ಯೆಹೆಜ್ಕೇಲನು 19:2 - ಪರಿಶುದ್ದ ಬೈಬಲ್2 “‘ನಿನ್ನ ತಾಯಿಯು ಏನಾಗಿದ್ದಳು? ಆಕೆಯು ಸಿಂಹಗಳ ಮಧ್ಯದಲ್ಲಿ ಸಿಂಹಿಣಿಯಾಗಿದ್ದಳು. ಆಕೆಯು ಪ್ರಾಯದ ಸಿಂಹಗಳೊಡನೆ ಮಲಗಿ ತನ್ನ ಮರಿಗಳನ್ನು ಸಾಕಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ‘ಆಹಾ, ನಿನ್ನ ತಾಯಿಯು ಸಿಂಹಗಳ ಮಧ್ಯೆ ಸಿಂಹಿಣಿ, ಸಾಕಿದಳು ತನ್ನ ಮರಿಗಳನ್ನು, ಯುವ ಸಿಂಹಗಳ ನಡುವೆ ವಾಸಿಸಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇಗೋ, ನಿನ್ನ ತಾಯಿ, ಸಿಂಹಗಳ ಮಧ್ಯೆ ಸಿಂಹಿಣಿ, ಸಾಕಿದಳು ತನ್ನ ಮರಿಗಳನು, ಯುವ ಸಿಂಹಗಳ ನಡುವೆ ಪವಡಿಸಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಹಾ, ನಿನ್ನ ತಾಯಿಯು ಸಿಂಹಗಳೊಳಗಿನ ಸಿಂಹಿ, ಪ್ರಾಯದ ಸಿಂಹಗಳ ನಡುವೆ ಮಲಗಿತು, ಮರಿಗಳನ್ನು ಸಾಕಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಹೀಗೆ ಹೇಳು: “ ‘ಇಗೋ, ನಿನ್ನ ತಾಯಿ, ಸಿಂಹಗಳ ಮಧ್ಯೆ ಸಿಂಹಿಣಿ, ತನ್ನ ಮರಿಗಳನ್ನು ಸಾಕಿ, ಯುವ ಸಿಂಹಗಳ ನಡುವೆ ವಾಸಿಸಿತು. ಅಧ್ಯಾಯವನ್ನು ನೋಡಿ |
“ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: “‘ಜನಾಂಗಗಳ ಮಧ್ಯೆ ಹೆಮ್ಮೆಯಿಂದ ನಡೆದಾಡುತ್ತಿರುವ ಮೃಗರಾಜನಂತೆ ನೀನಿರುವೆ ಎಂದು ನೀನು ಭಾವಿಸಿದ್ದೆ. ಆದರೆ ನಿಜವಾಗಿಯೂ ನೀನು ಸರೋವರದಲ್ಲಿರುವ ಪೇರ್ಮೊಸಳೆಯಾಗಿರುವೆ. ನೀರಿನ ಹೊಳೆಗಳಲ್ಲಿ ನೀನು ನಿನ್ನ ದಾರಿಯನ್ನು ಮಾಡುವೆ. ನಿನ್ನ ಕಾಲುಗಳಿಂದ ಆ ನೀರನ್ನು ನೀನು ಕೆಸರಾಗಿ ಮಾಡುವೆ. ನೀನು ಈಜಿಪ್ಟಿನ ಹೊಳೆಗಳನ್ನು ಕದಡಿಸುವೆ.’”