Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:17 - ಪರಿಶುದ್ದ ಬೈಬಲ್‌

17 ಅವನು ಬಡವರಿಗೆ ನೋವು ಮಾಡುವುದಿಲ್ಲ. ಅವನು ಹಣವನ್ನು ಸಾಲಕೊಡುವಾಗ ಬಡ್ಡಿಹಾಕುವುದಿಲ್ಲ. ಅವನು ನನ್ನ ಕಟ್ಟಳೆಗಳಿಗೆ ವಿಧೇಯನಾಗುವನು. ಮತ್ತು ನನ್ನ ನಿಯಮಗಳನ್ನು ಅನುಸರಿಸುವನು. ಈ ಒಳ್ಳೆಯ ಮಗನು ತಂದೆಯ ದುಷ್ಟತನದ ಕಾರಣಕ್ಕಾಗಿ ಮರಣಶಿಕ್ಷೆಯನ್ನು ಅನುಭವಿಸುವದಿಲ್ಲ. ಆ ಒಳ್ಳೆಯ ಮಗನು ಬಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ, ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯನು, ಅವನು ಜೀವಿಸುವುದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಬಡವನ ಮೇಲೆ ಕೈಮಾಡದೆ ಬಡ್ಡಿಯನ್ನು ಕೇಳದೆ ಲಾಭಕ್ಕೆ ಹಣಕೊಡದೆ ನನ್ನ ವಿಧಿಗಳನ್ನು ಆಚರಿಸಿ ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿವಿುತ್ತ ಸಾಯನು, ಬಾಳೇ ಬಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ತನ್ನ ಕೈಯನ್ನು ಪಾಪ ಮಾಡುವುದರಿಂದ ಹಿಂತೆಗೆದು ಬಡ್ಡಿಯನ್ನೂ, ಲಾಭವನ್ನೂ ತೆಗೆದುಕೊಳ್ಳದೆ, ನನ್ನ ವಿಧಿಗಳನ್ನು ಪಾಲಿಸಿ, ನನ್ನ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವುದಿಲ್ಲ, ಅವನು ನಿಶ್ಚಯವಾಗಿ ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:17
28 ತಿಳಿವುಗಳ ಹೋಲಿಕೆ  

ನೀವು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಿಮ್ಮ ಪೂರ್ವಿಕರು ನನ್ನನ್ನು ಅನುಸರಿಸುವದನ್ನು ನಿಲ್ಲಿಸಿಬಿಟ್ಟಿದ್ದರು. ನೀವು ಹಿಂತಿರುಗಿ ನನ್ನ ಬಳಿಗೆ ಬಂದರೆ ನಾನು ನಿಮ್ಮ ಬಳಿಗೆ ಬರುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ. “ನಾವು ಹೇಗೆ ಹಿಂತಿರುಗಿ ಬರಬಹುದು?” ಎಂದು ನೀವು ಕೇಳುತ್ತೀರೋ?


ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.


“ಒಂದುವೇಳೆ ‘ನೀನು ಜೀವಿಸುವಿ’ ಎಂದು ಒಬ್ಬ ಒಳ್ಳೆಯ ಮನುಷ್ಯನಿಗೆ ನಾನು ಹೇಳಬಹುದು. ಅವನು ತಾನು ಮಾಡಿದ ಒಳ್ಳೆಯ ಕಾರ್ಯಗಳ ನಿಮಿತ್ತ ತಾನು ರಕ್ಷಿಸಲ್ಪಟ್ಟಿದ್ದೇನೆ ಎಂದು ನೆನಸಬಹುದು. ಆ ಬಳಿಕ ಅವನು ದುಷ್ಕೃತ್ಯಗಳನ್ನು ಮಾಡಲು, ನಾನು ಅವನ ಪುಣ್ಯಕಾರ್ಯಗಳನ್ನು ನೋಡದೆ ಅವನ ದುಷ್ಕೃತ್ಯಗಳ ನಿಮಿತ್ತ ಅವನನ್ನು ಸಾಯಿಸುವೆನು.


ದೇವರು ಹೇಳಿದ್ದೇನೆಂದರೆ, “ಇಸ್ರೇಲ್ ಜನರು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಆದ್ದರಿಂದ ನೀನು ಹೋಗಿ ಅವರಿಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಿಮ್ಮ ಪೂರ್ವಿಕರು ಮಾಡಿದಂತೆಯೇ ನೀವು ನಿಮ್ಮನ್ನು ಅಪವಿತ್ರರನ್ನಾಗಿ ಮಾಡಿಕೊಳ್ಳುತ್ತಿದ್ದೀರಿ. ನೀವು ಸೂಳೆಯರ ಹಾಗೆ ವರ್ತಿಸಿರುತ್ತೀರಿ. ನಿಮ್ಮ ಪೂರ್ವಿಕರು ಪೂಜಿಸಿದ ಆ ಭಯಂಕರವಾದ ವಿಗ್ರಹಗಳೊಂದಿಗೆ ಇರುವದಕ್ಕಾಗಿ ನನ್ನನ್ನು ನೀವು ತೊರೆದುಬಿಟ್ಟಿರಿ.


ಅವರ ಮಕ್ಕಳಿಗೆ ನಾನು ಬುದ್ಧಿಹೇಳುತ್ತಾ, “ನಿಮ್ಮ ಪೂರ್ವಿಕರಂತೆ ನೀವಾಗಬೇಡಿರಿ. ಅವರ ಅಸಹ್ಯವಾದ ವಿಗ್ರಹಗಳಿಂದ ನಿಮ್ಮನ್ನು ನೀವು ಅಶುದ್ಧಮಾಡಿಕೊಳ್ಳಬೇಡಿರಿ. ಅವರ ಕಟ್ಟಳೆಗಳನ್ನು ಅನುಸರಿಸಬೇಡಿರಿ. ಅವರ ಆಜ್ಞೆಗಳಿಗೆ ವಿಧೇಯರಾಗಬೇಡಿರಿ.


ತಾನು ಎಷ್ಟು ಕೆಟ್ಟವನಾಗಿ ಜೀವಿಸಿದನೆಂದು ತಿಳಿದು ನನ್ನ ಕಡೆಗೆ ತಿರುಗಿ ದುಷ್ಟತನ ಮಾಡುವದನ್ನು ನಿಲ್ಲಿಸಿದರೆ. ಅಂಥವನು ಸಾಯದೆ, ಬಾಳುವನು.”


ಆ ಕೆಟ್ಟ ಮಗನಿಂದ ಯಾರಾದರೂ ಸಾಲ ತೆಗೆದುಕೊಂಡಿದ್ದರೆ ಅವನು ಅವರಿಂದ ಬಡ್ಡಿಯನ್ನು ಕಡ್ಡಾಯವಾಗಿ ವಸೂಲು ಮಾಡಿದ್ದಿರಬಹುದು. ಹೀಗಿರುವದರಿಂದ ಆ ಕೆಟ್ಟ ಮಗನು ಹೆಚ್ಚುಕಾಲ ಬದುಕುವುದಿಲ್ಲ. ಅವನು ಭಯಂಕರ ಕೃತ್ಯಗಳನ್ನು ಮಾಡಿರುವದರಿಂದ ಕೊಲ್ಲಲ್ಪಡುವನು. ಅವನ ಮರಣಕ್ಕೆ ಅವನೇ ಜವಾಬ್ದಾರನು.


“ನೀನು ಆ ಒಳ್ಳೆಯವನಿಗೆ ಪಾಪ ಮಾಡದಂತೆ ಎಚ್ಚರಿಸಿದರೆ ಮತ್ತು ಅವನು ಪಾಪ ಮಾಡುವದನ್ನು ನಿಲ್ಲಿಸಿದರೆ, ಆ ಮನುಷ್ಯನು ಸಾಯುವದಿಲ್ಲ; ಯಾಕೆಂದರೆ ಅವನು ನಿನ್ನ ಎಚ್ಚರಿಕೆಗೆ ಕಿವಿಗೊಟ್ಟನು ಮತ್ತು ನೀನು ನಿನ್ನ ಸ್ವಂತ ಪ್ರಾಣವನ್ನು ರಕ್ಷಿಸಿಕೊಂಡಿರುವೆ.”


ಯೋಷೀಯನು ದೀನದರಿದ್ರರಿಗೆ ಸಹಾಯ ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು. ಯೆಹೋಯಾಕೀಮನೇ, ‘ದೇವರನ್ನು ಅರಿತುಕೊಳ್ಳುವುದು ಎಂದರೇನು?’ ನ್ಯಾಯ ಮತ್ತು ನೀತಿಯಿಂದ ನಡೆದುಕೊಳ್ಳುವುದು, ನನ್ನನ್ನು ಅರಿತುಕೊಳ್ಳಲು ಬೇಕಾದದ್ದು ಅದೇ. ಇದು ಯೆಹೋವನಿಂದ ಬಂದ ಸಂದೇಶ:


ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.


ಬಡಜನರಿಗೆ ನ್ಯಾಯದೊರಕಿಸುವ ರಾಜನು ಬಹುಕಾಲ ಆಳುವನು.


ನೀತಿವಂತರು ಬಡವರಿಗೆ ಒಳ್ಳೆಯದನ್ನು ಮಾಡಲು ಇಷ್ಟಪಡುತ್ತಾರೆ. ಕೆಡುಕರಾದರೋ ಬಡವರನ್ನು ಲಕ್ಷಿಸುವುದಿಲ್ಲ.


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ.


ನಾನು ಬಡವರಿಗೆ ತಂದೆಯಂತಿದ್ದೆನು. ತೊಂದರೆಯಲ್ಲಿದ್ದ ಅಪರಿಚಿತರ ವ್ಯಾಜ್ಯವನ್ನು ವಿಚಾರಿಸುತ್ತಿದ್ದೆನು.


ಅನ್ಯಜನರು ಆ ಭಯಂಕರ ಪಾಪಗಳನ್ನು ಮಾಡಿದ್ದಾರೆ. ಆದರೆ ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ಭಯಂಕರ ಪಾಪಗಳಿಂದ ನಿಮ್ಮನ್ನು ಹೊಲೆ ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು.”


“ಆದ್ದರಿಂದ ನೀವು ನನ್ನ ಕಟ್ಟಳೆಗಳಿಗೂ ನಿಯಮಗಳಿಗೂ ಆಜ್ಞಾವಿಧಿಗಳಿಗೂ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ವಿಧಿಗಳು ಇಸ್ರೇಲರಿಗಾಗಿ ಮತ್ತು ನಿಮ್ಮ ಮಧ್ಯದಲ್ಲಿ ವಾಸಿಸುವ ಅನ್ಯಜನರಿಗಾಗಿ ಇರುತ್ತವೆ.


ನೀವು ನನ್ನ ನಿಯಮಗಳಿಗೆ ವಿಧೇಯರಾಗಿ ನನ್ನ ಕಟ್ಟಳೆಗಳನ್ನು ಅನುಸರಿಸಬೇಕು. ಆ ನಿಯಮಗಳನ್ನು ತಪ್ಪದೆ ಪಾಲಿಸಿರಿ. ಯಾಕೆಂದರೆ ನಾನು ನಿಮ್ಮ ದೇವರಾದ ಯೆಹೋವನು.


ಜಕ್ಕಾಯನು ಪ್ರಭುವಿಗೆ (ಯೇಸುವಿಗೆ), “ನಾನು ಜನರಿಗೆ ಉಪಕಾರ ಮಾಡಬೇಕೆಂದಿದ್ದೇನೆ. ನಾನು ನನ್ನ ಹಣದಲ್ಲಿ ಅರ್ಧವನ್ನು ಬಡವರಿಗೆ ಕೊಡುವೆನು. ನಾನು ಯಾರಿಗಾದರೂ ಮೋಸಮಾಡಿದ್ದರೆ, ಆ ವ್ಯಕ್ತಿಗೆ ಅದರ ನಾಲ್ಕರಷ್ಟು ಹೆಚ್ಚಾಗಿ ಕೊಡುತ್ತೇನೆ” ಎಂದು ಹೇಳಿದನು.


ಕೆಲವು ಜನರು ಮಹಿಮೆಗಾಗಿ, ಘನತೆಗಾಗಿ ಮತ್ತು ಅಮರತ್ವಕ್ಕಾಗಿ ಯಾವಾಗಲೂ ಸತ್ಕಾರ್ಯಗಳನ್ನು ಮಾಡುತ್ತಾ ಜೀವಿಸುವರು. ದೇವರು ಆ ಜನರಿಗೆ ನಿತ್ಯಜೀವವನ್ನು ಕೊಡುವನು.


ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸುತ್ತಾ ಪವಿತ್ರರಾಗಿ ಜೀವಿಸುವವರು ಧನ್ಯರಾಗಿದ್ದಾರೆ.


ತಂದೆಯು ಜನರನ್ನು ಹೆದರಿಸಿಯಾಗಲಿ ದರೋಡೆ ಮಾಡಿಯಾಗಲಿ ವಸ್ತುಗಳನ್ನು ತೆಗೆದುಕೊಂಡಿರಬಹುದು. ತನ್ನ ಜನರ ಮಧ್ಯದಲ್ಲಿ ಕೆಟ್ಟದಾಗಿರುವುದನ್ನು ಅವನು ಮಾಡಿರಬಹುದು. ಆ ತಂದೆಯು ತನ್ನ ಪಾಪಗಳ ಸಲುವಾಗಿ ಸಾಯುವನು. ಆದರೆ ತಂದೆಯ ಪಾಪಗಳಿಗಾಗಿ ಮಗನು ಶಿಕ್ಷಿಸಲ್ಪಡುವುದಿಲ್ಲ.


ಅವರು ಕೆಟ್ಟದ್ದನ್ನು ಮಾಡದೆ ಆತನಿಗೆ ವಿಧೇಯರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು