ಯೆಹೆಜ್ಕೇಲನು 19:14 - ಪರಿಶುದ್ದ ಬೈಬಲ್14 ಅದರ ಸ್ವಂತ ಕಾಂಡದಿಂದಲೇ ಬೆಂಕಿಯು ಹೊರಟುಬಂದು ಅದರ ಚಿಕ್ಕ ಕೊಂಬೆಗಳನ್ನು ಮತ್ತು ಫಲಗಳನ್ನು ನಾಶಮಾಡಿತು. ಈಗ ಬಲವಾದ ಕಾಂಡ ಅದರಲ್ಲಿಲ್ಲ. ಆಳುವದಕ್ಕೆ ರಾಜದಂಡವೂ ಅದರಲ್ಲಿಲ್ಲ.’ ಇದು ಮರಣದ ಶೋಕಗೀತೆ. ಇದನ್ನು ಶೋಕಗೀತೆಯನ್ನಾಗಿಯೇ ಬಳಸಲಾಗುತ್ತಿದೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಬೆಂಕಿಯು ಅದರ ಕೊಂಬೆಗಳಿಂದ ಹೊರಟು ಅದರ ಫಲವನ್ನು ನುಂಗಿ ಬಿಟ್ಟಿದೆ. ಆದುದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿ ಕೊಂಬೆಯೂ ಅದರಲ್ಲಿ ಉಳಿದಿಲ್ಲ.’ ಇದು ಶೋಕ ಗೀತೆ, ಶೋಕ ಗೀತೆಯಾಗಿ ವಾಡಿಕೆಯಲ್ಲಿದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದರ ಕಾಂಡದಿಂದ ಹೊರಟ ಬೆಂಕಿಯು ದಹಿಸಿಬಿಟ್ಟಿದೆ ಅದರ ಫಲಗಳನು ಎಂದೇ ಇನ್ನು ಉಳಿದಿಲ್ಲ ಅದರೊಳು ರಾಜದಂಡಕೆ ಯೋಗ್ಯವಾದ ಗಟ್ಟಿಕೊಂಬೆಯು.” ಇದೊಂದು ಶೋಕ ಗೀತೆ; ರೂಢಿಯಲ್ಲಿ ಇರುವ ಜಾನಪದ ಗೀತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಬೆಂಕಿಯು ದಂಡರೂಪವಾದ ಅದರ ಶಾಖೆಗಳಿಂದ ಹೊರಟು ಅದರ ಫಲವನ್ನು ನುಂಗಿಬಿಟ್ಟದ್ದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿಕೊಂಬೆಯೂ ಅದರಲ್ಲಿ ಉಳಿದಿಲ್ಲ. ಇದು ಶೋಕಗೀತ, ಶೋಕಗೀತವಾಗಿ ವಾಡಿಕೆಯಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು, ಅದರಲ್ಲಿ ಫಲವನ್ನು ತಿಂದುಬಿಟ್ಟಿದೆ. ಅದರಲ್ಲಿ ಆಳುವುದಕ್ಕೆ ರಾಜದಂಡಕ್ಕಾಗಿ ತಕ್ಕ ಬಲವುಳ್ಳ ಬಳ್ಳಿಯು ಈಗ ಇಲ್ಲ.’ ಇದು ಪ್ರಲಾಪವಾಗಿದೆ. ಪ್ರಲಾಪಕ್ಕಾಗಿಯೇ ಇದೆ.” ಅಧ್ಯಾಯವನ್ನು ನೋಡಿ |
ನೆಗೆವ್ ಅಡವಿಗೆ ಹೀಗೆ ಹೇಳು: ‘ಯೆಹೋವನ ಮಾತುಗಳನ್ನು ಆಲೈಸು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನ ಅಡವಿಯಲ್ಲಿ ಬೆಂಕಿಯನ್ನು ಹಾಕುತ್ತೇನೆ. ಆ ಬೆಂಕಿಯು ಪ್ರತಿಯೊಂದು ಹಸಿರು ಮರವನ್ನೂ ಪ್ರತಿಯೊಂದು ಒಣಗಿದ ಮರವನ್ನೂ ಸುಟ್ಟುಬಿಡುವುದು. ಆ ಬೆಂಕಿಯನ್ನು ನಂದಿಸಲಾಗುವದಿಲ್ಲ. ದಕ್ಷಿಣದಿಂದ ಉತ್ತರದ ತನಕವಿರುವ ಪ್ರತಿಯೊಂದು ಮುಖವು ಅದರ ತಾಪವನ್ನು ಅನುಭವಿಸುವುದು.
ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.
ಅವರು ನಿನ್ನ ಬಗ್ಗೆ ಈ ಶೋಕಗೀತೆಯನ್ನು ಹಾಡುವರು: “‘ತೂರ್, ನೀನು ಹೆಸರುವಾಸಿಯಾದ ನಗರವಾಗಿದ್ದೆ. ನಿನ್ನಲ್ಲಿ ವಾಸಮಾಡಲು ಜನರು ಸಮುದ್ರದಾಚೆಯಿಂದ ಬಂದರು. ನೀನು ಪ್ರಸಿದ್ಧಳಾಗಿದ್ದೆ, ಆದರೆ ನೀನೀಗ ಹೋಗಿಬಿಟ್ಟೆ. ದ್ವೀಪವಾಗಿರುವ ನೀನು ಮತ್ತು ನಿನ್ನಲ್ಲಿ ವಾಸವಾಗಿದ್ದ ಜನರು ಸಮುದ್ರದಿಂದ ದೂರದಲ್ಲಿರುವುದರಿಂದ ಬಲಿಷ್ಠರಾಗಿದ್ದೀರಿ. ಭೂಮಿಯ ಮೇಲೆ ವಾಸವಾಗಿದ್ದ ಎಲ್ಲಾ ಜನರನ್ನು ನೀವು ಭಯಗೊಳಿಸಿದಿರಿ.