ಯೆಹೆಜ್ಕೇಲನು 18:4 - ಪರಿಶುದ್ದ ಬೈಬಲ್4 ಎಲ್ಲಾ ಪ್ರಾಣಗಳು ನನ್ನವೇ. ತಂದೆಯ ಪ್ರಾಣವೂ ಮಗನ ಪ್ರಾಣವೂ ನನ್ನವೇ. ಪಾಪಮಾಡುವವನು ಮಾತ್ರ ಸಾಯುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಎಲ್ಲಾ ಪ್ರಾಣಗಳು ನನ್ನವೇ, ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ. ಪಾಪ ಮಾಡುವವನೇ ಸಾಯುವನು. ಅಧ್ಯಾಯವನ್ನು ನೋಡಿ |
ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿನ ನಿಯಮಗಳಿಗನುಸಾರವಾಗಿ ಅವನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಯೆಹೋವನು, “ಮಕ್ಕಳು ಮಾಡಿದ ತಪ್ಪಿಗೆ ತಂದೆತಾಯಿಗಳನ್ನು ಸಾವಿಗೆ ಗುರಿಪಡಿಸಬಾರದು. ತಂದೆತಾಯಿಗಳು ಮಾಡಿದ ತಪ್ಪಿಗೆ ಅವರ ಮಕ್ಕಳನ್ನು ಸಾವಿಗೆ ಗುರಿಪಡಿಸಬಾರದು. ಒಬ್ಬ ವ್ಯಕ್ತಿಯನ್ನು ಅವನು ಮಾಡಿದ ಕೆಟ್ಟಕಾರ್ಯಕ್ಕಾಗಿ ಮಾತ್ರ ಸಾವಿಗೆ ಗುರಿಪಡಿಸಬೇಕು” ಎಂದು ಆಜ್ಞಾಪಿಸಿದ್ದಾನೆ.
ನಾನು ದುಷ್ಟನಿಗೆ, ‘ನೀನು ಸಾಯುವೆ’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸಬೇಕು. ಅವನು ತನ್ನ ಪ್ರಾಣವನ್ನು ರಕ್ಷಿಸಿಕೊಳ್ಳುವದಕ್ಕಾಗಿ ತನ್ನ ಜೀವಿತವನ್ನು ಮಾರ್ಪಡಿಸಿಕೊಂಡು ದುಷ್ಕೃತ್ಯ ನಿಲ್ಲಿಸಬೇಕೆಂದು ನೀನು ಅವನಿಗೆ ಹೇಳಬೇಕು. ನೀನು ಅವನನ್ನು ಎಚ್ಚರಿಸದಿದ್ದರೆ ಅವನು ತನ್ನ ಪಾಪದ ದೆಸೆಯಿಂದ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೇ ಹೊಣೆಗಾರನನ್ನಾಗಿ ಮಾಡುತ್ತೇನೆ.