Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:10 - ಪರಿಶುದ್ದ ಬೈಬಲ್‌

10 “ಆದರೆ ಒಂದುವೇಳೆ ಆ ನೀತಿವಂತನ ಮಗನು ಒಳ್ಳೆಯ ಕಾರ್ಯಗಳನ್ನು ಮಾಡದೆ ದರೋಡೆ ಮಾಡುವವನೂ ಕೊಲೆಮಾಡುವವನೂ ಆಗಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಇಂಥವನನ್ನು ಪಡೆದ ಮಗನು, ಈಗ ಹೇಳಿದ ದುಷ್ಕೃತ್ಯಗಳಲ್ಲಿ ಯಾವುದನ್ನಾದರೂ ನಡೆಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇಂಥವನು ಪಡೆದ ಮಗನು, ಈಗ ಹೇಳಿದ ದುಷ್ಕೃತ್ಯಗಳಲ್ಲಿ ಯಾವುದನ್ನಾದರೂ ನಡೆಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಂಥವನು ಪಡೆದ ಮಗನು ಈಗ ಹೇಳಿದ ದುಷ್ಕೃತ್ಯಗಳಲ್ಲಿ ಯಾವದನ್ನಾದರೂ ನಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಒಂದು ವೇಳೆ ಇಂಥವನು ಪಡೆದ ಮಗನು, ಈಗ ಹೇಳಿದ ದುಷ್ಕೃತ್ಯಗಳಲ್ಲಿ ಯಾವುದನ್ನಾದರೂ ನಡೆಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:10
11 ತಿಳಿವುಗಳ ಹೋಲಿಕೆ  

“ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನೂ ಕೊಲ್ಲಲ್ಪಡಬೇಕು.


ನೀವು ಕಾಯಿನನಂತಿರಬೇಡಿ. ಅವನು ಕೆಡುಕನಿಗೆ ಸೇರಿದವನಾಗಿದ್ದನು. ಅವನು ತನ್ನ ತಮ್ಮನನ್ನು (ಹೇಬೆಲ) ಕೊಂದುಹಾಕಿದನು. ಅವನು ತನ್ನ ತಮ್ಮನನ್ನು ಕೊಂದದ್ದೇಕೆ? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ಒಳ್ಳೆಯವುಗಳೂ ಆಗಿದ್ದರಿಂದಲೇ.


ಯೆಹೂದ್ಯರು, “ಇಲ್ಲ, ಅವನನ್ನಲ್ಲ! ಬರಬ್ಬನಿಗೆ ಬಿಡುಗಡೆಯಾಗಲಿ!” ಎಂದು ಕೂಗಿದರು. (ಬರಬ್ಬನು ಒಬ್ಬ ದರೋಡೆಕೋರ.)


“ಮರಣಶಿಕ್ಷೆಗೆ ಒಳಗಾಗಿರುವ ಕೊಲೆಪಾತಕನನ್ನು ಉಳಿಸಲು ನೀವು ಯಾವ ಈಡನ್ನೂ ತೆಗೆದುಕೊಳ್ಳಕೂಡದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.


“ನಿಮ್ಮ ನೆರೆಯವನಿಗೆ ಕೆಡುಕುಗಳನ್ನು ಮಾಡಬಾರದು. ನೀವು ಅವನನ್ನು ಸುಲಿಗೆ ಮಾಡಬಾರದು. ನಿಮ್ಮ ಕೂಲಿಯವರ ಕೂಲಿಯನ್ನು ಮರುದಿನದ ಮುಂಜಾನೆಯವರೆಗೆ ಹಿಡಿದಿಟ್ಟುಕೊಳ್ಳಬಾರದು.


ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ, ಅವನು ಗುಲಾಮನಾಗುವನು. ಆದರೆ ಆ ಕಳ್ಳನು ಪಶುವನ್ನು ಇನ್ನೂ ಇಟ್ಟುಕೊಂಡಿರುವುದು ನಿಮಗೆ ಗೊತ್ತಾದರೆ, ಅವನು ಕದ್ದ ಪಶುವಿಗೆ ಪ್ರತಿಯಾಗಿ ಎರಡು ಪಶುಗಳನ್ನು ಮಾಲೀಕನಿಗೆ ಕೊಡಿಸಬೇಕು. ಕದ್ದದ್ದು ಎತ್ತಾಗಿರಬಹುದು, ಕತ್ತೆಯಾಗಿರಬಹುದು ಅಥವಾ ಕುರಿಯಾಗಿರಬಹುದು. “ಕಳ್ಳನು ರಾತ್ರಿಯಲ್ಲಿ ಮನೆಗೆ ಕನ್ನ ಹಾಕಲು ಪ್ರಯತ್ನಿಸುತ್ತಿರುವಾಗ ಕೊಲ್ಲಲ್ಪಟ್ಟರೆ, ಅವನನ್ನು ಕೊಂದದ್ದಕ್ಕೆ ಯಾರೂ ತಪ್ಪಿತಸ್ಧರಾಗುವುದಿಲ್ಲ. ಆದರೆ ಇದು ಹಗಲಿನಲ್ಲಿ ನಡೆದರೆ ಕೊಂದವನು ಕೊಲೆಗಾರನಾಗುವನು.


ಅವನು ನನ್ನ ನಿಯಮಗಳಿಗನುಸಾರವಾಗಿ ಜೀವಿಸುವನು ಮತ್ತು ನನ್ನ ಕಟ್ಟಳೆಗಳಿಗೆ ನಂಬಿಗಸ್ತಿಕೆಯಿಂದ ವಿಧೇಯನಾಗುವನು. ಅಂಥಾ ಮನುಷ್ಯನು ನೀತಿವಂತನಾಗಿದ್ದಾನೆ ಮತ್ತು ಅವನು ಖಂಡಿತವಾಗಿಯೂ ಬದುಕುವನು.


ಅವನ ತಂದೆಯು ಈ ಪಾಪಗಳಿಂದ ದೂರವಿದ್ದಾಗ್ಯೂ, ಮಗನು ಈ ಪಾಪಗಳಲ್ಲಿ ಪ್ರತಿಯೊಂದನ್ನೂ ಮಾಡಿದ್ದಿರಬಹುದು. ಅವನು ಬೆಟ್ಟದ ಮೇಲೆ ಹೋಗಿ ಅಲ್ಲಿ ವಿಗ್ರಹಗಳಿಗರ್ಪಿಸಿದ ನೈವೇದ್ಯದಲ್ಲಿ ಪಾಲು ತೆಗೆದುಕೊಳ್ಳಬಹುದು. ಆ ಕೆಟ್ಟ ಮಗನು ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ನಡೆಸಿದ್ದಿರಬಹುದು.


ಆದರೆ ಎಫ್ರಾಯೀಮನು ಯೆಹೋವನನ್ನು ಅತಿಯಾಗಿ ಕೋಪಿಸಿಕೊಳ್ಳುವಂತೆ ಮಾಡಿದನು. ಎಫ್ರಾಯೀಮನು ಅನೇಕ ಮಂದಿಯನ್ನು ಕೊಲೆ ಮಾಡಿದನು. ಅವನ ಅಪರಾಧಗಳಿಗಾಗಿ ಅವನು ಶಿಕ್ಷಿಸಲ್ಪಡುವನು. ಅವನ ದೇವರಾದ ಯೆಹೋವನು ಅವನು ಮಾಡಿದ ಅಪರಾಧಕ್ಕೆ ತಕ್ಕ ದಂಡನೆಯನ್ನು ವಿಧಿಸಿ ಅವಮಾನ ಹೊರುವಂತೆ ಮಾಡುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು