Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:11 - ಪರಿಶುದ್ದ ಬೈಬಲ್‌

11 ಅವನ ತಂದೆಯು ಈ ಪಾಪಗಳಿಂದ ದೂರವಿದ್ದಾಗ್ಯೂ, ಮಗನು ಈ ಪಾಪಗಳಲ್ಲಿ ಪ್ರತಿಯೊಂದನ್ನೂ ಮಾಡಿದ್ದಿರಬಹುದು. ಅವನು ಬೆಟ್ಟದ ಮೇಲೆ ಹೋಗಿ ಅಲ್ಲಿ ವಿಗ್ರಹಗಳಿಗರ್ಪಿಸಿದ ನೈವೇದ್ಯದಲ್ಲಿ ಪಾಲು ತೆಗೆದುಕೊಳ್ಳಬಹುದು. ಆ ಕೆಟ್ಟ ಮಗನು ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ನಡೆಸಿದ್ದಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಒಳ್ಳೆಕಾರ್ಯಗಳಲ್ಲಿ ಯಾವುದನ್ನೂ ನಡೆಸದೆ ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದು ನೆರೆಯವನ ಹೆಂಡತಿಯನ್ನು ಕೆಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸುಕೃತ್ಯಗಳಲ್ಲಿ ಯಾವುದನ್ನೂ ನಡೆಸದೆ ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದು, ನೆರೆಯವನ ಹೆಂಡತಿಯನ್ನು ಕೆಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸುಕೃತ್ಯಗಳಲ್ಲಿ ಯಾವದನ್ನೂ ನಡಿಸದೆ ಗುಡ್ಡಗಳ ಮೇಲೆ [ಯಜ್ಞಶೇಷವನ್ನು] ತಿಂದು ನೆರೆಯವನ ಹೆಂಡತಿಯನ್ನು ಕೆಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸುಕೃತ್ಯಗಳಲ್ಲಿ ಯಾವುದನ್ನೂ ನಡೆಸದೆ, “ಪರ್ವತಗಳ ಪೂಜಾಸ್ಥಳಗಳಲ್ಲಿ ತಿಂದು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:11
15 ತಿಳಿವುಗಳ ಹೋಲಿಕೆ  

“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡ ಜನರೇ ಧನ್ಯರು. ಅವರು ಜೀವವೃಕ್ಷದ ಹಣ್ಣನ್ನು ತಿನ್ನಲು ಹಕ್ಕುಳ್ಳವರಾಗಿದ್ದಾರೆ. ಅವರು ಬಾಗಿಲುಗಳ ಮೂಲಕ ನಗರದೊಳಕ್ಕೆ ಹೋಗಬಲ್ಲರು.


ಮತ್ತು ನಾವು ಕೇಳಿಕೊಳ್ಳುವವುಗಳನ್ನು ದೇವರು ನಮಗೆ ನೀಡುತ್ತಾನೆ. ನಾವು ಆತನಿಗೆ ವಿಧೇಯರಾಗಿರುವುದರಿಂದ ಮತ್ತು ಆತನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡುವುದರಿಂದ ಅವುಗಳನ್ನು ಆತನಿಂದ ಪಡೆದುಕೊಳ್ಳುತ್ತೇವೆ.


ಇದೇ ನಿಯಮ ನಂಬಿಕೆಗೂ ಅನ್ವಯಿಸುತ್ತದೆ. ಕ್ರಿಯೆಯಿಲ್ಲದ ನಂಬಿಕೆಯು ತನ್ನಲ್ಲಿಯೇ ಸತ್ತುಹೋಗಿದೆ.


ನೀವು ನನ್ನಿಂದ ಕಲಿತುಕೊಂಡದ್ದನ್ನು, ಹೊಂದಿಕೊಂಡದ್ದನ್ನು, ಕೇಳಿದ್ದನ್ನು ಮತ್ತು ಕಣ್ಣಾರೆ ಕಂಡದ್ದನ್ನು ಮಾಡಿರಿ. ಆಗ, ಶಾಂತಿಯನ್ನು ಕೊಡುವ ದೇವರು ನಿಮ್ಮೊಂದಿಗಿರುವನು.


ನಾನು ಹೇಳುವ ಕಾರ್ಯಗಳನ್ನು ನೀವು ಮಾಡಿದರೆ, ನೀವು ನನ್ನ ಸ್ನೇಹಿತರು.


ನೀವು ಈ ಸಂಗತಿಗಳನ್ನು ತಿಳಿದುಕೊಂಡು ಇವುಗಳನ್ನು ಕೈಕೊಂಡು ನಡೆದರೆ ಸಂತೋಷದಿಂದಿರುವಿರಿ.


ಆದರೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದಕ್ಕೆ ವಿಧೇಯರಾಗುವ ಜನರೇ ಭಾಗ್ಯವಂತರು!” ಎಂದನು.


ಈ ಒಳ್ಳೆಯ ಮಗನು ಬೆಟ್ಟಕ್ಕೆ ಹೋಗಿ ಅಲ್ಲಿ ವಿಗ್ರಹಗಳಿಗೆ ಅರ್ಪಿಸಿದ ನೈವೇದ್ಯವನ್ನು ತಿನ್ನುವುದಿಲ್ಲ. ಅವನು ಇಸ್ರೇಲಿನ ಹೊಲಸು ವಿಗ್ರಹಗಳಿಗೆ ಪ್ರಾರ್ಥಿಸುವುದಿಲ್ಲ. ಅವನು ತನ್ನ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡುವುದಿಲ್ಲ.


ಈ ಸ್ಥಳದಲ್ಲಿ ನೀನು ಅನ್ನಪಾನಗಳನ್ನು ತೆಗೆದುಕೊಳ್ಳಕೂಡದೆಂದು ಯೆಹೋವನು ನಿನಗೆ ಆಜ್ಞಾಪಿಸಿದ್ದನು. ಆದರೆ ನೀನು ಹಿಂದಿರುಗಿಬಂದು ಅನ್ನಪಾನಗಳನ್ನು ತೆಗೆದುಕೊಂಡೆ. ಆದ್ದರಿಂದ ನಿನ್ನ ವಂಶದ ಸ್ಮಶಾನದಲ್ಲಿ ನಿನ್ನ ದೇಹವನ್ನು ಸಮಾಧಿಮಾಡಲಾಗುವುದಿಲ್ಲ ಎಂದು ಯೆಹೋವನು ಹೇಳುತ್ತಾನೆ” ಎಂದನು.


ಆದರೆ ದೇವಮನುಷ್ಯನು ರಾಜನಿಗೆ, “ನಾನು ನಿನ್ನೊಡನೆ ಮನೆಗೆ ಬರುವುದಿಲ್ಲ! ನೀನು ನಿನ್ನ ಅರ್ಧರಾಜ್ಯವನ್ನು ಕೊಟ್ಟರೂ ನಾನು ಬರುವುದಿಲ್ಲ! ನಾನು ಈ ಸ್ಥಳದಲ್ಲಿ ಏನನ್ನೂ ತಿನ್ನುವುದಿಲ್ಲ ಮತ್ತು ಕುಡಿಯುವುದಿಲ್ಲ.


ಅಧರ್ಮಿಗಳು ದೇವರ ರಾಜ್ಯವನ್ನು ಪಡೆಯುವುದಿಲ್ಲವೆಂದು ನಿಮಗೆ ಖಂಡಿತವಾಗಿ ತಿಳಿದಿದೆ. ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿ. ದೇವರ ರಾಜ್ಯಕ್ಕೆ ಸೇರದ ಜನರು ಯಾರ್ಯಾರೆಂದರೆ: ಲೈಂಗಿಕ ಪಾಪ ಮಾಡುವವರು, ವಿಗ್ರಹಗಳನ್ನು ಪೂಜಿಸುವವರು, ವ್ಯಭಿಚಾರ ಮಾಡುವವರು, ಸಲಿಂಗಕಾಮಿಗಳು, ಕದಿಯುವವರು, ಸ್ವಾರ್ಥಿಗಳು, ಕುಡುಕರು, ಬೈಯುವವರು ಮತ್ತು ಮೋಸಗಾರರು.


“ಆದರೆ ಒಂದುವೇಳೆ ಆ ನೀತಿವಂತನ ಮಗನು ಒಳ್ಳೆಯ ಕಾರ್ಯಗಳನ್ನು ಮಾಡದೆ ದರೋಡೆ ಮಾಡುವವನೂ ಕೊಲೆಮಾಡುವವನೂ ಆಗಿರಬಹುದು.


ಇಂತಹ ಪಾಪಗಳನ್ನು ತಮ್ಮ ನೆರೆಯವನ ಹೆಂಡತಿಯೊಂದಿಗೆ ನಡಿಸುತ್ತಾರೆ. ಒಬ್ಬನು ತನ್ನ ಸ್ವಂತ ಸೊಸೆಯೊಂದಿಗೆ ಮಲಗಿ ಆಕೆಯನ್ನು ಅಶುದ್ಧಳನ್ನಾಗಿ ಮಾಡಿದನು. ಮತ್ತೊಬ್ಬನು ತನ್ನ ತಂದೆಯ ಮಗಳು, ತನ್ನ ತಂಗಿಯನ್ನೇ ಬಲವಂತದಿಂದ ಕೆಡಿಸಿರುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು