ಯೆಹೆಜ್ಕೇಲನು 18:30 - ಪರಿಶುದ್ದ ಬೈಬಲ್30 ಇಸ್ರೇಲರೇ, ನಾನು ಪ್ರತಿಯೊಬ್ಬನನ್ನು ಅವನವನ ಕಾರ್ಯಗಳ ಪ್ರಕಾರ ನ್ಯಾಯತೀರಿಸುವೆನು” ಎಂದು ಹೇಳಿದನು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆದ್ದರಿಂದ ನನ್ನ ಬಳಿಗೆ ಬನ್ನಿರಿ, ದುಷ್ಟತನ ಮಾಡುವದನ್ನು ನಿಲ್ಲಿಸಿರಿ, ಪಾಪವು ನಿಮ್ಮ ನಾಶನಕ್ಕೆ ಕಾರಣವಾಗದಂತೆ ಎಚ್ಚರಿಕೆಯಾಗಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪು ನೀಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ಪಾಪಕ್ಕೆ ವಿಮುಖರಾಗಿರಿ; ನಿಮ್ಮ ಅಪರಾಧಗಳನ್ನೆಲ್ಲಾ ತೊರೆದುಬಿಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ಆದ್ದರಿಂದ ಇಸ್ರಾಯೇಲ್ ಜನರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ಪ್ರತಿಯೊಬ್ಬನಿಗೆ ನ್ಯಾಯತೀರಿಸುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿಮ್ಮ ದುಷ್ಟತನಗಳನ್ನೆಲ್ಲಾ ಬಿಟ್ಟು ತಿರುಗಿಕೊಳ್ಳಿರಿ. ಆಗ ಪಾಪವು ನಿಮ್ಮ ಪತನಕ್ಕೆ ಕಾರಣವಾಗುವುದಿಲ್ಲ. ಅಧ್ಯಾಯವನ್ನು ನೋಡಿ |
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’
ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.