ಯೆಹೆಜ್ಕೇಲನು 18:19 - ಪರಿಶುದ್ದ ಬೈಬಲ್19 “‘ತಂದೆಯ ಪಾಪಗಳಿಗಿರುವ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳದಿರುವದೇಕೆ?’ ಎಂದು ನೀವು ಕೇಳಬಹುದು. ಮಗನು ನ್ಯಾಯವಾದುದ್ದನ್ನು ಮತ್ತು ಸರಿಯಾದುದ್ದನ್ನು ಮಾಡಿದ್ದಾನೆ. ಅವನು ಎಚ್ಚರಿಕೆಯಿಂದ ನನ್ನ ಎಲ್ಲಾ ನಿಯಮಗಳಿಗೆ ವಿಧೇಯನಾಗಿದ್ದನು. ಆದ್ದರಿಂದ ಅವನು ಬಾಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 “ಆದರೆ ನೀವು, ‘ತಂದೆಯ ದೋಷಫಲವನ್ನು ಮಗನು ಅನುಭವಿಸುವುದು ಖಂಡಿತ’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ, ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಖಂಡಿತವಾಗಿ ಜೀವಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ಆದರೆ ನೀವು, - ‘ತಂದೆಯ ದೋಷಫಲವನ್ನು ಮಗನು ಹೇಗೆ ಅನುಭವಿಸುವುದಿಲ್ಲ?’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ ನನ್ನ ವಿಧಿಗಳನ್ನೆಲ್ಲಾ ಕೈಗೊಂಡು ಆಚರಿಸಿದರೆ ಖಂಡಿತ ಜೀವಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆದರೆ ನೀವು - ತಂದೆಯ ದೋಷಫಲವನ್ನು ಮಗನು ಹೇಗೆ ಅನುಭವಿಸುವದಿಲ್ಲ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡಿಸಿ ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಬಾಳೇ ಬಾಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಆದರೂ ಇನ್ನೂ ನೀವು ಹೇಳುವುದೇನು? ‘ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲವೇ?’ ಎಂದು ಹೇಳುವಿರಿ. ಮಗನು ನ್ಯಾಯವನ್ನೂ, ನೀತಿಯನ್ನೂ ಮಾಡಿ, ನನ್ನ ನಿಯಮಗಳನ್ನೆಲ್ಲಾ ಕೈಗೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು. ಅಧ್ಯಾಯವನ್ನು ನೋಡಿ |
ದೇವರು ಹೇಳಿದ್ದೇನೆಂದರೆ, “ಇಸ್ರೇಲ್ ಜನರು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಆದ್ದರಿಂದ ನೀನು ಹೋಗಿ ಅವರಿಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಿಮ್ಮ ಪೂರ್ವಿಕರು ಮಾಡಿದಂತೆಯೇ ನೀವು ನಿಮ್ಮನ್ನು ಅಪವಿತ್ರರನ್ನಾಗಿ ಮಾಡಿಕೊಳ್ಳುತ್ತಿದ್ದೀರಿ. ನೀವು ಸೂಳೆಯರ ಹಾಗೆ ವರ್ತಿಸಿರುತ್ತೀರಿ. ನಿಮ್ಮ ಪೂರ್ವಿಕರು ಪೂಜಿಸಿದ ಆ ಭಯಂಕರವಾದ ವಿಗ್ರಹಗಳೊಂದಿಗೆ ಇರುವದಕ್ಕಾಗಿ ನನ್ನನ್ನು ನೀವು ತೊರೆದುಬಿಟ್ಟಿರಿ.