ಯೆಹೆಜ್ಕೇಲನು 17:9 - ಪರಿಶುದ್ದ ಬೈಬಲ್9 ನೀನು ಹೀಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ದ್ರಾಕ್ಷಾಲತೆಯು ಬದುಕಿ ಬೆಳೆಯುವುದೋ? ಇಲ್ಲ. ಮೊದಲನೆ ಹದ್ದು ದ್ರಾಕ್ಷಾಲತೆಗಳ ಬೇರುಗಳನ್ನು ಎಳೆದುಹಾಕಿ, ಅದರ ದ್ರಾಕ್ಷಿಹಣ್ಣುಗಳನ್ನು ಕಿತ್ತುಹಾಕುವುದು. ಆಗ ಚಿಗುರುಗಳು ಬಾಡಿ ಒಣಗಿಹೋಗುವವು. ಆ ಸಸಿಯು ಬಲಹೀನವಾಗುವುದು. ಆಗ ಅದನ್ನು ಬೇರುಸಹಿತ ಕಿತ್ತುಹಾಕಲು ಮಹಾ ಬಲವಾಗಲಿ ಅಥವಾ ದೊಡ್ಡಸೈನ್ಯವಾಗಲಿ ಅಗತ್ಯವಿರುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಈ ಮಾತನ್ನು ನುಡಿ, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅದು ಸಮೃದ್ಧವಾಗಿಯೇ ಇರುವುದೋ? ಅದನ್ನು ನಾಟಿದ ಹದ್ದು ಅದರ ಬೇರುಗಳನ್ನು ಕಿತ್ತು, ಅದರ ಫಲವನ್ನು ಕಡಿದುಬಿಡಲು ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವುದಲ್ಲವೆ? ಅದು ಬೇರು ಸಹಿತ ಕೀಳಲ್ಪಡುವುದು; ಬಹಳ ಬಲದಿಂದಲ್ಲ, ಬಹಳ ಜನರಿಂದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ಈ ಮಾತನ್ನು ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅದು ಯಾವಾಗಲು ಸಮೃದ್ಧವಾಗಿಯೆ ಇರುವುದೇ? ಅದನ್ನು ನಾಟಿದ ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಫಲವನ್ನು ಕಡಿದುಬಿಡುವುದು . ಆಗ ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವುದಲ್ಲವೆ? ಅದನ್ನು ಬೇರುಸಹಿತ ಕೀಳಲು ಹೆಚ್ಚು ಬಲಬೇಕಾಗಿಲ್ಲ , ಬಹುಜನರ ಅಗತ್ಯವಿಲ್ಲ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಈ ಮಾತನ್ನು ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅದು ಸಮೃದ್ಧವಾಗಿಯೇ ಇರುವದೋ? ಅದನ್ನು ನಾಟಿದ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಫಲವನ್ನು ಕಡಿದುಬಿಡಲು ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವವಲ್ಲವೆ; ಅದು ಬೇರುಸಹಿತ ಕೀಳಲ್ಪಡುವದು; ಬಹು ಬಲದಿಂದಲ್ಲ, ಬಹು ಜನರಿಂದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಅವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದು ಸಮೃದ್ಧಿಯಾಗಿರುವುದೋ? ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ, ಅದು ಒಣಗುವುದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿ ಹೋದಾಗ, ಅದನ್ನು ಬೇರುಸಹಿತ ಕೀಳಬೇಕಾದರೆ ಮಹಾಬಲವಾಗಲಿ ಅಥವಾ ಬಹಳ ಜನರಾಗಲಿ ಇರಬೇಕಿಲ್ಲ. ಅಧ್ಯಾಯವನ್ನು ನೋಡಿ |