Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:21 - ಪರಿಶುದ್ದ ಬೈಬಲ್‌

21 “ಒಂದುವೇಳೆ ದುಷ್ಟನೊಬ್ಬನು ತಾನು ಮಾಡಿದ ಎಲ್ಲಾ ಪಾಪಗಳಿಗೆ ವಿಮುಖನಾದರೆ, ನನ್ನ ಎಲ್ಲಾ ನಿಯಮಗಳಿಗೆ ವಿಧೇಯನಾದರೆ, ನ್ಯಾಯವಾದುದ್ದನ್ನೂ ಸರಿಯಾದುದ್ದನ್ನೂ ಮಾಡಿದರೆ, ಅವನು ಸಾಯದೆ ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲ ವಿಧಿಗಳನ್ನು ಕೈಕೊಂಡು, ನೀತಿನ್ಯಾಯಗಳನ್ನು ನಡೆಸಿದರೆ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲವಿಧಿಗಳನ್ನು ಕೈಗೊಂಡು, ನ್ಯಾಯನೀತಿಗಳನ್ನು ನಡೆಸಿದರೆ ಸಾಯನು; ಖಂಡಿತ ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು ನನ್ನ ಸಕಲ ವಿಧಿಗಳನ್ನು ಕೈಕೊಂಡು ನೀತಿನ್ಯಾಯಗಳನ್ನು ನಡಿಸಿದರೆ ಸಾಯನು, ಬಾಳೇ ಬಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು, ನನ್ನ ನಿಯಮಗಳನ್ನೆಲ್ಲಾ ಕೈಗೊಂಡು, ನ್ಯಾಯವನ್ನೂ, ನೀತಿಯನ್ನೂ ನಡೆಸಿದರೆ, ಅವನು ಸಾಯದೆ ಖಂಡಿತವಾಗಿ ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:21
33 ತಿಳಿವುಗಳ ಹೋಲಿಕೆ  

ಆದರೆ ಒಬ್ಬ ಪಾಪಿ ತನ್ನ ದುಷ್ಟತನವನ್ನು ಬಿಟ್ಟು ನೀತಿವಂತನಾಗಿ ಬಾಳಿದರೆ ಅವನು ಜೀವಿಸುವನು.


ಪಾಪಗಳನ್ನು ಅಡಗಿಸಿಕೊಳ್ಳುವವನಿಗೆ ಯಶಸ್ಸು ಇಲ್ಲವೇ ಇಲ್ಲ. ತನ್ನ ಪಾಪವನ್ನು ಅರಿಕೆಮಾಡಿ ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಆದ್ದರಿಂದ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿ. ಆಗ ಆತನು ನಿಮ್ಮ ಪಾಪಗಳನ್ನು ಕ್ಷಮಿಸುವನು.


ನಿಮ್ಮ ಪಾಪಸ್ವಭಾವವು ಬಯಸುವ ಕೆಟ್ಟಕಾರ್ಯಗಳನ್ನು ಮಾಡುವುದಕ್ಕಾಗಿ ನೀವು ನಿಮ್ಮ ಜೀವಿತವನ್ನು ಉಪಯೋಗಿಸಿದರೆ, ನೀವು ಆತ್ಮಿಕವಾಗಿ ಸಾಯುವಿರಿ. ಆದರೆ ನೀವು ನಿಮ್ಮ ದೇಹದ ಮೂಲಕವಾಗಿ ಮಾಡುವ ಕೆಟ್ಟಕಾರ್ಯಗಳನ್ನು ಪವಿತ್ರಾತ್ಮನ ಸಹಾಯದಿಂದ ನಿಲ್ಲಿಸಿದರೆ ಹೊಸ ಜೀವಿತವನ್ನು ಹೊಂದಿಕೊಳ್ಳುವಿರಿ.


ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು.


ಅವನು ನನ್ನ ನಿಯಮಗಳಿಗನುಸಾರವಾಗಿ ಜೀವಿಸುವನು ಮತ್ತು ನನ್ನ ಕಟ್ಟಳೆಗಳಿಗೆ ನಂಬಿಗಸ್ತಿಕೆಯಿಂದ ವಿಧೇಯನಾಗುವನು. ಅಂಥಾ ಮನುಷ್ಯನು ನೀತಿವಂತನಾಗಿದ್ದಾನೆ ಮತ್ತು ಅವನು ಖಂಡಿತವಾಗಿಯೂ ಬದುಕುವನು.


ಒಬ್ಬ ವ್ಯಕ್ತಿಯ ದೇಹದಲ್ಲಿ ಆತ್ಮವಿಲ್ಲದಿದ್ದರೆ, ಅವನ ದೇಹವು ಸತ್ತದ್ದೇ. ಅದೇ ರೀತಿಯಲ್ಲಿ ಕ್ರಿಯೆಯಿಲ್ಲದ ನಂಬಿಕೆಯು ಸತ್ತದ್ದೇ.


“ಒಬ್ಬ ವ್ಯಕ್ತಿ ನೀತಿವಂತನಾಗಿದ್ದರೆ ಅವನು ಬಾಳುವನು. ಆ ಮನುಷ್ಯನು ಜನರನ್ನು ಸರಿಯಾದ ರೀತಿಯಲ್ಲಿ ನೋಡುವನು.


ಇಸ್ರೇಲರೇ, ನಾನು ಪ್ರತಿಯೊಬ್ಬನನ್ನು ಅವನವನ ಕಾರ್ಯಗಳ ಪ್ರಕಾರ ನ್ಯಾಯತೀರಿಸುವೆನು” ಎಂದು ಹೇಳಿದನು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆದ್ದರಿಂದ ನನ್ನ ಬಳಿಗೆ ಬನ್ನಿರಿ, ದುಷ್ಟತನ ಮಾಡುವದನ್ನು ನಿಲ್ಲಿಸಿರಿ, ಪಾಪವು ನಿಮ್ಮ ನಾಶನಕ್ಕೆ ಕಾರಣವಾಗದಂತೆ ಎಚ್ಚರಿಕೆಯಾಗಿರಿ.


“‘ತಂದೆಯ ಪಾಪಗಳಿಗಿರುವ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳದಿರುವದೇಕೆ?’ ಎಂದು ನೀವು ಕೇಳಬಹುದು. ಮಗನು ನ್ಯಾಯವಾದುದ್ದನ್ನು ಮತ್ತು ಸರಿಯಾದುದ್ದನ್ನು ಮಾಡಿದ್ದಾನೆ. ಅವನು ಎಚ್ಚರಿಕೆಯಿಂದ ನನ್ನ ಎಲ್ಲಾ ನಿಯಮಗಳಿಗೆ ವಿಧೇಯನಾಗಿದ್ದನು. ಆದ್ದರಿಂದ ಅವನು ಬಾಳುವನು.


ನಿನ್ನ ಕಟ್ಟಳೆಗಳಿಗೆಲ್ಲಾ ಯಾವಾಗಲೂ ವಿಧೇಯನಾಗಿರಲು ಮನಸ್ಸುಮಾಡಿದ್ದೇನೆ.


ನಾನು ನಿನ್ನ ಕಟ್ಟಳೆಗಳಿಗೆ ಪೂರ್ಣವಾಗಿ ವಿಧೇಯನಾಗಿರುವಂತೆ ಮಾಡು. ಆಗ ನನಗೆ ಅವಮಾನವಾಗುವುದಿಲ್ಲ.


ನನ್ನ ಸಹೋದರ ಸಹೋದರಿಯರೇ, ಒಬ್ಬ ವ್ಯಕ್ತಿಯು ತನ್ನಲ್ಲಿ ನಂಬಿಕೆಯಿದೆಯೆಂದು ಹೇಳಿಕೊಂಡರೂ ಅದನ್ನು ಕಾರ್ಯರೂಪಕ್ಕೆ ತರದಿದ್ದರೆ, ಅವನ ನಂಬಿಕೆಯಿಂದ ಪ್ರಯೋಜನವೇನೂ ಇಲ್ಲ. ಆ ರೀತಿಯ ನಂಬಿಕೆಯು ಅವನನ್ನು ರಕ್ಷಿಸಬಲ್ಲದೇ? ಇಲ್ಲ!


ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.


ನಾನು ನನ್ನ ಆತ್ಮವನ್ನು ನಿಮ್ಮಲ್ಲಿರಿಸುವೆನು. ನೀವು ನನ್ನ ನಿಯಮಗಳಿಗೆ ವಿಧೇಯರಾಗುವಷ್ಟು ನಿಮ್ಮ ಮನಸ್ಸನ್ನು ಬದಲಾಯಿಸುವೆನು. ಆಗ ನೀವು ನನ್ನ ಆಜ್ಞೆಗಳನ್ನು ಜಾಗ್ರತೆಯಿಂದ ಪಾಲಿಸುವಿರಿ.


ಅವನು ಬಡವರಿಗೆ ನೋವು ಮಾಡುವುದಿಲ್ಲ. ಅವನು ಹಣವನ್ನು ಸಾಲಕೊಡುವಾಗ ಬಡ್ಡಿಹಾಕುವುದಿಲ್ಲ. ಅವನು ನನ್ನ ಕಟ್ಟಳೆಗಳಿಗೆ ವಿಧೇಯನಾಗುವನು. ಮತ್ತು ನನ್ನ ನಿಯಮಗಳನ್ನು ಅನುಸರಿಸುವನು. ಈ ಒಳ್ಳೆಯ ಮಗನು ತಂದೆಯ ದುಷ್ಟತನದ ಕಾರಣಕ್ಕಾಗಿ ಮರಣಶಿಕ್ಷೆಯನ್ನು ಅನುಭವಿಸುವದಿಲ್ಲ. ಆ ಒಳ್ಳೆಯ ಮಗನು ಬಾಳುವನು.


“ನೀನು ಆ ಒಳ್ಳೆಯವನಿಗೆ ಪಾಪ ಮಾಡದಂತೆ ಎಚ್ಚರಿಸಿದರೆ ಮತ್ತು ಅವನು ಪಾಪ ಮಾಡುವದನ್ನು ನಿಲ್ಲಿಸಿದರೆ, ಆ ಮನುಷ್ಯನು ಸಾಯುವದಿಲ್ಲ; ಯಾಕೆಂದರೆ ಅವನು ನಿನ್ನ ಎಚ್ಚರಿಕೆಗೆ ಕಿವಿಗೊಟ್ಟನು ಮತ್ತು ನೀನು ನಿನ್ನ ಸ್ವಂತ ಪ್ರಾಣವನ್ನು ರಕ್ಷಿಸಿಕೊಂಡಿರುವೆ.”


ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸುತ್ತಾ ಪವಿತ್ರರಾಗಿ ಜೀವಿಸುವವರು ಧನ್ಯರಾಗಿದ್ದಾರೆ.


ನಾನೇ ಇದನ್ನು ನೆರವೇರಿಸುವೆನು; ಯಾಕೆಂದರೆ ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತುಗಳಿಗೆ ವಿಧೇಯನಾಗಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞೆಗಳನ್ನು, ಕಟ್ಟಳೆಗಳನ್ನು, ನಿಯಮಗಳನ್ನು ಕೈಕೊಂಡು ನಡೆದನು” ಎಂದು ಹೇಳಿದನು.


ಆದರೆ ಆ ಜನಾಂಗದ ಜನರು ತಮ್ಮ ಮನಸ್ಸನ್ನು ಮತ್ತು ಜೀವನವನ್ನು ಪರಿವರ್ತಿಸಿಕೊಳ್ಳಬಹುದು. ಆ ಜನಾಂಗದ ಜನರು ಮಾಡುವ ದುಷ್ಕೃತ್ಯಗಳನ್ನು ನಿಲ್ಲಿಸಬಹುದು. ಆಗ ನಾನು ನನ್ನ ವಿಚಾರವನ್ನು ಬದಲಾಯಿಸಿ, ಆ ಜನಾಂಗವನ್ನು ನಾಶಪಡಿಸಬೇಕೆಂದು ಮಾಡಿದ ನನ್ನ ಮುಂಚಿನ ಯೋಜನೆಗಳನ್ನು ಕಾರ್ಯರೂಪಕ್ಕೆ ತರದಿರಬಹುದು.


“‘ಪ್ರವಾದಿನಿಯರೇ, ನೀವು ಸುಳ್ಳುಗಾರ್ತಿಯರಾಗಿದ್ದೀರಿ. ನಿಮ್ಮ ಸುಳ್ಳುಗಳು ಒಳ್ಳೆಯವರಿಗೆ ದುಃಖವನ್ನು ಬರಮಾಡುವವು. ಒಳ್ಳೆಯ ವ್ಯಕ್ತಿಗಳಿಗೆ ನೋವು ಮಾಡಲು ನನಗೆ ಮನಸ್ಸಿಲ್ಲ. ದುಷ್ಟ ಜನರು ತಮ್ಮ ದುರ್ಮಾರ್ಗಗಳನ್ನು ತೊರೆದುಬಿಡದಂತೆಯೂ ತಮ್ಮ ಪ್ರಾಣಗಳನ್ನು ರಕ್ಷಿಸಿಕೊಳ್ಳದಂತೆಯೂ ನೀವು ಪ್ರೋತ್ಸಾಹಿಸುತ್ತೀರಿ.


ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.


ಅವರು ನನ್ನ ಸಂದೇಶವನ್ನು ಕೇಳಿ ಅದರಂತೆ ನಡೆಯಬಹುದು; ತಮ್ಮ ಕೆಟ್ಟ ಜೀವನವನ್ನು ತ್ಯಜಿಸಿ ಸನ್ಮಾರ್ಗವನ್ನು ಹಿಡಿಯಬಹುದು. ಅವರು ಪರಿವರ್ತನೆ ಹೊಂದಿದರೆ ನಾನು ಅವರನ್ನು ಶಿಕ್ಷಿಸಬೇಕೆಂದು ಮಾಡಿದ ಯೋಚನೆಗಳನ್ನು ಬದಲಾಯಿಸುವೆನು. ಅವರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದರಿಂದ ಅವರನ್ನು ಶಿಕ್ಷಿಸಬೇಕೆಂದು ನಾನು ಯೋಚಿಸುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು