ಯೆಹೆಜ್ಕೇಲನು 20:1 - ಪರಿಶುದ್ದ ಬೈಬಲ್1 ಮಾರ್ಗದರ್ಶನಕ್ಕಾಗಿ ಯೆಹೋವನನ್ನು ಕೇಳಲು ಒಂದು ದಿನ ಇಸ್ರೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದರು. ಅದು ಸೆರೆವಾಸದ ಏಳನೆ ವರ್ಷದ ಐದನೆ ತಿಂಗಳಿನ ಹತ್ತನೆಯ ದಿನ. ಹಿರಿಯರು ನನ್ನ ಎದುರಿನಲ್ಲಿ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಏಳನೆಯ ವರ್ಷದ, ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವನನ್ನು ಪ್ರಶ್ನೆ ಕೇಳುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಏಳನೆಯ ವರ್ಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಯೇಲಿನ ಹಿರಿಯರಲ್ಲಿ ಕೆಲವರು ಸರ್ವೇಶ್ವರನನ್ನು ಪ್ರಶ್ನಿಸುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 [ಯೆಹೋಯಾಖೀನನು ಸೆರೆಯಾದ] ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವನನ್ನು ಪ್ರಶ್ನೆಕೇಳುವದಕ್ಕೆ ಬಂದು ನನ್ನ ಮುಂದೆ ಕೂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಏಳನೆಯ ವರ್ಷದ, ಐದನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವ ದೇವರ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತುಕೊಂಡರು. ಅಧ್ಯಾಯವನ್ನು ನೋಡಿ |
ಆಗ ಪೌಲನು ಹೀಗೆಂದನು: “ನಾನು ಯೆಹೂದ್ಯನು. ನಾನು ಹುಟ್ಟಿದ್ದು ಸಿಲಿಸಿಯ ದೇಶದ ತಾರ್ಸದಲ್ಲಿ. ಆದರೆ ನಾನು ಬೆಳೆದದ್ದು ಈ ಪಟ್ಟಣದಲ್ಲಿ. ನಾನು ಗಮಲಿಯೇಲನ ವಿದ್ಯಾರ್ಥಿಯಾಗಿದ್ದೆನು. ನಮ್ಮ ಪಿತೃಗಳ ಧರ್ಮಶಾಸ್ತ್ರದ ಬಗ್ಗೆ ಪ್ರತಿಯೊಂದನ್ನೂ ಅವನು ನನಗೆ ಬಹು ಸೂಕ್ಷ್ಮವಾಗಿ ಬೋಧಿಸಿದ್ದಾನೆ. ಇಂದು ಇಲ್ಲಿರುವ ನಿಮ್ಮೆಲ್ಲರಂತೆಯೇ ನಾನೂ ದೇವರ ಸೇವೆಯ ಬಗ್ಗೆ ಬಹಳ ಅಭಿಮಾನ ಉಳ್ಳವನಾಗಿದ್ದೆ.
ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಈ ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ.
ಎಲೀಷನು ಇಸ್ರೇಲಿನ ರಾಜನಿಗೆ, “ನನ್ನಿಂದ ನಿನಗೆ ಏನು ಬೇಕಾಗಿದೆ? ನಿನ್ನ ತಂದೆತಾಯಿಯರ ಪ್ರವಾದಿಗಳ ಬಳಿಗೆ ಹೋಗು!” ಎಂದು ಹೇಳಿದನು. ಇಸ್ರೇಲಿನ ರಾಜನು ಎಲೀಷನಿಗೆ, “ಇಲ್ಲ, ನಾವು ನಿನ್ನನ್ನು ನೋಡಲೆಂದು ಇಲ್ಲಿಗೆ ಬಂದಿದ್ದೇವೆ, ಏಕೆಂದರೆ ಯೆಹೋವನು ಮೂವರು ರಾಜರನ್ನು ಒಟ್ಟಿಗೆ ಬರಮಾಡಿ, ನಮ್ಮನ್ನು ಮೋವಾಬ್ಯರು ಸೋಲಿಸುವಂತೆ ಮಾಡಿದ್ದಾನೆ. ನಾವು ನಿನ್ನ ಸಹಾಯವನ್ನು ಬಯಸಿದ್ದೇವೆ” ಎಂದನು.
ರಾಜನು ಎಲೀಷನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದನು. ಎಲೀಷನು ತನ್ನ ಮನೆಯಲ್ಲಿ ಕುಳಿತಿದ್ದನು; ಹಿರಿಯರು ಅವನೊಂದಿಗೆ ಕುಳಿತಿದ್ದರು. ಸಂದೇಶಕನು ಬರುವುದಕ್ಕೆ ಮುಂಚೆಯೇ ಎಲೀಷನು ಹಿರಿಯರಿಗೆ, “ನೋಡಿ, ನನ್ನ ತಲೆಯನ್ನು ಕತ್ತರಿಸಿಹಾಕಲು ಕೊಲೆಗಾರನ (ಇಸ್ರೇಲಿನ ರಾಜ) ಮಗ ಜನರನ್ನು ಕಳುಹಿಸಿದ್ದಾನೆ! ಆ ಸಂದೇಶಕನು ಬಂದಾಗ ಬಾಗಿಲನ್ನು ಮುಚ್ಚಿಬಿಡಿ! ಅವನು ಒಳಗೆ ಪ್ರವೇಶಿಸದಂತೆ ಬಾಗಿಲನ್ನು ಹಿಡಿದುಕೊಳ್ಳಿ! ಅವನ ಹಿಂದೆ ಬರುತ್ತಿರುವ ಅವನ ಒಡೆಯನ ಕಾಲ ಸಪ್ಪಳವು ನನಗೆ ಕೇಳಿಸುತ್ತಿದೆ!” ಎಂದು ಹೇಳಿದನು.
ಪಷ್ಹೂರ ಮತ್ತು ಚೆಫನ್ಯರು ಹೀಗೆಂದರು: “ನಮಗೋಸ್ಕರ ಯೆಹೋವನನ್ನು ಪ್ರಾರ್ಥಿಸಿ ಮುಂದೆ ಸಂಭವಿಸುವುದನ್ನು ವಿಚಾರಿಸು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿರುವನು; ಆದ್ದರಿಂದ ಮುಂದೆ ಸಂಭವಿಸುವುದನ್ನು ನಾವು ತಿಳಿಯ ಬಯಸುತ್ತೇವೆ. ಮೊದಲಿನಂತೆ ಯೆಹೋವನು ನಮಗೋಸ್ಕರ ಅದ್ಭುತಗಳನ್ನೂ ಮಾಡಬಹುದು. ನೆಬೂಕದ್ನೆಚ್ಚರನು ನಮ್ಮ ಮೇಲೆ ಧಾಳಿ ಮಾಡುವುದನ್ನು ನಿಲ್ಲಿಸಿ ಹೊರಟುಹೋಗುವಂತೆ ಆತನು ಮಾಡಬಹುದು.”