ಯೆಹೆಜ್ಕೇಲನು 19:12 - ಪರಿಶುದ್ದ ಬೈಬಲ್12 ಆದರೆ ದ್ರಾಕ್ಷಾಲತೆಯು ಬೇರು ಸಮೇತ ಕಿತ್ತುಹಾಕಲ್ಪಟ್ಟಿತು. ಅದು ನೆಲದ ಮೇಲೆ ಬಿಸಾಡಲ್ಪಟ್ಟಿತು. ಪೂರ್ವದ ಬಿಸಿಗಾಳಿಯು ಅದರ ಹಣ್ಣುಗಳನ್ನು ಒಣಗಿಸಿತು. ಅದರ ಬಲವಾದ ಕೊಂಬೆಗಳು ಮುರಿಯಲ್ಪಟ್ಟವು. ಅವುಗಳನ್ನು ಬೆಂಕಿಯು ಸುಟ್ಟುಹಾಕಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದರೆ ಆ ಲತೆಯು ರೋಷದಲ್ಲಿ ಕೀಳಲ್ಪಟ್ಟು, ನೆಲದ ಮೇಲೆ ಬಿಸಾಡಲ್ಪಟ್ಟಿತು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿ ಕೊಂಬೆಗಳು ಮುರಿದು ಒಣಗಿ ಹೋದವು, ಬೆಂಕಿಯು ಅವುಗಳನ್ನು ನುಂಗಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕಿತ್ತು ಬಿಸಾಡಿದರು ಕ್ರೋಧಿಗಳು ಆ ಲತೆಯನು ಬಾಡಿಸಿತು ಅದರ ಫಲವನು ಮೂಡಣಗಾಳಿಯು ಮುದುರಿ ಒಣಗಿಹೋದುವು ಅದರ ಗಟ್ಟಿಕೊಂಬೆಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆ ಲತೆಯನ್ನು ಕ್ರೋಧಿಗಳು ಕಿತ್ತು ನೆಲದ ಮೇಲೆ ಬಿಸಾಟುಬಿಟ್ಟರು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿಕೊಂಬೆಗಳು ಮುರಿದು ಒಣಗಿಹೋದವು, ಬೆಂಕಿಯು ಅವುಗಳನ್ನು ನುಂಗಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ಆ ಲತೆಯನ್ನು ರೋಷದಲ್ಲಿ ಕಿತ್ತು ನೆಲಕ್ಕೆ ಬಿಸಾಡಿದರು. ಪೂರ್ವದಿಕ್ಕಿನ ಗಾಳಿಯು ಅದರ ಫಲವನ್ನು ಒಣಗಿಸಿತು. ಅದರ ಬಲವಾದ ಬಳ್ಳಿಗಳು ಮುರಿದು ಒಣಗಿಹೋದವು. ಬೆಂಕಿಯು ಅವುಗಳನ್ನು ಸುಟ್ಟುಹಾಕಿತು. ಅಧ್ಯಾಯವನ್ನು ನೋಡಿ |
ಪೂರ್ವಕಾಲದಲ್ಲಿ, ಇಸ್ರೇಲ್ ಮತ್ತು ಯೆಹೂದಗಳ ಮೇಲೆ ನಾನು ಗಮನವಿಟ್ಟಿದ್ದೆನು. ಆದರೆ ನಾನು ಅವರನ್ನು ತೆಗೆದುಹಾಕುವ ಸಮಯಕ್ಕಾಗಿ ಕಾದುಕೊಂಡಿದ್ದೆ. ನಾನು ಅವರನ್ನು ಕೆಡವಿದೆ; ಅವರನ್ನು ಹಾಳುಮಾಡಿದೆ. ಅವರಿಗೆ ಅನೇಕ ಕಷ್ಟಗಳನ್ನು ಕೊಟ್ಟೆ. ಆದರೆ ಈಗ ಅವರನ್ನು ಅಭಿವೃದ್ಧಿಪಡಿಸುವದಕ್ಕಾಗಿ ಅವರನ್ನು ಬಲಶಾಲಿಗಳನ್ನಾಗಿ ಮಾಡಲು ಅವರ ಕಡೆಗೆ ಗಮನಹರಿಸುತ್ತೇನೆ” ಇದು ಯೆಹೋವನ ನುಡಿ.