ಯೆಹೆಜ್ಕೇಲನು 17:3 - ಪರಿಶುದ್ದ ಬೈಬಲ್3 ಅವರಿಗೆ ಹೀಗೆ ಹೇಳು, ದೇವರಾದ ಯೆಹೋವನು ಹೀಗೆನ್ನುತ್ತಾನೆ: “‘ಅಗಲವಾದ ರೆಕ್ಕೆಗಳುಳ್ಳ ದೊಡ್ಡ ಹದ್ದು (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು) ಲೆಬನೋನಿಗೆ ಬಂದಿತು. ಅದರ ರೆಕ್ಕೆಗಳು ಅನೇಕ ಚುಕ್ಕೆಗಳನ್ನು ಹೊಂದಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಗಲವಾದ ಮತ್ತು ಉದ್ದವಾದ ರೆಕ್ಕೆಗಳಿಂದ ತುಂಬಿದ, ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತು ಹಾಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಗಲ ಹಾಗು ಉದ್ದವಾದ ರೆಕ್ಕೆಗಳುಳ್ಳ ವಿವಿಧ ವರ್ಣದ ಗರಿಗಳಿಂದ ಕೂಡಿದ ದೊಡ್ಡ ಹದ್ದೊಂದು ಲೆಬನೋನಿಗೆ ಬಂದು ದೇವದಾರು ಮರದ ಮೇಲ್ತುದಿಯ ರೆಂಬೆಯನ್ನು ಕಿತ್ತಿತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅಗಲವಾದ ಮತ್ತು ಉದ್ದವಾದ ರೆಕ್ಕೆಗಳುಳ್ಳ ತುಪ್ಪಳ ತುಂಬಿದ ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತಿತು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರಿಗೆ ಹೇಳತಕ್ಕದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಶಕ್ತಿಶಾಲಿ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ಮತ್ತು ವಿಧವಿಧವಾದ ಬಣ್ಣಬಣ್ಣದ ಪುಕ್ಕಗಳಿಂದ ತುಂಬಿದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಕೊಂಬೆಯನ್ನು ಹಿಡಿದು, ಅಧ್ಯಾಯವನ್ನು ನೋಡಿ |
ಎದೋಮೇ, ನೀನು ಬೇರೆ ಜನಾಂಗಗಳನ್ನು ಹೆದರಿಸಿದೆ. ಆದ್ದರಿಂದ ನೀನು ನಿನ್ನನ್ನೇ ಪ್ರಮುಖನೆಂದು ಭಾವಿಸಿಕೊಂಡೆ. ಆದರೆ ಅದು ನಿನ್ನ ಮೂರ್ಖತನ. ನಿನ್ನ ಅಹಂಭಾವ ನಿನಗೆ ಮೋಸಮಾಡಿದೆ. ಎದೋಮೇ, ನೀನು ಎತ್ತರದ ಬೆಟ್ಟಗಳಲ್ಲಿರುವೆ. ಬೆಟ್ಟಗುಡ್ಡಗಳಿಂದ ರಕ್ಷಿತವಾದ ಸ್ಥಳಗಳಲ್ಲಿ ನೀನು ವಾಸಿಸುವೆ. ಆದರೆ ರಣಹದ್ದು ಗೂಡುಕಟ್ಟುವಷ್ಟು ಎತ್ತರದ ಸ್ಥಳದಲ್ಲಿ ನೀನು ಮನೆಕಟ್ಟಿದರೂ ನಾನು ನಿನ್ನನ್ನು ಹಿಡಿಯುತ್ತೇನೆ. ಅಲ್ಲಿಂದ ನಿನ್ನನ್ನು ಕೆಳಗೆ ತರುತ್ತೇನೆ.” ಇದು ಯೆಹೋವನ ನುಡಿ.
ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)
ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.