ಯೆಹೆಜ್ಕೇಲನು 19:3 - ಪರಿಶುದ್ದ ಬೈಬಲ್3 ಮರಿಗಳಲ್ಲೊಂದು ಎದ್ದು ಗಟ್ಟಿಮುಟ್ಟಾದ ಸಿಂಹವಾಗಿ ಬೆಳೆಯುತ್ತಾ ಬಂತು. ತನ್ನ ಆಹಾರವನ್ನು ತಾನೇ ಬೇಟೆಯಾಡತೊಡಗಿ ಮನುಷ್ಯರನ್ನು ಕೊಂದು ತಿನ್ನಲಾರಂಭಿಸಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವಳು ಬೆಳೆಯಿಸಿದ ಒಂದು ಮರಿಯು ಪ್ರಾಯದ ಸಿಂಹವಾಗಿ, ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಲಾರಂಭಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಯುವ ಸಿಂಹವಾಯಿತು ಆಕೆ ಬೆಳೆಸಿದಾ ಮರಿಯೊಂದು, ನರಭಕ್ಷಕ ಆಗಲಾರಂಭಿಸಿತದು ಬೇಟೆಯನು ಕಲಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅದು ಬೆಳೆಯಿಸಿದ ಒಂದು ಮರಿಯು ಪ್ರಾಯದ ಸಿಂಹವಾಗಿ ಬೇಟೆಯನ್ನು ಕಲಿತು ಮನುಷ್ಯರನ್ನು ನುಂಗಲಾರಂಭಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವಳೂ ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು, ಇದು ಪ್ರಾಯದ ಸಿಂಹವಾಯಿತು. ಇದು ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಿಬಿಟ್ಟಿತು. ಅಧ್ಯಾಯವನ್ನು ನೋಡಿ |
“ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: “‘ಜನಾಂಗಗಳ ಮಧ್ಯೆ ಹೆಮ್ಮೆಯಿಂದ ನಡೆದಾಡುತ್ತಿರುವ ಮೃಗರಾಜನಂತೆ ನೀನಿರುವೆ ಎಂದು ನೀನು ಭಾವಿಸಿದ್ದೆ. ಆದರೆ ನಿಜವಾಗಿಯೂ ನೀನು ಸರೋವರದಲ್ಲಿರುವ ಪೇರ್ಮೊಸಳೆಯಾಗಿರುವೆ. ನೀರಿನ ಹೊಳೆಗಳಲ್ಲಿ ನೀನು ನಿನ್ನ ದಾರಿಯನ್ನು ಮಾಡುವೆ. ನಿನ್ನ ಕಾಲುಗಳಿಂದ ಆ ನೀರನ್ನು ನೀನು ಕೆಸರಾಗಿ ಮಾಡುವೆ. ನೀನು ಈಜಿಪ್ಟಿನ ಹೊಳೆಗಳನ್ನು ಕದಡಿಸುವೆ.’”