Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:7 - ಪರಿಶುದ್ದ ಬೈಬಲ್‌

7 ಆಗ ಅಗಲ ರೆಕ್ಕೆಗಳಿದ್ದ ಇನ್ನೊಂದು ಹದ್ದು ದ್ರಾಕ್ಷಾಲತೆಯನ್ನು ನೋಡಿತು. ಈ ಹದ್ದಿಗೆ ತುಂಬಾ ಪುಕ್ಕಗಳಿದ್ದವು. ದ್ರಾಕ್ಷಾಲತೆಯು ತನ್ನ ಬೇರುಗಳನ್ನು ಹದ್ದಿನ ಕಡೆಗೆ ತಿರುಗಿಸಿತ್ತು. ಹದ್ದಿಗೆ ನೀರು ಹಾಯಿಸಲು ಸಾಧ್ಯವಾಗುವಂತೆ ಅದು ತನ್ನ ರೆಂಬೆಗಳನ್ನು ಹದ್ದಿನ ಕಡೆಗೆ ಚಾಚಿಕೊಂಡಿತ್ತು. ಅದು ತಾನು ನೆಡಲ್ಪಟ್ಟಿದ್ದ ಸ್ಥಳದಿಂದ ಬೇರೆ ಕಡೆಗೆ ತಿರುಗಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “‘ಅಗಲವಾದ ರೆಕ್ಕೆಗಳುಳ್ಳ ಗರಿ ತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆಯು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾಯಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಆದರೆ ಅಗಲವಾದ ರೆಕ್ಕೆಗಳುಳ್ಳ ಗರಿತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆ ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾಯಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಗಲವಾದ ರೆಕ್ಕೆಗಳುಳ್ಳ ತುಪ್ಪಳತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆಯು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾರೈಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ ‘ಶಕ್ತಿಶಾಲಿ ರೆಕ್ಕೆಗಳೂ, ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು. ಆಗ ಆ ದ್ರಾಕ್ಷಿ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅವನ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅವನ ಮೂಲಕ ನೀರನ್ನು ಪಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:7
7 ತಿಳಿವುಗಳ ಹೋಲಿಕೆ  

ನೀರು ಆ ಮರವನ್ನು ಬೆಳೆಯುವಂತೆ ಮಾಡಿತು. ನದಿಯು ಅದನ್ನು ಎತ್ತರವಾಗುವಂತೆ ಮಾಡಿತು. ಆ ಮರವು ನೆಡಲ್ಪಟ್ಟ ಸ್ಥಳದ ಸುತ್ತಲೂ ಹೊಳೆಯು ಹರಿಯುತ್ತಿದೆ. ಆ ಮರದಿಂದ ಬೇರೆ ಮರಗಳಿಗೆ ಸಣ್ಣ ಕಾಲುವೆಗಳು ಹೊರಡುತ್ತವೆ.


ಆದರೆ ಈ ಹೊಸ ರಾಜನು ನೆಬೂಕದ್ನೆಚ್ಚರನಿಗೆ ತಿರುಗಿ ಬೀಳಲು ಪ್ರಯತ್ನಿಸಿದನು. ಅವನು ಈಜಿಪ್ಟಿಗೆ ದೂತರನ್ನು ಕಳುಹಿಸಿ ಸಹಾಯವನ್ನು ಕೇಳಿದನು. ಬಹಳ ಕುದುರೆಗಳನ್ನೂ ಸೈನಿಕರನ್ನೂ ಕೇಳಿದನು. ಯೆಹೂದದ ಹೊಸ ರಾಜನು ತನ್ನ ಪ್ರಯತ್ನದಲ್ಲಿ ಜಯಶಾಲಿಯಾಗುವನು ಎಂದು ಭಾವಿಸುವಿರೋ? ಈ ಹೊಸ ರಾಜನು ಒಪ್ಪಂದವನ್ನು ಮುರಿದು ಶಿಕ್ಷೆಯಿಂದ ಪಾರಾಗುವನೆಂದು ನೀವು ಭಾವಿಸುವಿರೋ?”


ಅವರು ಕುಟುಂಬದ ನಾಯಕರಾಗಿದ್ದು ಅವರ ಅಧೀನದಲ್ಲಿ ಯುದ್ಧವೀರರಾದ ಮೂರು ಲಕ್ಷದ ಏಳು ಸಾವಿರದ ಐನೂರು ಸೈನಿಕರಿದ್ದರು. ಇವರು ವೈರಿಯೊಂದಿಗೆ ಕಾದಾಡಿ ಅರಸನಿಗೆ ಜಯಗಳಿಸಿದರು.


ಯೆಹೋವನ ಕೋಪದಿಂದ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ ಇವೆಲ್ಲವೂ ಸಂಭವಿಸಿದವು. ಹೀಗೆ ಯೆಹೋವನು ಅವರನ್ನು ತನ್ನಿಂದ ದೂರಸರಿಸಿದನು. ಚಿದ್ಕೀಯನು ಬಾಬಿಲೋನ್ ರಾಜನಿಗೆ ವಿರುದ್ಧವಾಗಿ ದಂಗೆ ಎದ್ದನು.


ಆ ಬೀಜವು ಚಿಗುರಿ, ಚಿಕ್ಕ ಜಾತಿಯ ದ್ರಾಕ್ಷಾಲತೆಯಂತೆ ನೆಲದ ಮೇಲೆ ಹಬ್ಬಿಕೊಂಡು, ತನ್ನ ಕೊಂಬೆಗಳನ್ನು ಗರುಡದ ಕಡೆಗೆ ಚಾಚಿಕೊಂಡು ತನ್ನ ಬೇರುಗಳನ್ನು ಬಿಟ್ಟಿತು: ಅಂತೆಯೇ ಅದು ಲತೆಯಾಗಿ ಕೊಂಬೆಗಳನ್ನು ಬೆಳೆಸಿ, ಎಲೆಗಳನ್ನು ಹೊರಡಿಸಿತು.


ಆ ದ್ರಾಕ್ಷಾಲತೆಯು ಸಮೃದ್ಧಿಕರವಾಗಿ ನೀರಿದ್ದ ಒಳ್ಳೆಯ ಭೂಮಿಯಲ್ಲಿ ನೆಡಲ್ಪಟ್ಟಿತ್ತು. ಕೊಂಬೆಗಳನ್ನು ಬೆಳೆಸಿ, ಹಣ್ಣುಗಳನ್ನು ಫಲಿಸಿ ಅಮೋಘವಾದ ದ್ರಾಕ್ಷಾಲತೆಯಾಗಬೇಕೆಂಬುದು ಅದರ ಬಯಕೆಯಾಗಿತ್ತು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು