ಯೆಹೆಜ್ಕೇಲನು 18:24 - ಪರಿಶುದ್ದ ಬೈಬಲ್24 “ಒಂದುವೇಳೆ ಒಳ್ಳೆಯವನೊಬ್ಬನು ತನ್ನ ಒಳ್ಳೆಯತನವನ್ನು ಬಿಟ್ಟು ಪಾಪ ಮಾಡಬಹುದು; ದುಷ್ಟರು ಮಾಡುವ ಅಸಹ್ಯಕೃತ್ಯಗಳನ್ನೆಲ್ಲ ಮಾಡಬಹುದು. ಅವನು ಹೀಗೆ ಮಾಡುತ್ತಾ ಬದುಕಲು ಸಾಧ್ಯವೇ ಇಲ್ಲ! ಅವನು ಅಪನಂಬಿಗಸ್ತನಾದ್ದರಿಂದ ಮತ್ತು ಪಾಪ ಮಾಡಿದ್ದರಿಂದ ದೇವರು ಅವನ ಎಲ್ಲಾ ಒಳ್ಳೆಯ ಕಾರ್ಯಗಳನ್ನೂ ಮರೆತುಬಿಡುವನು. ಅವನು ತನ್ನ ಪಾಪಗಳ ದೆಸೆಯಿಂದ ಸಾಯುವನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ ಅವನು ಜೀವಿಸುವನೋ? ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಪಾಪ ಅಪರಾಧಗಳಿಂದಲೇ ಸಾಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ದುಷ್ಟನು ನಡಿಸುವ ದುರಾಚಾರಗಳನ್ನೆಲ್ಲಾ ನಡಿಸಿದರೆ ಅವನು ಬಾಳುವನೋ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಆದರೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ, ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿರುವ ಎಲ್ಲಾ ಸುಕೃತ್ಯಗಳು ಅವನ ಲೆಕ್ಕಕ್ಕೆ ಸೇರುವುದಿಲ್ಲ. ಅವನು ಮಾಡಿರುವ ಅಪರಾಧದಿಂದಲೂ, ಪಾಪದಿಂದಲೂ ಅವುಗಳಲ್ಲಿಯೇ ಅವನು ಸಾಯುವನು. ಅಧ್ಯಾಯವನ್ನು ನೋಡಿ |
ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ.