ನಾನೇ ಇದನ್ನು ನೆರವೇರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರಗೊಳಿಸಿ, ಹಸುರಾದದ್ದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವವು. ಇದನ್ನು ಯೆಹೋವನಾದ ನಾನೇ ನುಡಿದು ನಡೆಸಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಶ್ರಯ ಪಡೆವುವು ಅದರ ರೆಂಬೆಗಳ ನೆರಳಲಿ, ಆಗ ತಿಳಿವುವು ವನದ ವೃಕ್ಷಗಳು: ಎತ್ತರವಾದ ಮರಗಳ ತಗ್ಗಿಸುವವನು ತಗ್ಗಾದುದನು ಎತ್ತರಪಡಿಸುವವನು ಹಸುರಾದುದನು ಒಣಗಿಸುವವನು ಒಣಗಿದುದನು ಚಿಗುರಿಸುವವನು ಸರ್ವೇಶ್ವರ ನಾನೇ ಎಂದು ಇದ ನುಡಿದವ ನಾನು, ನುಡಿದುದನು ನಡೆಸುವವ ನಾನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ ತಗ್ಗಾದದ್ದನ್ನು ಎತ್ತರಪಡಿಸಿ ಹಸುರಾದದ್ದನ್ನು ಒಣಗಿಸಿ ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲವೃಕ್ಷಗಳು ತಿಳಿಯುವವು; ಇದನ್ನು ಯೆಹೋವನಾದ ನಾನೇ ನುಡಿದು ನಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯೆಹೋವ ದೇವರಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರ ಪಡಿಸಿ, ಹಸುರಾಗಿರುವುದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ, ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವುದು. “ ‘ಯೆಹೋವ ದೇವರಾದ ನಾನೇ ಮಾತನಾಡಿ, ಅದನ್ನು ನಡೆಸಿದ್ದೇನೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:24
28 ತಿಳಿವುಗಳ ಹೋಲಿಕೆ  

“ದಾವೀದನ ಗುಡಾರವು ಕುಸಿದುಬಿದ್ದಿದೆ. ಆದರೆ ಆ ದಿವಸಗಳಲ್ಲಿ ತಿರುಗಿ ಅದನ್ನು ಮೇಲಕ್ಕೆತ್ತುವೆನು. ಗೋಡೆಯಲ್ಲಿರುವ ರಂಧ್ರಗಳನ್ನು ನಾನು ಸರಿಪಡಿಸುವೆನು. ಬಿದ್ದುಹೋದ ಕಟ್ಟಡಗಳನ್ನು ತಿರುಗಿ ಕಟ್ಟುವೆನು. ಮುಂಚೆ ಹೇಗಿತ್ತೋ ಹಾಗೆಯೇ ಇರುವದು.


“‘ನಾನೇ ಯೆಹೋವನು. ನಿನಗೆ ಶಿಕ್ಷೆಯು ಬರುವದು ಎಂದು ನಾನು ಹೇಳಿದರೆ ಅದು ಬರುವಂತೆ ನಾನು ಮಾಡುವೆನು. ನಾನು ದಂಡನೆಯನ್ನು ತಡೆಹಿಡಿಯುವುದಿಲ್ಲ. ನಾನು ನಿನ್ನನ್ನು ಬಿಟ್ಟುಬಿಡುವುದಿಲ್ಲ. ಅದರ ಬಗ್ಗೆ ನನ್ನ ಮನಸ್ಸನ್ನು ನಾನು ಮಾರ್ಪಡಿಸುವುದಿಲ್ಲ. ನಿನ್ನ ಕೆಟ್ಟಕಾರ್ಯಗಳಿಗಾಗಿ ನಾನು ನಿನ್ನನ್ನು ಶಿಕ್ಷಿಸುವೆನು.’ ನನ್ನ ಒಡೆಯನಾದ ಯೆಹೋವನು ಇದನ್ನು ನುಡಿದಿದ್ದಾನೆ.”


ಆದರೆ ಯೆಹೋವನು ಗರ್ವದ ನಗರವನ್ನು ನಾಶಮಾಡುವನು. ಅಲ್ಲಿ ವಾಸಿಸುವವರನ್ನು ಆತನು ಶಿಕ್ಷಿಸುತ್ತಾನೆ. ಯೆಹೋವನು ಆ ಉನ್ನತವಾದ ನಗರವನ್ನು ಧೂಳಿಗೆ ಹಾಕಿಬಿಡುವನು.


ನಾನು ನಿಮ್ಮನ್ನು ಶಿಕ್ಷಿಸಲು ಬಂದಾಗ ನೀವು ಧೈರ್ಯಶಾಲಿಗಳಾಗುವಿರಾ? ನಿಮ್ಮಲ್ಲಿ ಬಲವಿರುವದೋ? ನಾನೇ ಯೆಹೋವನು. ನಾನು ಹೇಳಿದ ಪ್ರಕಾರ ಮಾಡುವೆನು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಿನ್ನ ಮುಂಡಾಸವನ್ನು ತೆಗೆ! ನಿನ್ನ ಕಿರೀಟವನ್ನು ತೆಗೆ! ಈಗ ಇರುವಂತೆಯೇ ಸಂಗತಿಗಳು ಇರುವುದಿಲ್ಲ. ಮುಖ್ಯಾಧಿಕಾರಿಗಳು ತಗ್ಗಿಸಲ್ಪಡುವರು. ಈಗ ಸಾಧಾರಣ ವ್ಯಕ್ತಿಗಳಾಗಿರುವವರು ಪ್ರಮುಖ ನಾಯಕರುಗಳಾಗುವರು.


ಯಾಕೆಂದರೆ ನಾನೇ ಯೆಹೋವನು. ನನಗೆ ಇಷ್ಟಬಂದದ್ದನ್ನು ನಾನು ಹೇಳುವೆನು ಮತ್ತು ಆ ಸಂಗತಿಯು ನೆರವೇರುವುದು. ಅದಕ್ಕೆ ಹೆಚ್ಚು ಸಮಯಬೇಕಾಗದು. ಆ ಸಂಕಟಗಳು ಬೇಗನೇ ಬರುವವು; ನಿಮ್ಮ ಜೀವಮಾನ ಕಾಲದಲ್ಲಿಯೇ ಬರುವವು. ಓ ದಂಗೆಕೋರರಾದ ಜನರೇ, ನಾನು ಒಂದು ವಿಷಯದಲ್ಲಿ ಏನಾದರೂ ಹೇಳಿದರೆ ಆ ವಿಷಯವು ಸಂಭವಿಸುವಂತೆ ಮಾಡುವೆನು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.


ದೇವರು ಹೀನಸ್ಥಿತಿಯಲ್ಲಿರುವವರನ್ನು ಉನ್ನತಸ್ಥಿತಿಗೆ ಏರಿಸುವನು. ವ್ಯಥೆಯಿಂದಿರುವವರನ್ನು ಸಂತೋಷಗೊಳಿಸುವನು.


ಯೇಸುವು ಯಾಕೋಬನ ಜನರನ್ನು ಸದಾಕಾಲ ಆಳುವನು. ಆತನ ರಾಜ್ಯ ಎಂದಿಗೂ ಅಂತ್ಯವಾಗುವುದಿಲ್ಲ” ಎಂದು ಹೇಳಿದನು.


ಭೂಮಿಯೂ ಆಕಾಶವೂ ನಾಶವಾಗುತ್ತವೆ, ಆದರೆ ನಾನು ಹೇಳಿದ ಮಾತುಗಳು ನಾಶವಾಗುವುದೇ ಇಲ್ಲ!


ನೀನು ಅವನ ಜೀವಿತವನ್ನು ಮೊಟಕುಗೊಳಿಸಿ ಅವನಿಗೆ ಅವಮಾನ ಮಾಡಿದೆ.


ಆದರೆ ನೀನು ಅಭಿಷೇಕಿಸಿದ ರಾಜನ ಮೇಲೆ ನೀನು ಕೋಪಗೊಂಡಿದ್ದರಿಂದಲೇ ಅವನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಟ್ಟೆ.


ಆ ಗರ್ವಿಷ್ಠರ ಕಡೆಗೆ ನೋಡಿ ಅವರನ್ನು ದೀನರನ್ನಾಗಿ ಮಾಡು. ದುಷ್ಟರನ್ನು ಅವರು ನಿಂತಿರುವಲ್ಲಿಯೇ ಜಜ್ಜಿಹಾಕು.


ಭೂಮ್ಯಾಕಾಶಗಳು ನಾಶವಾಗುವವು; ಆದರೆ ನಾನು ಹೇಳಿದ ಮಾತುಗಳು ಎಂದಿಗೂ ನಾಶವಾಗುವುದಿಲ್ಲ!


ಮರುದಿನ ಮೋಶೆ ಗುಡಾರದೊಳಗೆ ಹೋಗಿ ನೋಡಲಾಗಿ ಲೇವಿಕುಲದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.


ಇಲ್ಲಿ ನೀನಿರುವ ಮುಖ್ಯ ಹುದ್ದೆಯಿಂದ ನಿನ್ನನ್ನು ತಳ್ಳಿಬಿಡುವೆನು. ನಿನ್ನ ಹೊಸ ಅರಸನು ನಿನ್ನನ್ನು ಆ ಹುದ್ದೆಯಿಂದ ತೆಗೆದುಬಿಡುವನು.


ಯೆಹೋವನ ನುಡಿಯು ನನಗೆ ಬಂತು. ಆತನು ಹೇಳಿದ್ದೇನೆಂದರೆ,


ದೇವರು ಹೇಳುವುದೇನೆಂದರೆ, “ಯೆಹೋವನಾದ ನಾನೇ ಹಾಳುಬಿದ್ದ ಆ ಕಟ್ಟಡಗಳನ್ನು ಮತ್ತೆ ಕಟ್ಟಿದೆನೆಂದೂ ಮತ್ತು ಬರಿದಾಗಿದ್ದ ಈ ದೇಶದಲ್ಲಿ ಬೆಳೆಯಿಸುವೆನೆಂದೂ ನಿನ್ನ ಸುತ್ತಲೂ ಇನ್ನೂ ಇರುವ ಜನಾಂಗಗಳು ತಿಳಿದುಕೊಳ್ಳುವವು. ನಾನೇ ಯೆಹೋವನು. ಇವುಗಳನ್ನು ನಾನೇ ಹೇಳಿದ್ದೇನೆ ಮತ್ತು ನಾನೇ ಇವುಗಳನ್ನು ನೆರವೇರಿಸುವೆನು.”


ಅನಂತರ ನೆಬೂಕದ್ನೆಚ್ಚರನನ್ನು ಜನರ ಮಧ್ಯದಿಂದ ಓಡಿಸಲಾಯಿತು. ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು. ಅವನು ಕಾಡುಕತ್ತೆಗಳ ಜೊತೆ ವಾಸಿಸಿದನು; ಹಸುಗಳಂತೆ ಹುಲ್ಲು ತಿಂದನು; ಮಂಜಿನಲ್ಲಿ ನೆನೆದನು. ಅವನಿಗೆ ಸರಿಯಾದ ಬುದ್ಧಿ ಬರುವತನಕ ಅವನು ಆ ಸ್ಥಿತಿಯಲ್ಲಿದ್ದನು. ಆಗ ಅವನು ಮಹೋನ್ನತನಾದ ದೇವರೇ ಮಾನವರ ಸಾಮ್ರಾಜ್ಯವನ್ನು ಆಳುತ್ತಾನೆ ಮತ್ತು ಆ ಸಾಮ್ರಾಜ್ಯಕ್ಕೆ ತನಗೆ ಬೇಕಾದವರನ್ನು ಅರಸರನ್ನಾಗಿ ನೇಮಿಸುತ್ತಾನೆ ಎಂಬುದನ್ನು ತಿಳಿದುಕೊಂಡನು.


ನಾನು ನನ್ನ ಆತ್ಮವನ್ನು ನಿಮ್ಮಲ್ಲಿ ಇಡುವೆನು, ಆಗ ನೀವು ತಿರುಗಿ ಜೀವ ಹೊಂದುವಿರಿ. ಅನಂತರ ನಿಮ್ಮನ್ನು ನಿಮ್ಮ ಸ್ವದೇಶಕ್ಕೆ ಬರಮಾಡುವೆನು. ಆಗ ನಾನೇ ಯೆಹೋವನೆಂದು ನೀವು ತಿಳಿಯುವಿರಿ. ನಾನು ಹೇಳಿದ್ದೆಲ್ಲ ಸಂಭವಿಸುತ್ತದೆ ಎಂದು ಆಗ ನಿಮಗೆ ತಿಳಿದು ಬರುವದು.’” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು