Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:9 - ಪರಿಶುದ್ದ ಬೈಬಲ್‌

9 ಅವನು ನನ್ನ ನಿಯಮಗಳಿಗನುಸಾರವಾಗಿ ಜೀವಿಸುವನು ಮತ್ತು ನನ್ನ ಕಟ್ಟಳೆಗಳಿಗೆ ನಂಬಿಗಸ್ತಿಕೆಯಿಂದ ವಿಧೇಯನಾಗುವನು. ಅಂಥಾ ಮನುಷ್ಯನು ನೀತಿವಂತನಾಗಿದ್ದಾನೆ ಮತ್ತು ಅವನು ಖಂಡಿತವಾಗಿಯೂ ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು, ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವುದರಿಂದ ಖಂಡಿತವಾಗಿ ಜೀವಿಸುವನು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಗೊಂಡು, ಸತ್ಯಪರನಾಗಿಯೇ ನಡೆದರೆ, ಇಂಥವನು ಸದ್ಧರ್ಮಿ. ಆದುದರಿಂದ ಅವನು ಜೀವಿಸುವುದು ನಿಶ್ಚಯ. ಇದು ಸರ್ವೇಶ್ವರನಾದ ದೇವರ ನುಡಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವದರಿಂದ ಬಾಳೇ ಬಾಳುವನು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸತ್ಯವನ್ನು ನಡೆಸುವುದಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಗೊಂಡು ಸತ್ಯಪರನಾಗಿ ನಡೆದರೆ, ಅವನು ನೀತಿವಂತನು ಮತ್ತು ನಿಶ್ಚಯವಾಗಿ ಬದುಕುವನು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:9
37 ತಿಳಿವುಗಳ ಹೋಲಿಕೆ  

ಯಾವ ಜನರು ಅದರ ವಿಚಾರವಾಗಿ ಕೇಳಲು ನಿರಾಕರಿಸುವರೋ ಅವರಿಗಾಗಿ ಈ ಸಂದೇಶವಿರುವದಿಲ್ಲ. ಆದರೆ ಒಬ್ಬ ಸತ್ಪುರುಷನು ಈ ಸಂದೇಶವನ್ನು ನಂಬುವನು. ಆ ಸತ್ಪುರುಷನು ತಾನು ನಂಬಿದ ನಿಮಿತ್ತವಾಗಿ ಬದುಕುವನು.”


ಅಲ್ಲಿ ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟೆನು. ನನ್ನ ವಿಧಿನಿಯಮಗಳನ್ನು ತಿಳಿಸಿದೆನು. ಅವುಗಳನ್ನು ಕೈಕೊಂಡು ನಡೆಯುವ ಎಲ್ಲರೂ ಜೀವಿಸುತ್ತಾರೆ.


ಇಸ್ರೇಲ್ ಜನಾಂಗಕ್ಕೆ ಯೆಹೋವನು ಹೀಗೆನ್ನುತ್ತಾನೆ: “ನನ್ನನ್ನು ಹುಡುಕುತ್ತಾ ಬಂದು ಬದುಕುವವನಾಗು.


ಅವನು ಬಡವರಿಗೆ ನೋವು ಮಾಡುವುದಿಲ್ಲ. ಅವನು ಹಣವನ್ನು ಸಾಲಕೊಡುವಾಗ ಬಡ್ಡಿಹಾಕುವುದಿಲ್ಲ. ಅವನು ನನ್ನ ಕಟ್ಟಳೆಗಳಿಗೆ ವಿಧೇಯನಾಗುವನು. ಮತ್ತು ನನ್ನ ನಿಯಮಗಳನ್ನು ಅನುಸರಿಸುವನು. ಈ ಒಳ್ಳೆಯ ಮಗನು ತಂದೆಯ ದುಷ್ಟತನದ ಕಾರಣಕ್ಕಾಗಿ ಮರಣಶಿಕ್ಷೆಯನ್ನು ಅನುಭವಿಸುವದಿಲ್ಲ. ಆ ಒಳ್ಳೆಯ ಮಗನು ಬಾಳುವನು.


ಕ್ರಿಸ್ತನು ನೀತಿವಂತನೆಂಬುದು ನಿಮಗೆ ತಿಳಿದಿದೆ. ಆದ್ದರಿಂದ ಯೋಗ್ಯವಾದುದನ್ನು ಮಾಡುವ ಜನರೆಲ್ಲರೂ ದೇವರ ಮಕ್ಕಳೆಂಬುದು ನಿಮಗೆ ತಿಳಿದಿದೆ.


ಹೇಗೆಂದರೆ, ದೇವರಿಂದ ದೊರೆಯುವ ನೀತಿಯು ಅದರಲ್ಲಿ ತೋರಿಬರುತ್ತದೆ. ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುತ್ತದೆ. ಪವಿತ್ರ ಗ್ರಂಥವು ಹೇಳುವಂತೆ, “ನೀತಿವಂತನು ನಂಬಿಕೆಯಿಂದಲೇ ಜೀವಿಸುತ್ತಾನೆ.”


ಪ್ರಿಯ ಮಕ್ಕಳೇ, ನಿಮ್ಮನ್ನು ಯಾರೂ ತಪ್ಪುಮಾರ್ಗಕ್ಕೆ ಎಳೆಯದಂತೆ ನೋಡಿಕೊಳ್ಳಿರಿ. ಕ್ರಿಸ್ತನು ನೀತಿವಂತನಾಗಿದ್ದಾನೆ. ಆತನಂತೆ ನೀತಿವಂತನಾಗಿರಲು ಬಯಸುವವನು ಒಳ್ಳೆಯದನ್ನು ಮಾಡಬೇಕು.


ಈ ಕಾರಣದಿಂದ ನಾನು ಯಾವುದನ್ನು ಸರಿಯಾದದ್ದು ಎಂದು ನಂಬಿದ್ದೇನೋ ಅದನ್ನು ದೇವರ ಮುಂದೆಯೂ ಮನುಷ್ಯರ ಮುಂದೆಯೂ ಮಾಡಲು ಯಾವಾಗಲು ಪ್ರಯತ್ನಿಸುತ್ತಿದ್ದೇನೆ.


ಒಬ್ಬನು ನನ್ನ ಆಜ್ಞೆಗಳನ್ನು ಸ್ವೀಕರಿಸಿಕೊಂಡು ಅವುಗಳಿಗೆ ವಿಧೇಯನಾದರೆ ಅವನು ನನ್ನನ್ನು ನಿಜವಾಗಿಯೂ ಪ್ರೀತಿಸುವವನಾಗಿದ್ದಾನೆ. ಅಲ್ಲದೆ ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು ಮತ್ತು ನಾನೂ ಅವನನ್ನು ಪ್ರೀತಿಸುವೆನು. ನಾನು ಅವನಿಗೆ ನನ್ನನ್ನೇ ತೋರ್ಪಡಿಸಿಕೊಳ್ಳುವೆನು” ಎಂದು ಉತ್ತರಕೊಟ್ಟನು.


ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.


ನಿಮ್ಮ ದೇಶದಿಂದ ನ್ಯಾಯವು ಹರಿಯುವಂತೆ ಮಾಡಿರಿ. ಎಂದಿಗೂ ಬತ್ತದ ಒರತೆಯಂತೆ ನಿಮ್ಮ ಒಳ್ಳೆತನವು ಹರಿಯಲಿ.


ದೇವರು ನಿಮ್ಮೊಂದಿಗಿದ್ದಾನೆಂದು ನೀವು ಹೇಳುತ್ತೀರಿ. ಆದ್ದರಿಂದ ನೀವು ಕೆಟ್ಟಕಾರ್ಯವನ್ನು ಮಾಡದೆ ಒಳ್ಳೆಯ ಕಾರ್ಯಗಳನ್ನು ಮಾಡಬೇಕು. ಆಗ ನೀವು ಬದುಕುವಿರಿ. ಸರ್ವಶಕ್ತನಾದ ಯೆಹೋವನು ನಿಮ್ಮ ಬಳಿಯಲ್ಲಿ ಖಂಡಿತವಾಗಿಯೂ ಇರುವನು.


“‘ನನ್ನ ಸೇವಕನಾದ ದಾವೀದನು ಅವರ ರಾಜನಾಗುವನು. ಅವರೆಲ್ಲರಿಗೆ ಒಬ್ಬನೇ ಕುರುಬನಿರುವನು. ನಾನು ಹೇಳಿದ ಮಾತುಗಳಿಗೆ ಅವರು ವಿಧೇಯರಾಗುವರು; ನನ್ನ ಕಟ್ಟಳೆ ನಿಯಮಗಳಲ್ಲಿ ಅವರು ಬಾಳುವರು.


ನಾನು ನನ್ನ ಆತ್ಮವನ್ನು ನಿಮ್ಮಲ್ಲಿರಿಸುವೆನು. ನೀವು ನನ್ನ ನಿಯಮಗಳಿಗೆ ವಿಧೇಯರಾಗುವಷ್ಟು ನಿಮ್ಮ ಮನಸ್ಸನ್ನು ಬದಲಾಯಿಸುವೆನು. ಆಗ ನೀವು ನನ್ನ ಆಜ್ಞೆಗಳನ್ನು ಜಾಗ್ರತೆಯಿಂದ ಪಾಲಿಸುವಿರಿ.


ಒತ್ತೆ ತೆಗೆದುಕೊಂಡಿದ್ದ ವಸ್ತುಗಳನ್ನು ಹಿಂದಕ್ಕೆ ಕೊಟ್ಟು, ತಾನು ಕದ್ದುಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಜೀವಕರವಾದ ಕಟ್ಟಳೆಗಳನ್ನು ಅನುಸರಿಸಿದರೆ ಆ ಮನುಷ್ಯನು ಖಂಡಿತವಾಗಿ ಬದುಕುವನು. ಅವನನ್ನು ಸಾಯಿಸುವುದಿಲ್ಲ.


“‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.


“ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿರಿ. ಆತನು ಹೇಳಿದವುಗಳನ್ನೆಲ್ಲ ಮಾಡಿರಿ. ನೀವು ಕಟ್ಟಳೆಗಳಿಗೆ, ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ಯಾವಾಗಲೂ ವಿಧೇಯರಾಗಿರಬೇಕು.


ಇಸ್ರೇಲ್ ಸಮೂಹದವರನ್ನೆಲ್ಲಾ ಮೋಶೆ ಒಟ್ಟಾಗಿ ಸೇರಿಸಿ ಅವರಿಗೆ ಹೇಳಿದ್ದೇನೆಂದರೆ: “ಇಸ್ರೇಲ್ ಜನರೇ, ನಾನು ಈ ಹೊತ್ತು ಹೇಳುವ ಕಟ್ಟಳೆಗಳಿಗೆ ಕಿವಿಗೊಡಿರಿ. ಇವುಗಳನ್ನು ಕಲಿತುಕೊಂಡು ಪಾಲಿಸುವವರಾಗಿರಿ.


“ಇಸ್ರೇಲರೇ, ಈಗ ನಾನು ಉಪದೇಶಿಸಲಿರುವ ಕಟ್ಟಳೆಗಳಿಗೂ ಆಜ್ಞೆಗಳಿಗೂ ಕಿವಿಗೊಡಿರಿ. ನೀವು ಅವುಗಳಿಗೆ ವಿಧೇಯರಾದರೆ ಜೀವಿಸುವಿರಿ. ಆಗ ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿರಿ.


ಆದ್ದರಿಂದ ನೀವು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯರಾಗಬೇಕು. ಒಬ್ಬನು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯನಾದರೆ, ಅವನು ಜೀವಿಸುವನು! ನಾನೇ ಯೆಹೋವನು!


ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಅಪರಾಧಿಗಳೆಂದು ತೀರ್ಪಾಗುವುದಿಲ್ಲ.


ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ. ನನ್ನ ಆಜ್ಞೆಗೆ ನೀವು ಅವಿಧೇಯರಾದಿರಿ. ನನ್ನ ಕಟ್ಟಳೆಗಳಿಗೆ ನೀವು ವಿಧೇಯರಾಗಲಿಲ್ಲ. ನಿಮ್ಮ ಸುತ್ತಲೂ ಇರುವ ಜನಾಂಗಗಳಂತೆ ಇರಲು ನೀವು ನಿರ್ಧರಿಸಿರುತ್ತೀರಿ.”


“ಆದರೆ ಒಂದುವೇಳೆ ಆ ನೀತಿವಂತನ ಮಗನು ಒಳ್ಳೆಯ ಕಾರ್ಯಗಳನ್ನು ಮಾಡದೆ ದರೋಡೆ ಮಾಡುವವನೂ ಕೊಲೆಮಾಡುವವನೂ ಆಗಿರಬಹುದು.


“‘ತಂದೆಯ ಪಾಪಗಳಿಗಿರುವ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳದಿರುವದೇಕೆ?’ ಎಂದು ನೀವು ಕೇಳಬಹುದು. ಮಗನು ನ್ಯಾಯವಾದುದ್ದನ್ನು ಮತ್ತು ಸರಿಯಾದುದ್ದನ್ನು ಮಾಡಿದ್ದಾನೆ. ಅವನು ಎಚ್ಚರಿಕೆಯಿಂದ ನನ್ನ ಎಲ್ಲಾ ನಿಯಮಗಳಿಗೆ ವಿಧೇಯನಾಗಿದ್ದನು. ಆದ್ದರಿಂದ ಅವನು ಬಾಳುವನು.


ನಮ್ಮ ದೇವರಾದ ಯೆಹೋವನು ಹೇಳಿದಂತೆಯೇ, ಇಡೀ ಧರ್ಮಶಾಸ್ತ್ರಕ್ಕೆ ನಾವು ಚಾಚೂತಪ್ಪದೆ ಎಚ್ಚರಿಕೆಯಿಂದ ವಿಧೇಯರಾದರೆ, ನಾವು ಒಳ್ಳೆಯದನ್ನು ಮಾಡಿದೆವೆಂದು ದೇವರು ಹೇಳುತ್ತಾನೆ.’


ನಿನ್ನ ತಂದೆಯಾದ ದಾವೀದನು ಸೇವೆಮಾಡಿದಂತೆ ನೀನೂ ನನ್ನ ಸೇವೆಮಾಡಬೇಕು, ಅವನು ನ್ಯಾಯವಂತನಾಗಿದ್ದನು ಮತ್ತು ಯಥಾರ್ಥವಂತನಾಗಿದ್ದನು; ನೀನು ನನ್ನ ನಿಯಮಗಳಿಗೆ ವಿಧೇಯನಾಗಿರಬೇಕು ಮತ್ತು ನಾನು ನಿನಗೆ ಆಜ್ಞಾಪಿಸಿದವುಗಳನ್ನೆಲ್ಲ ಮಾಡಬೇಕು.


ನೀತಿಯ ಮಾರ್ಗದಲ್ಲಿ ಜೀವವಿದೆ. ಆದರೆ ಮರಣಕ್ಕೆ ನಡೆಸುವ ಮತ್ತೊಂದು ಮಾರ್ಗವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು