ಯೆಹೆಜ್ಕೇಲನು 19:6 - ಪರಿಶುದ್ದ ಬೈಬಲ್6 ಅದು ಬೆಳೆದು ಪ್ರಾಯದ ಸಿಂಹವಾಗಿ ಸಿಂಹಗಳೊಂದಿಗೆ ಬೇಟೆಯಾಡಲು ಹೋಯಿತು; ತನ್ನ ಆಹಾರವನ್ನು ತಾನೇ ಬೇಟೆಯಾಡತೊಡಗಿ ಮನುಷ್ಯರನ್ನು ಕೊಂದು ತಿನ್ನಲಾರಂಭಿಸಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದು ಪ್ರಾಯದ ಸಿಂಹವಾಗಿ, ಸಿಂಹಗಳ ನಡುವೆ ತಿರುಗುತ್ತಾ ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಲಾರಂಭಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದು ಕೂಡ ಯುವಸಿಂಹವಾಯಿತು ಇತರ ಸಿಂಹಗಳ ನಡುವೆ ತಿರುಗಾಡಿತು. ಬೇಟೆಯಾಡುವುದನು ಕಲಿತು ತಾನೂ ನರಭಕ್ಷಕನಾಗಲಾರಂಭಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದೂ ಪ್ರಾಯದ ಸಿಂಹವಾಗಿ ಸಿಂಹಗಳ ನಡುವೆ ತಿರುಗುತ್ತಾ ಬೇಟೆ ಕಲಿತು ಮನುಷ್ಯರನ್ನು ನುಂಗಲಾರಂಭಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅದೂ ಸಿಂಹಗಳ ನಡುವೆ ತಿರುಗಾಡಿ, ಪ್ರಾಯದ ಸಿಂಹವಾಗಿ ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಿಬಿಟ್ಟಿತು. ಅಧ್ಯಾಯವನ್ನು ನೋಡಿ |
ಆದರೆ ನೀವು ಬಲಹೀನ ಕುರಿಗಳನ್ನು ಬಲಪಡಿಸಲಿಲ್ಲ. ಕಾಯಿಲೆಯಲ್ಲಿರುವ ಕುರಿಗಳನ್ನು ನೀವು ಪರಾಂಬರಿಸಲಿಲ್ಲ. ಗಾಯಗೊಂಡ ಕುರಿಗಳಿಗೆ ಬಟ್ಟೆ ಸುತ್ತಲಿಲ್ಲ. ಕೆಲವು ಕುರಿಗಳು ದಾರಿತಪ್ಪಿ ದೂರ ಹೋದವು. ಆದರೆ ನೀವು ಅದರ ಬೆನ್ನ ಹಿಂದೆ ಹೋಗಿ ಹಿಂತಿರುಗಿ ಬರುವಂತೆ ಮಾಡಲಿಲ್ಲ. ತಪ್ಪಿಹೋದ ಕುರಿಗಳನ್ನು ನೀವು ಹುಡುಕಲಿಲ್ಲ. ನೀವು ಬಹಳ ಕ್ರೂರಿಗಳೂ ದಯೆ ಇಲ್ಲದವರೂ ಆಗಿದ್ದೀರಿ. ಆ ರೀತಿಯಾಗಿ ನೀವು ನಿಮ್ಮ ಕುರಿಗಳನ್ನು ನಡೆಸಿದಿರಿ.