Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 2:7 - ಪರಿಶುದ್ದ ಬೈಬಲ್‌

7 ಅವರು ಕೇಳಲಿ, ಕೇಳದಿರಲಿ, ನಾನು ಹೇಳುವದನ್ನು ಅವರಿಗೆ ತಿಳಿಸು; ಯಾಕೆಂದರೆ ಅವರು ದಂಗೆಕೋರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಕೇಳಿದರೂ, ಕೇಳದೆ ಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿ ದ್ರೋಹಿಗಳೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರು ಕೇಳಲಿ ಅಥವಾ ಬಿಡಲಿ ನೀನು ನನ್ನ ವಾಕ್ಯವನ್ನು ಅವರಿಗೆ ನುಡಿಯಲೇಬೇಕು. ಅವರು ದ್ರೋಹಿಗಳೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಕೇಳಿದರೂ ಕೇಳದೆಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ನುಡಿಯಲೇಬೇಕು; ಅವರು ದ್ರೋಹಿಗಳೇ ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು. ಅವರು ಕೇಳಿದರೂ ಸರಿ, ಕೇಳದಿದ್ದರೂ ಸರಿ, ಏಕೆಂದರೆ ಅವರು ತಿರುಗಿಬೀಳುವ ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 2:7
24 ತಿಳಿವುಗಳ ಹೋಲಿಕೆ  

ಹೊಟ್ಟು, ಗೋಧಿಯ ಕಾಳಲ್ಲ. ಅದೇ ರೀತಿ, ಆ ಪ್ರವಾದಿಗಳ ಕನಸುಗಳು ನನ್ನ ಸಂದೇಶಗಳಲ್ಲ. ಒಬ್ಬ ವ್ಯಕ್ತಿಗೆ ತನ್ನ ಕನಸಿನ ಬಗ್ಗೆ ಹೇಳಬೇಕೆನಿಸಿದರೆ, ಅವನು ಹೇಳಲಿ. ಆದರೆ ನನ್ನ ಸಂದೇಶವನ್ನು ಕೇಳಿದ ಮನುಷ್ಯನು ಆ ಸಂದೇಶವನ್ನು ಯಥಾರ್ಥವಾಗಿ ಹೇಳಲಿ.


“ನರಪುತ್ರನೇ, ನಾನು ನಿನ್ನನ್ನು ಇಸ್ರೇಲರಿಗೆ ಕಾವಲುಗಾರನನ್ನಾಗಿ ಮಾಡಿದ್ದೇನೆ. ನಾನು ಅವರಿಗೆ ಸಂಭವಿಸುವ ಕೆಟ್ಟ ವಿಷಯಗಳನ್ನು ನಿನಗೆ ಹೇಳುತ್ತಿದ್ದೇನೆ. ಮತ್ತು ನೀನು ನನ್ನ ಪರವಾಗಿ ಅವರನ್ನು ಎಚ್ಚರಿಸು.


ದೇವರು ನನಗೆ ಮತ್ತೇ ಹೇಳಿದ್ದೇನೆಂದರೆ, “ನರಪುತ್ರನೇ, ನಾನು ಹೇಳುವ ಪ್ರತಿಯೊಂದು ಮಾತನ್ನು ನೀನು ಕಿವಿಗೊಟ್ಟು ಕೇಳಬೇಕು. ಆ ಮಾತುಗಳನ್ನು ನೀನು ಜ್ಞಾಪಕದಲ್ಲಿಟ್ಟುಕೊಳ್ಳಬೇಕು.


ಜನರು ನಿನ್ನ ಮಾತನ್ನು ಕೇಳಬಹುದು ಅಥವಾ ಕೇಳದಿರಬಹುದು: ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ. ನನ್ನ ಮುಂದೆ ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರು ಯಾವಾಗಲೂ ನನ್ನ ವಿರುದ್ಧ ದಂಗೆ ಏಳುವರು. ಆದ್ದರಿಂದ ನಾನು ತಿಳಿಸಿದ್ದನ್ನೆ ನೀನು ಹೇಳಬೇಕು. ಆಗ ಅವರು ತಮ್ಮ ಮಧ್ಯೆ ಒಬ್ಬ ಪ್ರವಾದಿ ಇದ್ದಾನೆಂದು ಗ್ರಹಿಸಿಕೊಳ್ಳುವರು.


ಆದರೆ ಯೆಹೋವನು ನನಗೆ, “ನಾನು ಕೇವಲ ಹುಡುಗನೆಂದು ಹೇಳಬೇಡ, ನಾನು ಕಳುಹಿಸುವ ಸ್ಥಳಗಳಿಗೆ ನೀನು ಹೋಗಬೇಕು. ನಾನು ಹೇಳು ಅಂದದ್ದನ್ನೆಲ್ಲ ನೀನು ಹೇಳಬೇಕು.


“ಯೆರೆಮೀಯನೇ, ಸಿದ್ಧನಾಗು! ಎದ್ದುನಿಲ್ಲು! ನಾನು ಹೇಳಿದ್ದೆಲ್ಲವನ್ನು ಜನರಿಗೆ ಹೇಳು. ಅವರಿಗೆ ಹೆದರಬೇಡ. ನೀನು ಅವರಿಗೆ ಹೆದರಿಕೊಂಡರೆ, ನಾನು ನಿನ್ನನ್ನು ಅವರೆದುರಿನಲ್ಲಿ ಹೆದರಿಸುವೆನು.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


“ಮಹಾನಗರವಾದ ನಿನೆವೆಗೆ ನೀನು ಎದ್ದುಹೋಗಿ ಅಲ್ಲಿ ನಾನು ಹೇಳಿದ್ದನ್ನು ಅವರಿಗೆ ಸಾರು.”


ಯೆಹೋವನು ಹೀಗೆಂದನು, “ಯೆರೆಮೀಯನೇ, ಯೆಹೋವನ ಆಲಯದ ಅಂಗಳದಲ್ಲಿ ನಿಲ್ಲು, ಯೆಹೋವನ ಆಲಯದಲ್ಲಿ ಆರಾಧನೆಗೆಂದು ಬರುವ ಯೆಹೂದದ ಎಲ್ಲಾ ಜನರಿಗೆ ಈ ಸಂದೇಶವನ್ನು ತಿಳಿಸು. ನಾನು ನಿನಗೆ ತಿಳಿಸೆಂದು ಹೇಳುವ ಎಲ್ಲವನ್ನೂ ಅವರಿಗೆ ಹೇಳು. ನನ್ನ ಸಂದೇಶದ ಯಾವ ಭಾಗವನ್ನೂ ಬಿಡಬೇಡ.


“ಯೆರೆಮೀಯನೇ, ನೀನು ಈ ಸಂಗತಿಗಳನ್ನು ಯೆಹೂದದ ಜನರಿಗೆ ಹೇಳು. ಆದರೆ ಅವರು ನಿನ್ನ ಮಾತುಗಳನ್ನು ಕೇಳುವದಿಲ್ಲ.


“ಆ ಜನರಿಗೆ ಹೇಳು, ‘ಯೆಹೋವನ ಸಂದೇಶವನ್ನು ಕೇಳಿರಿ. ಯೆಹೂದದ ರಾಜರೇ, ಕೇಳಿರಿ. ಯೆಹೂದದ ಎಲ್ಲಾ ಜನರೇ ಕೇಳಿರಿ. ಈ ದ್ವಾರಗಳಿಂದ ಜೆರುಸಲೇಮಿಗೆ ಬರುವ ಜನರೇ, ನಾನು ಹೇಳುವದನ್ನು ಕೇಳಿರಿ!


ಆಗ ಆ ಅಧಿಕಾರಿಗಳೆಲ್ಲ ಯೆಹೂದಿ ಎಂಬುವನನ್ನು ಬಾರೂಕನಲ್ಲಿಗೆ ಕಳುಹಿಸಿಕೊಟ್ಟರು. ಯೆಹೂದಿಯು ಶೆಲೆಮ್ಯನ ಮಗನಾದ ನೆಥನ್ಯನ ಮಗ. ಶೆಲೆಮ್ಯನು ಕೂಷಿಯ ಮಗ. ಯೆಹೂದಿಯು ಬಾರೂಕನಿಗೆ, “ನೀನು ಓದಿದ ಸುರುಳಿಯನ್ನು ತೆಗೆದುಕೊಂಡು ನನ್ನ ಜೊತೆ ಬಾ” ಎಂದು ಕರೆದನು. ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ತೆಗೆದುಕೊಂಡು ಯೆಹೂದಿಯ ಸಂಗಡ ಆ ಅಧಿಕಾರಿಗಳ ಹತ್ತಿರಕ್ಕೆ ಹೋದನು.


ಇಂದು, ನಾನು ನಿಮಗೆ ಯೆಹೋವನ ಸಂದೇಶವನ್ನು ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ. ನನ್ನ ಮೂಲಕ ಆತನು ನಿಮಗೆ ಹೇಳಿದ ಯಾವ ಮಾತನ್ನೂ ನೀವು ಕೇಳಲಿಲ್ಲ.


ನನ್ನೊಂದಿಗೆ ಸೆರೆವಾಸದಲ್ಲಿದ್ದ ಜನರಿಗೆ, ಯೆಹೋವನು ನನಗೆ ತೋರಿಸಿದ ಎಲ್ಲಾ ಸಂಗತಿಗಳ ಬಗ್ಗೆ ಹೇಳಿದೆನು.


“ನರಪುತ್ರನೇ, ನೀನು ದಂಗೆಕೋರರ ಮಧ್ಯೆ ವಾಸಿಸುತ್ತೀ. ಅವರಿಗೆ ಕಣ್ಣಿದ್ದರೂ ನೋಡುವದಿಲ್ಲ; ಅವರಿಗೆ ಕಿವಿಗಳಿದ್ದರೂ ಕೇಳುವದಿಲ್ಲ; ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ.


ಆದ್ದರಿಂದ ನರಪುತ್ರನೇ, ಇಸ್ರೇಲ್ ಜನಾಂಗದವರೊಂದಿಗೆ ಮಾತನಾಡು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ನಿಮ್ಮ ಪೂರ್ವಿಕರು ನನಗೆ ಅಪಮಾನ ಮಾಡಿದರು ಮತ್ತು ದ್ರೋಹ ಮಾಡಿದರು.


“ಈಗ, ನರಪುತ್ರನೇ, ನಾನು ನಿನ್ನನ್ನು ಇಸ್ರೇಲಿನ ಕಾವಲುಗಾರನನ್ನಾಗಿ ಆರಿಸಿದ್ದೇನೆ. ನನ್ನ ಬಾಯಿಂದ ನೀನು ಸಂದೇಶವನ್ನು ಕೇಳಿದಾಗ, ನನ್ನ ಪರವಾಗಿ ನೀನು ಜನರನ್ನು ಎಚ್ಚರಿಸಬೇಕು.


ಆಗ ಅವನು ಹೀಗೆ ಹೇಳಿದನು, “ನರಪುತ್ರನೇ, ನೀನು ನಿನ್ನ ಕಣ್ಣು, ಕಿವಿಗಳನ್ನು ಉಪಯೋಗಿಸು, ಇವೆಲ್ಲವನ್ನೂ ಗಮನಿಸಿ ನನ್ನ ಮಾತುಗಳನ್ನು ಕೇಳು. ನಾನು ತೋರಿಸುವ ಪ್ರತಿಯೊಂದು ವಸ್ತುಗಳ ಮೇಲೆ ಚೆನ್ನಾಗಿ ಲಕ್ಷ್ಯವಿಡು. ಯಾಕೆಂದರೆ ಈ ವಿಷಯಗಳನ್ನು ನಿನಗೆ ತೋರಿಸಬೇಕೆಂದೇ ನಿನ್ನನ್ನು ಇಲ್ಲಿಗೆ ತಂದಿರುವೆ. ನೀನು ನೋಡಿದ್ದೆಲ್ಲವನ್ನೂ ಇಸ್ರೇಲ್ ವಂಶದವರಿಗೆ ತಿಳಿಸಬೇಕು.”


ಸರ್ವಶಕ್ತನೂ ನನ್ನ ಒಡೆಯನೂ ಆಗಿರುವ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, “ಯಾಕೋಬನ ಕುಟುಂಬದವರಿಗೆ ಈ ವಿಷಯವನ್ನು ತಿಳಿಸು.


“ನಾನು ಯೆಹೋವನು. ನಾನು ನಿನಗೆ ತಿಳಿಸುವ ಪ್ರತಿಯೊಂದನ್ನು ಈಜಿಪ್ಟಿನ ರಾಜನಿಗೆ ಹೇಳು” ಅಂದನು.


ಅವರೆಲ್ಲರು ನನಗೆ ವಿರುದ್ಧವಾಗಿ ದಂಗೆ ಎದ್ದಿದ್ದಾರೆ; ಅವರು ಬಹಳ ಹಟಮಾರಿಗಳಾಗಿದ್ದಾರೆ. ಅವರು ಜನರ ಬಗ್ಗೆ ಅಪಪ್ರಚಾರ ಮಾಡುತ್ತಾ ತಿರುಗಾಡುತ್ತಾರೆ. ಅವರು ಬಣ್ಣಗುಂದಿದ, ತುಕ್ಕುಹಿಡಿದ ಕಂಚಿನಂತೆಯೂ ಕಬ್ಬಿಣದಂತೆಯೂ ಇದ್ದಾರೆ.


ಆದ್ದರಿಂದ ಯೆರೆಮೀಯನು ಜೆರುಸಲೇಮಿನಲ್ಲಿದ್ದ ಚಿದ್ಕೀಯನಿಗೆ ಯೆಹೋವನ ಸಂದೇಶವನ್ನು ಕೊಟ್ಟನು.


ಆಗ ಯೆರೆಮೀಯನು ತನಗೆ ಉತ್ತರ ಕೊಟ್ಟ ಆ ಎಲ್ಲಾ ಸ್ತ್ರೀಪುರುಷರೊಂದಿಗೆ ಮಾತನಾಡಿ ಹೀಗೆ ಹೇಳಿದನು:


ಆಗ ದೇವರು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇಸ್ರೇಲ್ ವಂಶದವರ ಬಳಿಗೆ ಹೋಗಿ ನನ್ನ ಮಾತುಗಳನ್ನು ಅವರಿಗೆ ತಿಳಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು