Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:13 - ಪರಿಶುದ್ದ ಬೈಬಲ್‌

13 ಆ ಕೆಟ್ಟ ಮಗನಿಂದ ಯಾರಾದರೂ ಸಾಲ ತೆಗೆದುಕೊಂಡಿದ್ದರೆ ಅವನು ಅವರಿಂದ ಬಡ್ಡಿಯನ್ನು ಕಡ್ಡಾಯವಾಗಿ ವಸೂಲು ಮಾಡಿದ್ದಿರಬಹುದು. ಹೀಗಿರುವದರಿಂದ ಆ ಕೆಟ್ಟ ಮಗನು ಹೆಚ್ಚುಕಾಲ ಬದುಕುವುದಿಲ್ಲ. ಅವನು ಭಯಂಕರ ಕೃತ್ಯಗಳನ್ನು ಮಾಡಿರುವದರಿಂದ ಕೊಲ್ಲಲ್ಪಡುವನು. ಅವನ ಮರಣಕ್ಕೆ ಅವನೇ ಜವಾಬ್ದಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿತೆಗೆದು, ಲಾಭಕ್ಕೆ ಹಣಕೊಟ್ಟು, ಬಲಾತ್ಕಾರಿಯೂ ಮತ್ತು ರಕ್ತಸುರಿಸುವವನೂ ಆಗಿದ್ದರೆ ಜೀವಿಸುವನೇ? ಖಂಡಿತ ಜೀವಿಸುವುದಿಲ್ಲ; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ಖಂಡಿತ; ತನ್ನ ಮರಣ ದಂಡನೆಗೆ ತಾನೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿ ತೆಗೆದು, ಲಾಭಕ್ಕೆ ಹಣಕೊಟ್ಟು, ಹಿಂಸಾಚಾರಿಯೂ, ರಕ್ತಸುರಿಸುವವನೂ ಆಗಿದ್ದರೆ, ಜೀವಿಸುವನೇ? ಖಂಡಿತ ಜೀವಿಸನು; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸಾಲಕ್ಕೆ ಬಡ್ಡಿತೆಗೆದು ಲಾಭಕ್ಕೆ ಹಣಕೊಟ್ಟು ಬಲಾತ್ಕಾರಿಯೂ ರಕ್ತ ಸುರಿಸುವವನೂ ಆಗಿದ್ದರೆ ಬಾಳುವನೇ? ಬಾಳಲೇ ಬಾಳನು; ಈ ದುರಾಚಾರಗಳನ್ನೆಲ್ಲಾ ನಡಿಸಿದನಲ್ಲಾ; ಸತ್ತೇ ಸಾಯುವನು; ತನ್ನ ಮರಣದಂಡನೆಗೆ ತಾನೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭ ಪಡೆಯುವವನು ಆಗಿದ್ದರೆ, ಅವನು ಬದುಕುವನೋ? ಅವನು ಬದುಕುವುದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿದ್ದರಿಂದ ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:13
15 ತಿಳಿವುಗಳ ಹೋಲಿಕೆ  

ಅವನು ಸಾಲ ಕೊಡುವಾಗ ಬಡ್ಡಿಹಾಕುವುದಿಲ್ಲ. ಅವನು ಕೆಡುಕುಗಳನ್ನು ಮಾಡುವುದಿಲ್ಲ. ಅವನು ತನ್ನ ವ್ಯವಹಾರಗಳಲ್ಲಿ ಪ್ರತಿಯೊಬ್ಬನೊಂದಿಗೂ ಯಥಾರ್ಥವಾಗಿಯೂ ನ್ಯಾಯವಾಗಿಯೂ ಇರುವನು.


ನಾನು ದುಷ್ಟನಿಗೆ, ‘ನೀನು ಸಾಯುವೆ’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸಬೇಕು. ಅವನು ತನ್ನ ಪ್ರಾಣವನ್ನು ರಕ್ಷಿಸಿಕೊಳ್ಳುವದಕ್ಕಾಗಿ ತನ್ನ ಜೀವಿತವನ್ನು ಮಾರ್ಪಡಿಸಿಕೊಂಡು ದುಷ್ಕೃತ್ಯ ನಿಲ್ಲಿಸಬೇಕೆಂದು ನೀನು ಅವನಿಗೆ ಹೇಳಬೇಕು. ನೀನು ಅವನನ್ನು ಎಚ್ಚರಿಸದಿದ್ದರೆ ಅವನು ತನ್ನ ಪಾಪದ ದೆಸೆಯಿಂದ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೇ ಹೊಣೆಗಾರನನ್ನಾಗಿ ಮಾಡುತ್ತೇನೆ.


“ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಅವನು ತನ್ನ ತಂದೆತಾಯಿಗಳನ್ನು ಶಪಿಸಿದನು. ಅವನ ಮರಣಕ್ಕೆ ಅವನೇ ಜವಾಬ್ದಾರನಾಗಿದ್ದಾನೆ.


“ನನ್ನ ಜನರಲ್ಲಿ ಬಡವನಾಗಿರುವವನಿಗೆ ನೀವು ಹಣವನ್ನು ಸಾಲಕೊಟ್ಟರೆ, ನೀವು ಆ ಹಣಕ್ಕೆ ಬಡ್ಡಿ ಕೇಳಬಾರದು. ಬೇಗನೆ ಮರುಪಾವತಿ ಮಾಡುವಂತೆ ಅವನನ್ನು ಬಲವಂತಪಡಿಸಬಾರದು.


ಆದರೆ ಯೆಹೂದ್ಯರು ಪೌಲನ ಉಪದೇಶವನ್ನು ತಿರಸ್ಕರಿಸಿ ದೂಷಣೆ ಮಾಡಿದರು. ಆದ್ದರಿಂದ ಪೌಲನು ತನ್ನ ಬಟ್ಟೆಗಳ ಧೂಳನ್ನು ಝಾಡಿಸಿ ಯೆಹೂದ್ಯರಿಗೆ, “ನೀವು ರಕ್ಷಣೆ ಹೊಂದದಿದ್ದರೆ, ಅದು ನಿಮ್ಮ ಸ್ವಂತ ತಪ್ಪು. ನನ್ನಿಂದ ಸಾಧ್ಯವಾದದ್ದನ್ನೆಲ್ಲ ನಾನು ಮಾಡಿದ್ದೇನೆ. ಇನ್ನು ಮೇಲೆ ನಾನು ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇನೆ!” ಎಂದು ಹೇಳಿದನು.


ನಿಮ್ಮನ್ನು ಸಾಯಿಸಲು ನನಗೆ ಇಷ್ಟವಿಲ್ಲ. ನೀವು ನನ್ನ ಕಡೆಗೆ ಹಿಂದಿರುಗಿ ಜೀವಿಸಿರಿ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ತಾನು ಎಷ್ಟು ಕೆಟ್ಟವನಾಗಿ ಜೀವಿಸಿದನೆಂದು ತಿಳಿದು ನನ್ನ ಕಡೆಗೆ ತಿರುಗಿ ದುಷ್ಟತನ ಮಾಡುವದನ್ನು ನಿಲ್ಲಿಸಿದರೆ. ಅಂಥವನು ಸಾಯದೆ, ಬಾಳುವನು.”


“ಒಂದುವೇಳೆ ಒಳ್ಳೆಯವನೊಬ್ಬನು ತನ್ನ ಒಳ್ಳೆಯತನವನ್ನು ಬಿಟ್ಟು ಪಾಪ ಮಾಡಬಹುದು; ದುಷ್ಟರು ಮಾಡುವ ಅಸಹ್ಯಕೃತ್ಯಗಳನ್ನೆಲ್ಲ ಮಾಡಬಹುದು. ಅವನು ಹೀಗೆ ಮಾಡುತ್ತಾ ಬದುಕಲು ಸಾಧ್ಯವೇ ಇಲ್ಲ! ಅವನು ಅಪನಂಬಿಗಸ್ತನಾದ್ದರಿಂದ ಮತ್ತು ಪಾಪ ಮಾಡಿದ್ದರಿಂದ ದೇವರು ಅವನ ಎಲ್ಲಾ ಒಳ್ಳೆಯ ಕಾರ್ಯಗಳನ್ನೂ ಮರೆತುಬಿಡುವನು. ಅವನು ತನ್ನ ಪಾಪಗಳ ದೆಸೆಯಿಂದ ಸಾಯುವನು.”


ಅವನು ಬಡವರಿಗೆ ನೋವು ಮಾಡುವುದಿಲ್ಲ. ಅವನು ಹಣವನ್ನು ಸಾಲಕೊಡುವಾಗ ಬಡ್ಡಿಹಾಕುವುದಿಲ್ಲ. ಅವನು ನನ್ನ ಕಟ್ಟಳೆಗಳಿಗೆ ವಿಧೇಯನಾಗುವನು. ಮತ್ತು ನನ್ನ ನಿಯಮಗಳನ್ನು ಅನುಸರಿಸುವನು. ಈ ಒಳ್ಳೆಯ ಮಗನು ತಂದೆಯ ದುಷ್ಟತನದ ಕಾರಣಕ್ಕಾಗಿ ಮರಣಶಿಕ್ಷೆಯನ್ನು ಅನುಭವಿಸುವದಿಲ್ಲ. ಆ ಒಳ್ಳೆಯ ಮಗನು ಬಾಳುವನು.


“ಸತ್ತವರಲ್ಲಿ ವಿಚಾರಿಸುವವರು ಅಥವಾ ಬೇತಾಳಿಕರು, ಪುರುಷರಾಗಲಿ ಸ್ತ್ರೀಯರಾಗಲಿ ಆಗಿದ್ದರೂ, ಅವರಿಗೆ ಮರಣಶಿಕ್ಷೆಯಾಗಬೇಕು. ಜನರು ಅವರನ್ನು ಕಲ್ಲೆಸೆದು ಕೊಲ್ಲಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.”


ನೀನು ನಗರವನ್ನು ಬಿಟ್ಟು ಕಿದ್ರೋನ್ ಹೊಳೆಯ ಹಿಂದಕ್ಕೆ ಹೋದರೆ, ನಿನ್ನನ್ನು ಕೊಲ್ಲಲಾಗುವುದು. ಅದು ನಿನ್ನ ಸ್ವಂತ ತಪ್ಪಾಗುವುದು” ಎಂದು ಹೇಳಿದನು.


‘ಈ ಕೆಟ್ಟ ಮನುಷ್ಯನು ಸಾಯುವನು’ ಎಂದು ನಾನು ಹೇಳಿದರೆ, ನೀನು ಹೋಗಿ ಆ ಮನುಷ್ಯನನ್ನು ಎಚ್ಚರಿಸಬೇಕು. ಆದರೆ ನೀನು ಅವನನ್ನು ಎಚ್ಚರಿಸದೆ ಹೋದರೆ, ಅವನ ಜೀವಿತವನ್ನು ಬದಲಾಯಿಸಿಕೊಳ್ಳಲು ಹೇಳದೆ ಹೋದರೆ, ಪಾಪಮಾಡಬೇಡ ಎಂದು ಹೇಳದೆ ಹೋದರೆ, ಆ ದುಷ್ಟನು ಸಾಯುವನು. ಯಾಕೆಂದರೆ, ಅವನು ಪಾಪಮಾಡಿದನು. ಆದರೆ ಅವನ ಮರಣಕ್ಕೆ ನಿನ್ನನ್ನು ಕಾರಣನನ್ನಾಗಿ ಮಾಡುತ್ತೇನೆ.


ಆತನು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು. ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ದೇವರಿಂದ ಹೊಂದಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು