Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:25 - ಪರಿಶುದ್ದ ಬೈಬಲ್‌

25 ದೇವರು ಹೇಳಿದ್ದೇನೆಂದರೆ: “ಒಂದುವೇಳೆ ನೀವು ಹೇಳಬಹುದು: ‘ನನ್ನ ಒಡೆಯನಾದ ದೇವರ ಕ್ರಮವು ದೃಢವಾಗಿಲ್ಲ.’ ಆದರೆ, ಇಸ್ರೇಲಿನ ಜನರೇ, ಕೇಳಿರಿ. ನಿಮ್ಮ ನಡತೆಯೇ ದೃಢವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ಆದರೆ ನೀವು, ‘ಕರ್ತನ ಕ್ರಮವು ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೋ? ನಿಮ್ಮ ಕ್ರಮವೇ ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ಆದರೆ ನೀವು, ‘ಸರ್ವೇಶ್ವರನ ಕ್ರಮ ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೆ? ನಿಮ್ಮ ಕ್ರಮವೇ ಸರಿಯಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದರೆ ನೀವು - ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸಮವಲ್ಲವೋ? ನಿಮ್ಮ ಕ್ರಮವೇ ಸಮವಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಆದರೆ ನೀವು, ‘ಯೆಹೋವ ದೇವರ ಮಾರ್ಗವು ಸರಿಯಲ್ಲ’ ಎಂದು ಹೇಳುತ್ತೀರಿ. ಇಸ್ರಾಯೇಲ್ ಜನರೇ, ಈಗ ಕೇಳಿರಿ, ನನ್ನ ಮಾರ್ಗವು ಸರಿಯಲ್ಲವೇ? ನಿಜಕ್ಕೂ ನಿಮ್ಮ ಮಾರ್ಗಗಳೇ ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:25
29 ತಿಳಿವುಗಳ ಹೋಲಿಕೆ  

“ಆದರೆ ನಿನ್ನ ಜನರು, ‘ಅದು ನ್ಯಾಯವಲ್ಲ. ನನ್ನ ಒಡೆಯನಾದ ಯೆಹೋವನು ಹಾಗೆ ಮಾಡಲಾರನು’ ಎಂದು ಹೇಳುವರು. “ಅಂಥ ಜನರೇ ನ್ಯಾಯವಂತರಲ್ಲ. ಅವರೇ ಬದಲಾಗಬೇಕು.


ನೀವು ತಪ್ಪಾದ ವಿಷಯಗಳನ್ನು ಬೋಧಿಸಿದ್ದೀರಿ. ಅಂಥಾ ದುರ್ಬೋಧನೆಯು ಯೆಹೋವನನ್ನು ದುಃಖಗೊಳಿಸಿದೆ. ಯೆಹೋವನು ದುಷ್ಟರನ್ನು ಪ್ರೀತಿಸುತ್ತಾನೆ ಎಂದು ಜನರಿಗೆ ಬೋಧಿಸಿದ್ದೀರಿ. ಅಂಥಾ ಜನರನ್ನು ಯೆಹೋವನು ಒಳ್ಳೆಯವರೆಂದು ಕರೆಯುತ್ತಾನೆ ಎಂದು ನೀವು ಜನರಿಗೆ ಕಲಿಸಿದ್ದೀರಿ. ಅಲ್ಲದೆ ಪಾಪಮಾಡುವ ಜನರನ್ನು ಯೆಹೋವನು ಶಿಕ್ಷಿಸುವದಿಲ್ಲವೆಂದೂ ನೀವು ಹೇಳಿದ್ದೀರಿ.


ಆದರೆ ದೇವರು ಇನ್ನೂ ಆ ನಗರದಲ್ಲಿದ್ದಾನೆ. ಅವರಿಗೆ ಇನ್ನೂ ಒಳ್ಳೆಯದನ್ನೇ ಮಾಡುತ್ತಿದ್ದಾನೆ. ಆತನು ತಪ್ಪು ಕಾರ್ಯಗಳನ್ನು ಮಾಡುವವನಲ್ಲ. ತನ್ನ ಜನರಿಗೆ ಸಹಾಯ ಮಾಡುತ್ತಿರುತ್ತಾನೆ. ಪ್ರತಿ ದಿನವೂ ಸರಿಯಾದ ತೀರ್ಮಾನ ಮಾಡಲು ತನ್ನ ಜನರಿಗೆ ಸಹಾಯ ಮಾಡುತ್ತಾನೆ. ಆದರೆ ಆ ದುಷ್ಟಜನರು ತಮ್ಮ ದುಷ್ಟತನಕ್ಕಾಗಿ ನಾಚಿಕೆಪಡುತ್ತಿಲ್ಲ.


ಆದರೆ ನಾನು ನ್ಯಾಯವಂತನಲ್ಲ, ಎಂದು ನೀವು ಹೇಳುತ್ತೀರಿ. ಆದರೆ ನಾನು ಖಂಡಿತವಾಗಿ ಹೇಳುತ್ತೇನೆ, ಇಸ್ರೇಲ್ ಮನೆತನದವರೇ, ಪ್ರತಿಯೊಬ್ಬನೂ ತಾನು ಮಾಡಿದ ಕಾರ್ಯಗಳಿಗಾಗಿ ನ್ಯಾಯ ಹೊಂದುವನು.”


ಯೆಹೋವನೇ, ನಾನು ನಿನ್ನ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯಪರನೆಂಬುದು ರುಜುವಾತಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಬಗ್ಗೆ ನಾನು ನಿನ್ನನ್ನು ಕೇಳಬಯಸುತ್ತೇನೆ. ದುಷ್ಟರು ಏಕೆ ಅಭಿವೃದ್ಧಿ ಹೊಂದುತ್ತಾರೆ? ನಿನ್ನ ವಿಶ್ವಾಸಕ್ಕೆ ಪಾತ್ರರಾಗದವರು ನೆಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ?


ಖಂಡಿತವಾಗಿಯೂ ನೀನು ಆ ಪಟ್ಟಣವನ್ನು ನಾಶಮಾಡುವುದಿಲ್ಲ. ಕೆಟ್ಟವರನ್ನು ಕೊಲ್ಲುವುದಕ್ಕಾಗಿ ನೀನು ಐವತ್ತು ಮಂದಿ ನೀತಿವಂತರನ್ನು ಕೊಲ್ಲುವುದಿಲ್ಲ. ಒಂದುವೇಳೆ ನೀನು ಕೊಂದರೆ, ಒಳ್ಳೆಯವರೂ ಕೆಟ್ಟವರೂ ಸರಿಸಮಾನರಾಗುವರು. ಅವರಿಬ್ಬರೂ ದಂಡನೆಗೆ ಗುರಿಯಾಗುವರು. ನೀನು ಲೋಕದವರಿಗೆಲ್ಲ ನ್ಯಾಯಾಧಿಪತಿ. ನೀನು ನ್ಯಾಯವಾದದ್ದನ್ನೇ ಮಾಡುವೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.


ಆದರೆ ಇಸ್ರೇಲ್ ಜನರು, “ಅದು ಸರಿಯಲ್ಲ. ನನ್ನ ಒಡೆಯನಾದ ಯೆಹೋವನ ಕ್ರಮವು ದೃಢವಲ್ಲ” ಎಂದರು. ಆಗ ದೇವರು, “ನಾನು ದೃಢವಾಗಿದ್ದೇನೆ. ನಿಮ್ಮ ನಡತೆಯೇ ದೃಢವಾಗಿಲ್ಲ.


ನೀತಿವಂತರನ್ನಾಗಿ ಮಾಡುವ ದೇವರ ಮಾರ್ಗವನ್ನು ಅವರು ತಿಳಿದಿಲ್ಲದ ಕಾರಣ ತಮ್ಮ ಸ್ವಂತ ಮಾರ್ಗದ ಮೂಲಕವಾಗಿ ತಮ್ಮನ್ನು ನೀತಿವಂತರನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸಿದರು.


ಹಾಗೆ ಕೇಳಬೇಡಿ. ನೀವು ಕೇವಲ ಮನುಷ್ಯರು. ದೇವರನ್ನು ಪ್ರಶ್ನಿಸಲು ಮನುಷ್ಯರಿಗೆ ಯಾವ ಹಕ್ಕೂ ಇಲ್ಲ. ಮಡಕೆಯು ತನ್ನನ್ನು ತಯಾರಿಸಿದವನಿಗೆ, “ನೀನು ನನ್ನನ್ನು ಈ ರೀತಿ ತಯಾರಿಸಿದ್ದೇಕೆ” ಎಂದು ಕೇಳುವುದುಂಟೇ?


ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಯಾರಿಗೂ ಸಾಧ್ಯವಿಲ್ಲ. ಧರ್ಮಶಾಸ್ತ್ರವು ನಮ್ಮ ಪಾಪವನ್ನು ಮಾತ್ರ ತೋರ್ಪಡಿಸುತ್ತದೆ.


ದೇವರು ನ್ಯಾಯವಂತನೆಂಬುದನ್ನು ನಾವು ಮಾಡುವ ತಪ್ಪು ಮತ್ತಷ್ಟು ಸ್ಪಷ್ಟವಾಗಿ ತೋರ್ಪಡಿಸುತ್ತದೆ. ಹೀಗಿರಲು, ದೇವರು ನಮ್ಮನ್ನು ಶಿಕ್ಷಿಸುವಾಗ, ಆತನು ಅನ್ಯಾಯ ಮಾಡುತ್ತಿದ್ದಾನೆಂದು ನಾವು ಹೇಳಲು ಸಾಧ್ಯವೇ? (ಬೇರೆ ಕೆಲವು ಜನರಿಗೆ ಇರಬಹುದಾದ ಆಲೋಚನೆಯನ್ನೇ ನಾನು ಇಲ್ಲಿ ಹೇಳುತ್ತಿದ್ದೇನೆ.)


ಯೆಹೋವನ ಕಾರ್ಯಗಳೆಲ್ಲ ನೀತಿಯುಳ್ಳವುಗಳಾಗಿವೆ. ಆತನ ಪ್ರತಿಯೊಂದು ಕಾರ್ಯದಲ್ಲೂ ಆತನ ಶಾಶ್ವತ ಪ್ರೀತಿ ತೋರಿಬರುವುದು.


ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ನಿಮ್ಮಂಥವನೆಂದು ನೀವು ಆಲೋಚಿಸಿಕೊಂಡಿರಿ. ಈಗಲಾದರೋ ನಾನು ಮೌನವಾಗಿರುವುದಿಲ್ಲ! ಎಲ್ಲವನ್ನು ನಿಮಗೆ ವಿವರಿಸಿ ನಿಮ್ಮ ಮುಂದೆಯೇ ನಿಮ್ಮನ್ನು ಟೀಕಿಸುವೆನು!


ದೇವರೊಬ್ಬನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುವುದು.


“ಯೋಬನೇ, ನನ್ನ ನೀತಿಯನ್ನು ಖಂಡಿಸುವಿಯಾ? ನಿನ್ನನ್ನು ನಿರಪರಾಧಿಯೆಂದು ನಿರೂಪಿಸಲು ನನ್ನನ್ನು ದೋಷಿಯೆಂದು ಪರಿಗಣಿಸುವೆಯಾ?


“ಯೋಬನೇ, ‘ನಾನು ದೇವರಿಗಿಂತ ನೀತಿವಂತನೆಂದು’ ನೀನು ಹೇಳುವುದು ನ್ಯಾಯವಲ್ಲ.


ಅಲ್ಲಿ ಯೌವನಸ್ಥನಾದ ಎಲೀಹು ಸಹ ಇದ್ದನು. ಎಲೀಹು ಬರಕೇಲನ ಮಗನು. ಬರಕೇಲನು ಬೂಜ್ ಕುಲದವನು. ಎಲೀಹು, ರಾಮ್ ಸಂತಾನಕ್ಕೆ ಸೇರಿದವನು. ಎಲೀಹುವಿಗೆ ಯೋಬನ ಮೇಲೆ ಬಹು ಕೋಪಬಂದಿತು. ಯಾಕೆಂದರೆ ಯೋಬನು ತಾನು ದೇವರಿಗಿಂತಲೂ ನೀತಿವಂತನೆಂದು ಪ್ರತಿಪಾದಿಸುತ್ತಿದ್ದನು.


“ಯೆಹೋವನ ಕಾರ್ಯವು ನಿಷ್ಕಳಂಕವಾದದ್ದು. ಯಾಕೆಂದರೆ ಆತನ ಮಾರ್ಗವೆಲ್ಲವೂ ಸರಿಯಾದದ್ದೇ. ದೇವರು ಸತ್ಯವಂತನೂ ನಂಬಿಗಸ್ತನೂ ಆಗಿದ್ದಾನೆ. ಆತನು ಒಳ್ಳೆಯವನೂ ಪ್ರಾಮಾಣಿಕನೂ ಆಗಿದ್ದಾನೆ.


ಒಬ್ಬ ಒಳ್ಳೆಯವನು ಬದಲಾವಣೆ ಹೊಂದಿ ಕೆಟ್ಟಕಾರ್ಯಗಳನ್ನು ಮಾಡಿದರೆ, ಅವನ ದುಷ್ಟತ್ವಕ್ಕಾಗಿ ಅವನು ಸಾಯಲೇಬೇಕು.


ನೀನು ದೇವರ ಮೇಲೆ ಕೋಪಗೊಂಡು ನಿನ್ನ ಬಾಯಿಂದ ಅಂತಹ ಮಾತುಗಳನ್ನು ಸುರಿಸುತ್ತಿರುವೆ!


ಮೂಢನ ಮೂಢತನವು ಅವನ ಜೀವನವನ್ನೇ ನಾಶಪಡಿಸುತ್ತದೆ. ಆದರೆ ಅವನು ದೂಷಿಸುವುದು ಯೆಹೋವನನ್ನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು