Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:29 - ಪರಿಶುದ್ದ ಬೈಬಲ್‌

29 ಆದರೆ ಇಸ್ರೇಲ್ ಜನರು, “ಅದು ಸರಿಯಲ್ಲ. ನನ್ನ ಒಡೆಯನಾದ ಯೆಹೋವನ ಕ್ರಮವು ದೃಢವಲ್ಲ” ಎಂದರು. ಆಗ ದೇವರು, “ನಾನು ದೃಢವಾಗಿದ್ದೇನೆ. ನಿಮ್ಮ ನಡತೆಯೇ ದೃಢವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದರೆ ಇಸ್ರಾಯೇಲ್ ವಂಶದವರು ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಿಲ್ಲವೋ? ನಿಮ್ಮ ಕ್ರಮವೇ ಸರಿಯಿಲ್ಲವಷ್ಟೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆದರೆ ಇಸ್ರಯೇಲ್ ವಂಶದವರು ಸರ್ವೇಶ್ವರನ ಕ್ರಮ ಸರಿಯಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಯೇಲ್ ವಂಶದವರೇ, ನನ್ನ ಕ್ರಮ, ಸರಿಯಿಲ್ಲವೇ? ನಿಮ್ಮ ಕ್ರಮವೇ ಸರಿಯಿಲ್ಲವಷ್ಟೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆದರೆ ಇಸ್ರಾಯೇಲ್ ವಂಶದವರು ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸಮವಲ್ಲವೋ? ನಿಮ್ಮ ಕ್ರಮ ಸಮವಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆದರೆ ಇಸ್ರಾಯೇಲ್ ಜನರು, ‘ಯೆಹೋವ ದೇವರ ಮಾರ್ಗ ನೀತಿಯುಕ್ತವಲ್ಲ,’ ಎನ್ನುತ್ತಾರೆ. ಇಸ್ರಾಯೇಲ್ ಜನರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಅನೀತಿಯ ಮಾರ್ಗಗಳಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:29
6 ತಿಳಿವುಗಳ ಹೋಲಿಕೆ  

ದೇವರು ಹೇಳಿದ್ದೇನೆಂದರೆ: “ಒಂದುವೇಳೆ ನೀವು ಹೇಳಬಹುದು: ‘ನನ್ನ ಒಡೆಯನಾದ ದೇವರ ಕ್ರಮವು ದೃಢವಾಗಿಲ್ಲ.’ ಆದರೆ, ಇಸ್ರೇಲಿನ ಜನರೇ, ಕೇಳಿರಿ. ನಿಮ್ಮ ನಡತೆಯೇ ದೃಢವಾಗಿಲ್ಲ.


ಮೂಢನ ಮೂಢತನವು ಅವನ ಜೀವನವನ್ನೇ ನಾಶಪಡಿಸುತ್ತದೆ. ಆದರೆ ಅವನು ದೂಷಿಸುವುದು ಯೆಹೋವನನ್ನೇ.


“ಇಸ್ರೇಲ್ ದೇಶದ ಕುರಿತಾದ ಈ ಗಾದೆಯನ್ನು ನೀವೆಲ್ಲರೂ ಮರುನುಡಿಯುವುದೇಕೆ? ‘ಹೆತ್ತವರು ಹುಳಿ ದ್ರಾಕ್ಷಿಹಣ್ಣನ್ನು ತಿಂದಾಗ ಮಕ್ಕಳ ಬಾಯಿ ಹುಳಿಯಾಗುವುದು.’”


ತಾನು ಎಷ್ಟು ಕೆಟ್ಟವನಾಗಿ ಜೀವಿಸಿದನೆಂದು ತಿಳಿದು ನನ್ನ ಕಡೆಗೆ ತಿರುಗಿ ದುಷ್ಟತನ ಮಾಡುವದನ್ನು ನಿಲ್ಲಿಸಿದರೆ. ಅಂಥವನು ಸಾಯದೆ, ಬಾಳುವನು.”


ಇಸ್ರೇಲರೇ, ನಾನು ಪ್ರತಿಯೊಬ್ಬನನ್ನು ಅವನವನ ಕಾರ್ಯಗಳ ಪ್ರಕಾರ ನ್ಯಾಯತೀರಿಸುವೆನು” ಎಂದು ಹೇಳಿದನು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆದ್ದರಿಂದ ನನ್ನ ಬಳಿಗೆ ಬನ್ನಿರಿ, ದುಷ್ಟತನ ಮಾಡುವದನ್ನು ನಿಲ್ಲಿಸಿರಿ, ಪಾಪವು ನಿಮ್ಮ ನಾಶನಕ್ಕೆ ಕಾರಣವಾಗದಂತೆ ಎಚ್ಚರಿಕೆಯಾಗಿರಿ.


ಯೆಹೋವನಲ್ಲದೆ ಬೇರೆ ಯಾವ ದೇವರೂ ಇಲ್ಲ. ನಮ್ಮ ದೇವರಲ್ಲದೆ ಬೇರೆ ಯಾವ ಬಂಡೆಯೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು