ಯೆಹೆಜ್ಕೇಲನು 18:32 - ಪರಿಶುದ್ದ ಬೈಬಲ್32 ನಿಮ್ಮನ್ನು ಸಾಯಿಸಲು ನನಗೆ ಇಷ್ಟವಿಲ್ಲ. ನೀವು ನನ್ನ ಕಡೆಗೆ ಹಿಂದಿರುಗಿ ಜೀವಿಸಿರಿ.” ಇದು ನನ್ನ ಒಡೆಯನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪದಿಂದ ತಿರುಗಿಕೊಂಡು ಜೀವಿಸಿರಿ” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪಕ್ಕೆ ವಿಮುಖರಾಗಿ ಜೀವಿಸಿರಿ; ಇದು ಸರ್ವೇಶ್ವರನಾದ ದೇವರ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಸಾಯುವವರ ಸಾವಿನಲ್ಲಿ ನನಗೆ ಸಂತೋಷವಿಲ್ಲ; ತಿರುಗಿಕೊಂಡು ಬಾಳಿರಿ; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಏಕೆಂದರೆ ಯಾವುದೇ ವ್ಯಕ್ತಿಯ ಸಾವಿನಲ್ಲಿ ನನಗೆ ಸಂತೋಷವಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಆದಕಾರಣ ಮಾನಸಾಂತರಪಟ್ಟು ಬಾಳಿರಿ. ಅಧ್ಯಾಯವನ್ನು ನೋಡಿ |
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’