Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:15 - ಪರಿಶುದ್ದ ಬೈಬಲ್‌

15 ಈ ಒಳ್ಳೆಯ ಮಗನು ಬೆಟ್ಟಕ್ಕೆ ಹೋಗಿ ಅಲ್ಲಿ ವಿಗ್ರಹಗಳಿಗೆ ಅರ್ಪಿಸಿದ ನೈವೇದ್ಯವನ್ನು ತಿನ್ನುವುದಿಲ್ಲ. ಅವನು ಇಸ್ರೇಲಿನ ಹೊಲಸು ವಿಗ್ರಹಗಳಿಗೆ ಪ್ರಾರ್ಥಿಸುವುದಿಲ್ಲ. ಅವನು ತನ್ನ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ, ಯಾರನ್ನೂ ಹಿಂಸಿಸದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಗುಡ್ಡಗಳ ಮೇಲೆ [ಯಜ್ಞಶೇಷವನ್ನು] ತಿನ್ನದೆ ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ ನೆರೆಯವನ ಹೆಂಡತಿಯನ್ನು ಕೆಡಿಸದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನದೆ, ಇಸ್ರಾಯೇಲಿನ ಮನೆತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:15
5 ತಿಳಿವುಗಳ ಹೋಲಿಕೆ  

ಅವರು ದುಷ್ಕೃತ್ಯಗಳನ್ನು ಮಾಡಿಲ್ಲದವರೂ ಶುದ್ಧ ಹೃದಯವುಳ್ಳವರೂ ನನ್ನ ಹೆಸರಿನಲ್ಲಿ ಮೋಸ ಪ್ರಮಾಣ ಮಾಡದವರೂ ವಿಗ್ರಹಗಳನ್ನು ಆರಾಧಿಸದವರೂ ಆಗಿರಬೇಕು.


“ಇಗೋ, ಆ ಕೆಟ್ಟ ಮಗನಿಗೆ ಒಬ್ಬ ಮಗನಿರಬಹುದು. ತಂದೆ ಮಾಡುವ ದುಷ್ಕೃತ್ಯಗಳನ್ನು ನೋಡಿದ ಅವನು ತಂದೆಯಂತೆ ಜೀವಿಸದಿರಬಹುದು.


ಆ ಒಳ್ಳೆಯ ಮಗನು ಯಾರ ಮೇಲೂ ದಬ್ಬಾಳಿಕೆ ನಡೆಸುವುದಿಲ್ಲ. ಅವನು ಒತ್ತೆಯಿಲ್ಲದೆ ಸಾಲಕೊಡುವನು. ಅವನು ಯಾರನ್ನೂ ದರೋಡೆ ಮಾಡುವುದಿಲ್ಲ. ಅವನು ಹಸಿದವರಿಗೆ ಊಟ ಕೊಡುವನು; ಬಟ್ಟೆಯಿಲ್ಲದವರಿಗೆ ಬಟ್ಟೆಯನ್ನು ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು