Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 19:1 - ಪರಿಶುದ್ದ ಬೈಬಲ್‌

1 ದೇವರು ನನಗೆ, “ಇಸ್ರೇಲರ ಅಧಿಪತಿಗಳ ವಿಷಯವಾದ ಈ ಶೋಕಗೀತೆಯನ್ನು ನೀನು ಹಾಡಬೇಕು” ಎಂದು ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಇಸ್ರಾಯೇಲಿನ ರಾಜರ ವಿಷಯವಾಗಿ ಈ ಶೋಕ ಗೀತೆಯನ್ನು ಹಾಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಇಸ್ರಯೇಲ್ ಅರಸರನ್ನು ಕುರಿತ ಈ ಶೋಕ ಗೀತೆಯನ್ನು ಹಾಡು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲಿನ ಪ್ರಭುಗಳ ವಿಷಯವಾಗಿ ಈ ಶೋಕಗೀತವನ್ನು ಎತ್ತು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನರ ವಿಷಯವಾಗಿ ಈ ಪ್ರಲಾಪವನ್ನೆತ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 19:1
34 ತಿಳಿವುಗಳ ಹೋಲಿಕೆ  

“ನರಪುತ್ರನೇ, ತೂರಿನ ವಿಷಯವಾದ ಶೋಕಗೀತೆಯನ್ನು ಹಾಡು.


ಅವರು ನಿನ್ನ ಬಗ್ಗೆ ಈ ಶೋಕಗೀತೆಯನ್ನು ಹಾಡುವರು: “‘ತೂರ್, ನೀನು ಹೆಸರುವಾಸಿಯಾದ ನಗರವಾಗಿದ್ದೆ. ನಿನ್ನಲ್ಲಿ ವಾಸಮಾಡಲು ಜನರು ಸಮುದ್ರದಾಚೆಯಿಂದ ಬಂದರು. ನೀನು ಪ್ರಸಿದ್ಧಳಾಗಿದ್ದೆ, ಆದರೆ ನೀನೀಗ ಹೋಗಿಬಿಟ್ಟೆ. ದ್ವೀಪವಾಗಿರುವ ನೀನು ಮತ್ತು ನಿನ್ನಲ್ಲಿ ವಾಸವಾಗಿದ್ದ ಜನರು ಸಮುದ್ರದಿಂದ ದೂರದಲ್ಲಿರುವುದರಿಂದ ಬಲಿಷ್ಠರಾಗಿದ್ದೀರಿ. ಭೂಮಿಯ ಮೇಲೆ ವಾಸವಾಗಿದ್ದ ಎಲ್ಲಾ ಜನರನ್ನು ನೀವು ಭಯಗೊಳಿಸಿದಿರಿ.


ಯೆಹೋಯಾಕೀಮನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರ ಜೊತೆಯಲ್ಲಿ ಸಮಾಧಿಮಾಡಿದರು. ಯೆಹೋಯಾಕೀಮನ ಮಗನಾದ ಯೆಹೋಯಾಖೀನನು ಅವನ ನಂತರ ಹೊಸ ರಾಜನಾದನು.


ಅದರ ಸ್ವಂತ ಕಾಂಡದಿಂದಲೇ ಬೆಂಕಿಯು ಹೊರಟುಬಂದು ಅದರ ಚಿಕ್ಕ ಕೊಂಬೆಗಳನ್ನು ಮತ್ತು ಫಲಗಳನ್ನು ನಾಶಮಾಡಿತು. ಈಗ ಬಲವಾದ ಕಾಂಡ ಅದರಲ್ಲಿಲ್ಲ. ಆಳುವದಕ್ಕೆ ರಾಜದಂಡವೂ ಅದರಲ್ಲಿಲ್ಲ.’ ಇದು ಮರಣದ ಶೋಕಗೀತೆ. ಇದನ್ನು ಶೋಕಗೀತೆಯನ್ನಾಗಿಯೇ ಬಳಸಲಾಗುತ್ತಿದೆ.”


ಆತನು ಆ ಸುರುಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದಾಗ ಅದರ ಮುಂಭಾಗದಲ್ಲಿಯೂ ಹಿಂಭಾಗದಲ್ಲಿಯೂ ಮಾತುಗಳು ಬರೆಯಲ್ಪಟ್ಟಿದ್ದವು. ನಾನಾ ತರದ ಪ್ರಲಾಪಗಳು, ನರಳಾಟಗಳು ಮತ್ತು ಗೋಳಾಟಗಳು ಬರೆಯಲ್ಪಟ್ಟಿದ್ದವು.


ಯೆಹೂದದ ರಾಜನಾದ ಯೆಹೋಯಾಖೀನನು ಬಾಬಿಲೋನ್ ರಾಜನನ್ನು ಭೇಟಿಮಾಡಲು ಹೋದನು. ಯೆಹೋಯಾಖೀನನ ತಾಯಿ, ಅವನ ಅಧಿಕಾರಿಗಳು, ನಾಯಕರು ಮತ್ತು ಸಿಬ್ಬಂದಿಯೆಲ್ಲವೂ ಅವನೊಂದಿಗೆ ಹೋದರು. ಆಗ ಬಾಬಿಲೋನ್ ರಾಜ ಯೆಹೋಯಾಖೀನನನ್ನು ಸೆರೆಹಿಡಿದನು. ಇದು ಸಂಭವಿಸಿದ್ದು ನೆಬೂಕದ್ನೆಚ್ಚರನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ.


ಫರೋಹ ನೆಕೋವನು ಯೋಷೀಯನ ಮಗನಾದ ಎಲ್ಯಾಕೀಮನನ್ನು ಹೊಸರಾಜನನ್ನಾಗಿ ಮಾಡಿ ಎಲ್ಯಾಕೀಮನ ಹೆಸರನ್ನು ಯೆಹೋಯಾಕೀಮನೆಂದು ಬದಲಾಯಿಸಿದನು. ಯೆಹೋವಾಹಾಜನನ್ನು ಫರೋಹ ನೆಕೋವನು ಈಜಿಪ್ಟಿಗೆ ಕರೆದೊಯ್ದುನು. ಯೆಹೋವಾಹಾಜನು ಈಜಿಪ್ಟಿನಲ್ಲಿ ಸತ್ತುಹೋದನು.


“ನರಪುತ್ರನೇ, ಈಜಿಪ್ಟಿನ ಜನರಿಗಾಗಿ ಗೋಳಾಡು. ಪಾತಾಳಕ್ಕೆ ಇಳಿದುಹೋಗಿರುವ ಇತರ ಎಲ್ಲರೊಡನೆ ಇರುವದಕ್ಕಾಗಿ ಈಜಿಪ್ಟನ್ನು ಮತ್ತು ಇತರ ಜನಾಂಗಗಳ ಉಳಿದ ಪಟ್ಟಣಗಳನ್ನು ಸಮಾಧಿಗೆ ಕಳುಹಿಸು.


“ಜನರು ಈಜಿಪ್ಟಿನ ಬಗ್ಗೆ ಈ ಶೋಕಗೀತೆಯನ್ನು ಹಾಡುವರು. ಬೇರೆ ದೇಶಗಳಲ್ಲಿರುವ ಹೆಣ್ಣುಮಕ್ಕಳು ಈ ಶೋಕಗೀತೆಯನ್ನು ಹಾಡುವರು. ಅವರು ಈಜಿಪ್ಟ್ ಮತ್ತು ಅದರ ಎಲ್ಲಾ ಜನರ ಕುರಿತು ಈ ಶೋಕಗೀತೆಯನ್ನು ಹಾಡುವರು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.


“‘ಅಳುತ್ತಾ ನಿನಗೆ ಈ ಶೋಕಗೀತೆಯನ್ನು ಹಾಡುವರು: “‘ತೂರಿನಂತೆ ಯಾರಿಲ್ಲ. ಆದರೆ ತೂರ್ ಹಾಳಾಗಿಹೋಯಿತು, ಸಮುದ್ರ ಮಧ್ಯದಲ್ಲಿ ನಾಶವಾಯಿತು.


ವೈರಿಗಳು ನಮ್ಮ ರಾಜಕುಮಾರರನ್ನು ಗಲ್ಲಿಗೇರಿಸಿದ್ದಾರೆ. ಅವರು ನಮ್ಮ ಹಿರಿಯರಿಗೆ ಗೌರವ ಕೊಡಲಿಲ್ಲ.


ನಮಗೆ ರಾಜನು ಬಹಳ ಮುಖ್ಯವಾಗಿದ್ದನು. ಅವನು ನಮಗೆ ಉಸಿರಿನಷ್ಟೇ ಅಮೂಲ್ಯವಾಗಿದ್ದನು. ಆದರೆ ಅವರು ರಾಜನನ್ನೇ ಸೆರೆಹಿಡಿದರು. ಯೆಹೋವನೇ, ಆ ರಾಜನನ್ನು ಆರಿಸಿಕೊಂಡಿದ್ದನು. “ನಾವು ಅವನ ನೆರಳಿನಲ್ಲಿ ಬದುಕುತ್ತೇವೆ. ಅವನು ನಮ್ಮನ್ನು ಜನಾಂಗಗಳವರಿಂದ ಸಂರಕ್ಷಿಸುವನು” ಎಂದು ನಾವು ರಾಜನ ಬಗ್ಗೆ ಹೇಳಿಕೊಂಡಿದ್ದೆವು.


“ಆದರೆ ಯೆಹೂದದ ರಾಜನಾದ ಚಿದ್ಕೀಯನು ತಿನ್ನಲು ಬಾರದಷ್ಟು ಕೊಳೆತ ಅಂಜೂರದಂತಾಗುವನು. ಚಿದ್ಕೀಯನೂ ಅವನ ಹಿರಿಯ ಅಧಿಕಾರಿಗಳೂ ಜೆರುಸಲೇಮಿನಲ್ಲಿ ಅಳಿದುಳಿದ ಜನರೂ ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದದ ಜನರೂ ಕೊಳೆತ ಅಂಜೂರದಂತಾಗುವರು.


ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)


ಯೆಹೋವನು ಹೇಳುವುದೇನೆಂದರೆ: “ಯೆಹೋಯಾಚೀನನು ಮಕ್ಕಳಿಲ್ಲದವನೆಂದು ನೊಂದಾಯಿಸಿರಿ. ಯೆಹೋಯಾಚೀನನು ತನ್ನ ಜೀವನದಲ್ಲಿ ಯಶಸ್ವಿಯಾಗುವುದಿಲ್ಲ. ಅವನ ಮಕ್ಕಳಲ್ಲಿ ಯಾರೂ ದಾವೀದನ ಸಿಂಹಾಸನವನ್ನೇರುವದಿಲ್ಲ. ಅವನ ಮಕ್ಕಳಲ್ಲಿ ಯಾರೂ ಯೆಹೂದದಲ್ಲಿ ರಾಜ್ಯಭಾರ ಮಾಡುವುದಿಲ್ಲ.”


ಯೆಹೋಯಾಚೀನನು ಎಸೆಯಲ್ಪಟ್ಟ ಒಡೆದ ಮಡಕೆಯಂತಿದ್ದಾನೆ. ಅವನು ಯಾರಿಗೂ ಬೇಡವಾಗದ ಮಡಕೆಯಂತಿದ್ದಾನೆ. ಯೆಹೋಯಾಚೀನನು ಮತ್ತು ಅವನ ಮಕ್ಕಳು ಏಕೆ ಹೊರಗೆ ಎಸೆಯಲ್ಪಡುವರು? ಅವರು ಪರದೇಶಕ್ಕೆ ಏಕೆ ಒಯ್ಯಲ್ಪಡುವರು?


ನಾನು ಪರ್ವತಗಳಿಗಾಗಿ ಗಟ್ಟಿಯಾಗಿ ಅಳುವೆನು; ಬರಿದಾದ ಹೊಲಗಳಿಗಾಗಿ ಶೋಕಗೀತೆಯನ್ನು ಹಾಡುವೆನು. ಏಕೆಂದರೆ ಅಲ್ಲಿ ಸಜೀವ ವಸ್ತುಗಳಿಲ್ಲ. ಯಾರೂ ಅಲ್ಲಿ ತಿರುಗಾಡುವದಿಲ್ಲ. ಆ ಸ್ಥಳಗಳಲ್ಲಿ ದನಗಳ ಸದ್ದು ಕೇಳಿಸುವದಿಲ್ಲ. ಪಕ್ಷಿಗಳು ಹಾರಿಹೋಗಿವೆ; ಪ್ರಾಣಿಗಳು ಓಡಿಹೋಗಿವೆ.


ನನ್ನ ತಲೆಯಲ್ಲೆಲ್ಲ ನೀರು ತುಂಬಿಕೊಂಡಿದ್ದು, ನನ್ನ ಕಣ್ಣುಗಳು ನೀರಿನ ಬುಗ್ಗೆಗಳಾಗಿದ್ದರೆ, ನಾಶಮಾಡಲ್ಪಟ್ಟ ನನ್ನ ಜನರಿಗಾಗಿ ಹಗಲಿರುಳು ಗೋಳಾಡುತ್ತಿದ್ದೆ.


ವಸಂತ ಕಾಲದಲ್ಲಿ ನೆಬೂಕದ್ನೆಚ್ಚರನು ತನ್ನ ಸೇವಕರನ್ನು ಕಳುಹಿಸಿ ಯೆಹೋಯಾಕೀನನನ್ನು ಕರೆಯಿಸಿದನು. ಆ ಸೇವಕರು ದೇವಾಲಯದ ಕೆಲವು ವಸ್ತುಗಳನ್ನೂ ಅವನ ಜೊತೆಯಲ್ಲಿ ಬಾಬಿಲೋನಿಗೆ ತೆಗೆದುಕೊಂಡು ಹೋದರು. ನೆಬೂಕದ್ನೆಚ್ಚರನು ಯೆಹೂದ ಮತ್ತು ಜೆರುಸಲೇಮಿಗೆ ಚಿದ್ಕೀಯನನ್ನು ಹೊಸ ಅರಸನನ್ನಾಗಿ ಮಾಡಿದನು. ಚಿದ್ಕೀಯನು ಯೆಹೋಯಾಕೀನನ ಸಂಬಂಧಿಕನಾಗಿದ್ದನು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ಪ್ರಾಂತ್ಯದ ಮೇಲೆ ಯುದ್ಧಕ್ಕೆ ಬಂದನು. ಯೆಹೋಯಾಕೀಮನನ್ನು ಸೆರೆಹಿಡಿದು ಅವನನ್ನು ಕಂಚಿನ ಸರಪಣಿಯಿಂದ ಕಟ್ಟಿಸಿದನು. ನಂತರ ಯೆಹೋಯಾಕೀಮನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು.


ಆ ಬಳಿಕ ಈಜಿಪ್ಟಿನ ನೆಕೋ ಯೆಹೋವಾಹಾಜನನ್ನು ಕೈದಿಯನ್ನಾಗಿ ಮಾಡಿದನು. ಯೆಹೂದದ ಜನರು ತನಗೆ ಮೂರು ಸಾವಿರದ ನಾನೂರು ಕಿಲೋಗ್ರಾಂ ಬೆಳ್ಳಿಯನ್ನೂ ಮೂವತ್ತನಾಲ್ಕು ಕಿಲೋಗ್ರಾಂ ಬಂಗಾರವನ್ನೂ ಕೊಡಲು ಆಜ್ಞಾಪಿಸಿದನು.


ಯೆರೆಮೀಯನು ಅವನ ಬಗ್ಗೆ ಶೋಕಗೀತೆಗಳನ್ನು ರಚಿಸಿ ಹಾಡಿದನು. ಆ ಗೀತೆಗಳನ್ನು ಗಂಡಸರು ಹೆಂಗಸರು ಈಗಲೂ ಹಾಡುತ್ತಾರೆ. ಯೋಷೀಯನ ಕುರಿತು ದುಃಖದ ಹಾಡನ್ನು ಹಾಡುವದು ಅವರಿಗೆ ರೂಢಿಯಾಗಿದೆ. ಆ ಗೀತೆಗಳನ್ನು ಮರಣದ ಹಾಡಿನ ಪುಸ್ತಕದಲ್ಲಿ ಬರೆಯಲಾಗಿದೆ.


“‘ನಿನ್ನ ತಾಯಿಯು ಏನಾಗಿದ್ದಳು? ಆಕೆಯು ಸಿಂಹಗಳ ಮಧ್ಯದಲ್ಲಿ ಸಿಂಹಿಣಿಯಾಗಿದ್ದಳು. ಆಕೆಯು ಪ್ರಾಯದ ಸಿಂಹಗಳೊಡನೆ ಮಲಗಿ ತನ್ನ ಮರಿಗಳನ್ನು ಸಾಕಿದಳು.


“ನರಪುತ್ರನೇ, ತೂರ್ ದೇಶದ ರಾಜನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ: “‘ನೀನೊಬ್ಬ ಆದರ್ಶ ಮನುಷ್ಯನಾಗಿದ್ದೆ. ಸರ್ವಾಂಗಸುಂದರನೂ ಜ್ಞಾನದಿಂದ ತುಂಬಿದವನೂ ಆಗಿದ್ದೆ.


“ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: “‘ಜನಾಂಗಗಳ ಮಧ್ಯೆ ಹೆಮ್ಮೆಯಿಂದ ನಡೆದಾಡುತ್ತಿರುವ ಮೃಗರಾಜನಂತೆ ನೀನಿರುವೆ ಎಂದು ನೀನು ಭಾವಿಸಿದ್ದೆ. ಆದರೆ ನಿಜವಾಗಿಯೂ ನೀನು ಸರೋವರದಲ್ಲಿರುವ ಪೇರ್ಮೊಸಳೆಯಾಗಿರುವೆ. ನೀರಿನ ಹೊಳೆಗಳಲ್ಲಿ ನೀನು ನಿನ್ನ ದಾರಿಯನ್ನು ಮಾಡುವೆ. ನಿನ್ನ ಕಾಲುಗಳಿಂದ ಆ ನೀರನ್ನು ನೀನು ಕೆಸರಾಗಿ ಮಾಡುವೆ. ನೀನು ಈಜಿಪ್ಟಿನ ಹೊಳೆಗಳನ್ನು ಕದಡಿಸುವೆ.’”


ಇಸ್ರೇಲಿನ ಜನರೇ, ಈ ಹಾಡನ್ನು ಕೇಳಿರಿ. ಇದು ನಿಮ್ಮ ಮರಣದ ಗೀತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು