Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:7 - ಪರಿಶುದ್ದ ಬೈಬಲ್‌

7 ಆ ಒಳ್ಳೆಯ ಮನುಷ್ಯನು ಜನರ ಬಲಹೀನತೆಯನ್ನು ದುರುಪಯೋಗಪಡಿಸಿಕೊಳ್ಳುವುದಿಲ್ಲ; ಸಾಲ ಮಾಡಿದವನ ಒತ್ತೆಯನ್ನು ಬಿಗಿಹಿಡಿಯುವುದಿಲ್ಲ; ಯಾರ ಸೊತ್ತನ್ನೂ ದರೋಡೆ ಮಾಡುವುದಿಲ್ಲ; ಹಸಿದವನಿಗೆ ಅನ್ನ ಕೊಡುವನು; ಬಟ್ಟೆಯಿಲ್ಲದವನಿಗೆ ಬಟ್ಟೆ ಕೊಡುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮುಟ್ಟಿನ ಹೆಂಗಸನ್ನು ಸೇರದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮುಟ್ಟಿನ ಹೆಂಗಸನ್ನು ಕೂಡದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆ ಇರುವವನಿಗೆ ಹೊದಿಕೆಯನ್ನು ಹೊದಿಸಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮುಟ್ಟಿನ ಹೆಂಗಸನ್ನು ಸೇರದೆ ಯಾರನ್ನೂ ಹಿಂಸಿಸದೆ ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ ಯಾರ ಸೊತ್ತನ್ನೂ ಅಪಹರಿಸದೆ ಹಸಿದವನಿಗೆ ಅನ್ನವಿಕ್ಕಿ ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯಾರನ್ನೂ ಉಪದ್ರವಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸೆ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆಯಿರುವವನಿಗೆ ಬಟ್ಟೆಯನ್ನು ಹೊದಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:7
61 ತಿಳಿವುಗಳ ಹೋಲಿಕೆ  

ಆ ಒಳ್ಳೆಯ ಮಗನು ಯಾರ ಮೇಲೂ ದಬ್ಬಾಳಿಕೆ ನಡೆಸುವುದಿಲ್ಲ. ಅವನು ಒತ್ತೆಯಿಲ್ಲದೆ ಸಾಲಕೊಡುವನು. ಅವನು ಯಾರನ್ನೂ ದರೋಡೆ ಮಾಡುವುದಿಲ್ಲ. ಅವನು ಹಸಿದವರಿಗೆ ಊಟ ಕೊಡುವನು; ಬಟ್ಟೆಯಿಲ್ಲದವರಿಗೆ ಬಟ್ಟೆಯನ್ನು ಕೊಡುವನು.


ಬಡ, ನಿಸ್ಸಹಾಯಕರಾದ ಜನರಿಗೆ ಕಿರುಕುಳ ಕೊಟ್ಟಿರಬಹುದು. ಜನರ ನಿಸ್ಸಹಾಯಕತೆಯ ಪ್ರಯೋಜನ ಪಡೆಯುತ್ತಿರಬಹುದು. ಒತ್ತೆಗೆ ತೆಗೆದುಕೊಂಡ ವಸ್ತುವನ್ನು ಹಿಂದಕ್ಕೆ ಕೊಡದೆ ಇದ್ದಿರಬಹುದು. ಆ ಮಗನು ವಿಗ್ರಹಗಳಿಗೆ ಪ್ರಾರ್ಥಿಸಿ ಇನ್ನೂ ಅನೇಕ ಭಯಂಕರ ಕೃತ್ಯಗಳನ್ನೂ ಮಾಡಿದ್ದಿರಬಹುದು.


ಯಾವನಾದರೂ ನೀವು ಕೊಟ್ಟ ಸಾಲಕ್ಕೆ ತನ್ನ ಅಂಗಿಯನ್ನು ಒತ್ತೆಯಾಗಿಟ್ಟರೆ, ಸೂರ್ಯನು ಮುಳುಗುವ ಮೊದಲೇ ನೀವು ಆ ಅಂಗಿಯನ್ನು ಅವನಿಗೆ ಹಿಂತಿರುಗಿಸಬೇಕು.


ಒತ್ತೆ ತೆಗೆದುಕೊಂಡಿದ್ದ ವಸ್ತುಗಳನ್ನು ಹಿಂದಕ್ಕೆ ಕೊಟ್ಟು, ತಾನು ಕದ್ದುಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಜೀವಕರವಾದ ಕಟ್ಟಳೆಗಳನ್ನು ಅನುಸರಿಸಿದರೆ ಆ ಮನುಷ್ಯನು ಖಂಡಿತವಾಗಿ ಬದುಕುವನು. ಅವನನ್ನು ಸಾಯಿಸುವುದಿಲ್ಲ.


ಯೋಹಾನನು, “ನಿಮ್ಮಲ್ಲಿ ಎರಡು ಅಂಗಿಗಳಿದ್ದರೆ, ಏನೂ ಇಲ್ಲದವನಿಗೆ ಒಂದು ಕೊಡಿರಿ. ನಿಮ್ಮಲ್ಲಿ ಆಹಾರವಿದ್ದರೆ, ಅದನ್ನೂ ಹಂಚಿಕೊಡಿರಿ” ಎಂದು ಹೇಳಿದನು.


ಬಡಜನರ ಬಟ್ಟೆಗಳನ್ನು ತೆಗೆದುಕೊಂಡು ತಾವು ವೇದಿಕೆಯ ಮೇಲೆ ಯಜ್ಞ ಮಾಡುತ್ತಿರುವಾಗ ಆ ಬಟ್ಟೆಗಳ ಮೇಲೆ ಕುಳಿತುಕೊಳ್ಳುವರು. ಬಡವರಿಗೆ ಸಾಲಕೊಟ್ಟು ಅವರು ಬಟ್ಟೆಗಳನ್ನು ಒತ್ತೆಗೆ ತೆಗೆದುಕೊಳ್ಳುವರು. ಅವರು ಜನರಿಗೆ ದಂಡ ವಿಧಿಸಿ, ಆ ಹಣದಿಂದ ದ್ರಾಕ್ಷಾರಸವನ್ನು ಕೊಂಡುಕೊಂಡು ದೇವರ ಆಲಯದಲ್ಲಿ ಕುಡಿಯುವರು.


ತಂದೆಯು ಜನರನ್ನು ಹೆದರಿಸಿಯಾಗಲಿ ದರೋಡೆ ಮಾಡಿಯಾಗಲಿ ವಸ್ತುಗಳನ್ನು ತೆಗೆದುಕೊಂಡಿರಬಹುದು. ತನ್ನ ಜನರ ಮಧ್ಯದಲ್ಲಿ ಕೆಟ್ಟದಾಗಿರುವುದನ್ನು ಅವನು ಮಾಡಿರಬಹುದು. ಆ ತಂದೆಯು ತನ್ನ ಪಾಪಗಳ ಸಲುವಾಗಿ ಸಾಯುವನು. ಆದರೆ ತಂದೆಯ ಪಾಪಗಳಿಗಾಗಿ ಮಗನು ಶಿಕ್ಷಿಸಲ್ಪಡುವುದಿಲ್ಲ.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಆ ಸಮಯದಲ್ಲಿ ಹೊಸ್ತಿಲನ್ನು ಹಾರಿ ತಮ್ಮ ಒಡೆಯರ ಮನೆಯನ್ನು ತಮ್ಮ ಸುಳ್ಳು, ಮೋಸ, ಹಿಂಸೆಗಳಿಂದ ತುಂಬಿರುವವರನ್ನು ಶಿಕ್ಷಿಸುತ್ತೇನೆ” ಎಂದು ಯೆಹೋವನು ನುಡಿಯುತ್ತಾನೆ.


ನೀವು ಶಿಷ್ಟತನವನ್ನು ದ್ವೇಷಿಸಿ ದುಷ್ಟತನವನ್ನು ಪ್ರೀತಿಸುತ್ತೀರಿ! ನೀವು ಜನರ ಚರ್ಮವನ್ನು ಸುಲಿಯುತ್ತಾ ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ತೆಗೆಯುತ್ತೀರಿ.


ಪಾಪಮಾಡಲು ಯೋಚಿಸುವವರಿಗೆ ಸಂಕಟವು ಒದಗುವದು. ಇವರು ಹಾಸಿಗೆಯ ಮೇಲೆ ಬಿದ್ದುಕೊಂಡು ಪಾಪಮಾಡಲು ಯೋಚಿಸುತ್ತಾರೆ. ಬೆಳಿಗ್ಗೆ ಸೂರ್ಯ ಮೂಡಲು ತಾವು ಯೋಚಿಸಿದ ಪಾಪವನ್ನು ಕಾರ್ಯಗತ ಮಾಡುತ್ತಾರೆ. ಯಾಕೆ? ಯಾಕೆಂದರೆ ಅವರಿಗೆ ತಮ್ಮ ಇಷ್ಟಪ್ರಕಾರ ನಡೆದುಕೊಳ್ಳಲು ಬಲವಿದೆ.


ಶಿಕ್ಷಿಸಲ್ಪಡುವ ದಿವಸದ ಕಡೆಗೆ ನೀವು ಧಾವಿಸುತ್ತಿದ್ದೀರಿ. ಅಕ್ರಮ ಆಳ್ವಿಕೆಯನ್ನು ನೀವು ಹತ್ತಿರಕ್ಕೆ ಬರಮಾಡಿಕೊಳ್ಳುತ್ತಾ ಇದ್ದೀರಿ.


“ಸೆರೆಯವರಿಗಾಗಿ ಸರಪಣಿಗಳನ್ನು ಮಾಡು. ದೇಶವು ಕೊಲೆಯ ಅಪರಾಧಗಳಿಂದ ತುಂಬಿದೆ. ಪಟ್ಟಣದಲ್ಲಿ ಹಿಂಸೆಯು ತುಂಬಿದೆ.


ಯೆಹೋವನು ಅನ್ನುತ್ತಾನೆ, ನಿಮ್ಮ ಆಚರಣೆ ನೀತಿಬದ್ಧವಾಗಿಯೂ ನ್ಯಾಯಬದ್ಧವಾಗಿಯೂ ಇರಲಿ. ಸುಲಿಗೆಗೀಡಾದವರನ್ನು ದೋಚಿಕೊಂಡವನಿಂದ ರಕ್ಷಿಸಿರಿ. ಅನಾಥರನ್ನು ಮತ್ತು ವಿಧವೆಯರನ್ನು ಹಿಂಸಿಸಬೇಡಿ; ನಿರಪರಾಧಿಗಳನ್ನು ಕೊಲ್ಲಬೇಡಿ.


ಪ್ರಾಮಾಣಿಕರಾಗಿರುವ ನೀತಿವಂತರು ಹಣಕ್ಕಾಗಿ ಇತರರಿಗೆ ಹಾನಿಮಾಡದವರಾಗಿದ್ದಾರೆ. ಅವರು ಆ ಬೆಂಕಿಯಲ್ಲಿ ವಾಸಿಸುವರು. ಅವರು ಲಂಚ ತೆಗೆದುಕೊಳ್ಳಲು ನಿರಾಕರಿಸುವರು. ಇತರರನ್ನು ಕೊಲೆಮಾಡುವ ಯೋಜನೆಯನ್ನು ಕೇಳಲು ಅವರು ಇಷ್ಟಪಡುವುದಿಲ್ಲ. ಅವರು ಕೆಟ್ಟಕಾರ್ಯಗಳ ಯೋಜನೆಗಳನ್ನು ನೋಡುವುದಿಲ್ಲ.


ಸರ್ವಶಕ್ತನಾದ ಯೆಹೋವನ ದ್ರಾಕ್ಷಿತೋಟವೇ ಇಸ್ರೇಲ್ ದೇಶ. ಯೆಹೋವನು ಪ್ರೀತಿಸುವ ದ್ರಾಕ್ಷಿಬಳ್ಳಿಯೇ ಯೆಹೂದದ ಪ್ರಜೆ. ಯೆಹೋವನು ನ್ಯಾಯವನ್ನು ಅಪೇಕ್ಷಿಸಿದರೂ ಸಿಕ್ಕಿದ್ದು ನರಹತ್ಯವೇ. ಯೆಹೋವನು ಧರ್ಮವನ್ನು ಅಪೇಕ್ಷಿಸಿದರೂ ದೊರಕಿದ್ದು ಗೋಳಾಟವೇ.


ಒಳ್ಳೆಯದನ್ನೇ ಮಾಡಲು ಅಭ್ಯಾಸಮಾಡಿಕೊಳ್ಳಿರಿ. ಬೇರೆಯವರೊಂದಿಗೆ ನ್ಯಾಯವಂತರಾಗಿರಿ; ಕೆಡುಕರಿಗೆ ದಂಡನೆ ವಿಧಿಸಿರಿ; ಅನಾಥರಿಗೆ ಸಹಾಯಮಾಡಿರಿ; ವಿಧವೆಯರಿಗೂ ಸಹಾಯಮಾಡಿರಿ.”


ಬಡವರಿಗೆ ಕೊಡುವವನು ತನಗೆ ಅಗತ್ಯವಾದ ಪ್ರತಿಯೊಂದನ್ನೂ ಹೊಂದಿಕೊಳ್ಳುವನು. ಬಡವರಿಗೆ ಸಹಾಯಮಾಡದವನಿಗೆ ಅನೇಕ ಶಾಪಗಳು ಬರುತ್ತವೆ.


ಬಡವರಿಗೆ ಮೋಸಮಾಡಿ ಗಳಿಸಿದ ಐಶ್ವರ್ಯ ಕಳೆದುಹೋಗುವುದು; ಬಡವರಿಗೆ ದಯೆ ತೋರುವವನಿಗೆ ಅದು ದೊರೆಯುವುದು.


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ.


ಬಲಾತ್ಕಾರಿಯನ್ನು ಕಂಡು ಹೊಟ್ಟೆಕಿಚ್ಚುಪಡಬೇಡ; ಅವನ ನಡತೆಯನ್ನು ಅನುಸರಿಸಬೇಡ.


ಅವನು ಬಡವರಿಗೆ ಉದಾರವಾಗಿ ಕೊಡುವನು. ಅವನ ಸತ್ಕಾರ್ಯಗಳು ಶಾಶ್ವತವಾಗಿವೆ. ಅವನು ಗೌರವವನ್ನು ಪಡೆದುಕೊಳ್ಳುವನು.


ಆತನು ನೀತಿವಂತರಿಗೆ ಕತ್ತಲೆಯಲ್ಲಿ ಪ್ರಕಾಶಿಸುವ ಬೆಳಕಿನಂತಿರುವನು. ಆತನು ಒಳ್ಳೆಯವನೂ ದಯಾಮಯನೂ ಕೃಪಾಮಯನೂ ಆಗಿದ್ದಾನೆ.


ಯಾವನು ಬಡಜನರನ್ನು ಅಭಿವೃದ್ಧಿಪಡಿಸುವನೋ ಅವನೇ ಧನ್ಯನು. ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.


ದುಷ್ಟರು ತಂದೆಯಿಲ್ಲದ ಮಗುವನ್ನು ಅದರ ತಾಯಿಯಿಂದ ಕಿತ್ತುಕೊಳ್ಳುವರು. ಬಡವರ ಮಗುವನ್ನು ಸಾಲಕ್ಕೆ ಒತ್ತೆಯಾಗಿಟ್ಟುಕೊಳ್ಳುವರು.


ಅವರು ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುವರು; ವಿಧವೆಯ ಹಸುವನ್ನು ಒತ್ತೆಯಿಟ್ಟುಕೊಳ್ಳುವರು;


ಯೋಬನೇ, ನೀನು ನಿಷ್ಕಾರಣವಾಗಿ ನಿನ್ನ ಸಹೋದರರ ವಸ್ತುಗಳನ್ನು ಒತ್ತೆಯಿಟ್ಟುಕೊಂಡು ಸಾಲ ಕೊಟ್ಟಿರಬಹುದು. ಜನರ ಬಟ್ಟೆಗಳನ್ನು ತೆಗೆದುಕೊಂಡು ಅವರನ್ನು ಬೆತ್ತಲೆ ಮಾಡಿರಬಹುದು.


“ಪರದೇಶಸ್ಥರನ್ನು ಮತ್ತು ಅನಾಥರನ್ನು ಯೋಗ್ಯವಾದ ರೀತಿಯಲ್ಲಿ ನೋಡಿಕೊಳ್ಳಬೇಕು. ವಿಧವೆಯರ ಬಟ್ಟೆಗಳನ್ನು ಒತ್ತೆಯಿಟ್ಟುಕೊಳ್ಳಕೂಡದು.


“ನೀವು ಕೊಡುವ ತೀರ್ಪು ನ್ಯಾಯವಾಗಿರಬೇಕು. ಬಡವರ ಬಡತನವನ್ನಾಗಲಿ ಪ್ರಾಮುಖ್ಯರ ದೊಡ್ಡಸ್ತಿಕೆಯನ್ನಾಗಲಿ ಗಮನಿಸದೆ ಪಕ್ಷಪಾತವಿಲ್ಲದೆ ತೀರ್ಪುಕೊಡಬೇಕು. ನೀವು ನಿಮ್ಮ ನೆರೆಯವನಿಗೆ ತೀರ್ಪುಮಾಡುವಾಗ ನ್ಯಾಯದ ತೀರ್ಪುಕೊಡಿರಿ.


“ನೀವು ಪರದೇಶಸ್ಥರಿಗೆ ತೊಂದರೆ ಕೊಡಬಾರದು. ನೀವು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.


ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಇಸ್ರೇಲನ್ನು ನಾನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ಸ್ವಲ್ಪ ಬೆಳ್ಳಿಗಾಗಿ ಒಳ್ಳೆಯವರನ್ನೂ ಮತ್ತು ನಿರಪರಾಧಿಗಳನ್ನೂ ಮಾರಿದರು; ಒಂದು ಜೊತೆ ಕೆರಗಳ ಕ್ರಯಕ್ಕೆ ಬಡ ಜನರನ್ನು ಮಾರಿದರು.


“ಭೂಮಿಯನ್ನು ನೆರೆಯವನಿಗೆ ಮಾರುವಾಗ ಅಥವಾ ಅವನಿಂದ ಭೂಮಿಯನ್ನು ಕೊಂಡುಕೊಳ್ಳುವಾಗ ಮೋಸ ಮಾಡಬೇಡಿ.


“ನಿಮ್ಮ ನೆರೆಯವನಿಗೆ ಕೆಡುಕುಗಳನ್ನು ಮಾಡಬಾರದು. ನೀವು ಅವನನ್ನು ಸುಲಿಗೆ ಮಾಡಬಾರದು. ನಿಮ್ಮ ಕೂಲಿಯವರ ಕೂಲಿಯನ್ನು ಮರುದಿನದ ಮುಂಜಾನೆಯವರೆಗೆ ಹಿಡಿದಿಟ್ಟುಕೊಳ್ಳಬಾರದು.


ದೇವರು ಹೇಳಿದ್ದೇನೆಂದರೆ, “ನಿನ್ನ ತಂಗಿ ಸೊದೋಮ್ ಮತ್ತು ಆಕೆಯ ಹೆಣ್ಣುಮಕ್ಕಳು ಕೊಬ್ಬಿದ ಕಣ್ಣುಳ್ಳವರಾಗಿದ್ದರು. ಅವರಿಗೆ ತಿನ್ನಲು ಬೇಕಾದಷ್ಟಿತ್ತು. ಅವರು ಶಾಂತಿಕರವಾದ ಸುಭದ್ರತೆಯಲ್ಲಿ ಜೀವಿಸಿದರು. ಅವರು ಬಡವರಿಗೆ ಸಹಾಯ ಮಾಡಲಿಲ್ಲ.


ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.


“ನನ್ನ ಜನರಲ್ಲಿ ಬಡವನಾಗಿರುವವನಿಗೆ ನೀವು ಹಣವನ್ನು ಸಾಲಕೊಟ್ಟರೆ, ನೀವು ಆ ಹಣಕ್ಕೆ ಬಡ್ಡಿ ಕೇಳಬಾರದು. ಬೇಗನೆ ಮರುಪಾವತಿ ಮಾಡುವಂತೆ ಅವನನ್ನು ಬಲವಂತಪಡಿಸಬಾರದು.


ನನ್ನ ಜನರು, ನನ್ನ ಬಂಧುಗಳು ಮತ್ತು ನಾನು ಹಣವನ್ನು ದವಸಧಾನ್ಯಗಳನ್ನು ಎರವಲಾಗಿ ಕೊಡುತ್ತೇವೆ. ಆದರೆ ಅವರಿಂದ ಬಡ್ಡಿಯನ್ನು ವಸೂಲು ಮಾಡುವುದಿಲ್ಲ. ಸಾಲ ಪಡೆದುಕೊಂಡವರಿಂದ ಬಡ್ಡಿಯನ್ನು ಬಲವಂತದಿಂದ ವಸೂಲು ಮಾಡುವುದನ್ನು ನಾವು ನಿಲ್ಲಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು