Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:13 - ಪರಿಶುದ್ದ ಬೈಬಲ್‌

13 “‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದರೆ ಇಸ್ರಯೇಲ್ ವಂಶದವರು ಮರುಭೂಮಿಯಲ್ಲಿ ನನ್ನ ವಿರುದ್ಧ ದಂಗೆಯೆದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ಧಿಕ್ಕರಿಸಿದರು. ಮುಖ್ಯವಾಗಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆಗ ನಾನು ‘ಮರುಭೂಮಿಯಲ್ಲಿರುವ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ ಇವರನ್ನು ಧ್ವಂಸಮಾಡುವೆನು’ ಎಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿಬಿದ್ದರು. ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇವಿುಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಅವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ಆದರೆ ಇಸ್ರಾಯೇಲ್ ಜನರು ಮರುಭೂಮಿಯಲ್ಲಿಯೂ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ, ನನ್ನ ಅಪ್ಪಣೆಗಳನ್ನು ತಿರಸ್ಕರಿಸಿದರು. ಅವುಗಳಿಗೆ ವಿಧೇಯನಾಗುವವನು ಅವುಗಳಿಂದ ಜೀವಿಸುವನು. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿದು, ಅವರನ್ನು ಮರುಭೂಮಿಯಲ್ಲಿ ನಾಶಮಾಡುವೆನೆಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:13
43 ತಿಳಿವುಗಳ ಹೋಲಿಕೆ  

“‘ಆದರೆ ಅವರ ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ಅವರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನ್ನು ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನ್ನ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಆದ್ದರಿಂದ ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನ್ನ ಕೋಪದ ತೀಕ್ಷ್ಣತೆಯನ್ನು ಅವರು ತಿಳಿದುಕೊಳ್ಳಬೇಕೆಂದು ತೀರ್ಮಾನಿಸಿದೆನು.


ಆದರೆ ಅವರು ನನ್ನ ವಿರುದ್ಧವಾಗಿ ಎದ್ದು ನನ್ನ ಮಾತುಗಳನ್ನು ಕೇಳದೆ ಹೋದರು. ತಮ್ಮ ವಿಗ್ರಹಗಳನ್ನು ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಆದ್ದರಿಂದ ನಾನು ಅವರನ್ನು (ಇಸ್ರೇಲರನ್ನು) ಈಜಿಪ್ಟಿನಲ್ಲಿಯೇ ನಾಶಮಾಡಿ ನನ್ನ ರೋಷಾಗ್ನಿಯನ್ನು ತೀರಿಸಿಕೊಳ್ಳಲು ಆಲೋಚಿಸಿದೆನು.


“‘ಇಸ್ರೇಲ್ ಜನರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲು ನಿರಾಕರಿಸಿದರು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ಅಲಕ್ಷ್ಯಮಾಡಿದರು. ಮತ್ತು ಅವರ ಪೂರ್ವಿಕರ ಹೊಲಸು ವಿಗ್ರಹಗಳನ್ನು ಪೂಜಿಸಿದರು.


“ಅನ್ಯದೇಶದವರಲ್ಲಿ ಕೆಲವರು ಯೆಹೋವನನ್ನು ಅನುಸರಿಸುವರು. ಆತನನ್ನು ಸೇವಿಸಿ ಆತನ ನಾಮವನ್ನು ಪ್ರೀತಿಸುವರು. ಅವರು ಯೆಹೋವನ ಸೇವಕರಾಗುವುದಕ್ಕಾಗಿ ಆತನೊಂದಿಗೆ ಸೇರಿಕೊಳ್ಳುವರು. ಸಬ್ಬತ್‌ದಿವಸವನ್ನು ಆರಾಧನೆ ಮಾಡುವ ವಿಶೇಷ ದಿವಸವೆಂದು ನೆನಸಿ ಒಡಂಬಡಿಕೆಯನ್ನು ಪರಿಪಾಲಿಸುವರು.


ನೀವು ಹೋರೇಬ್ ಎಂಬ ಸೀನಾಯ್ ಬೆಟ್ಟದಲ್ಲಿ ಯೆಹೋವನನ್ನು ಬಹಳ ಸಿಟ್ಟಿಗೆಬ್ಬಿಸಿದ್ದೀರಿ. ಯೆಹೋವನು ನಿಮ್ಮನ್ನು ನಾಶಪಡಿಸುವಷ್ಟು ಕೋಪಗೊಂಡಿದ್ದನು.


ನಿಮ್ಮ ಶವಗಳು ಈ ಮರುಭೂಮಿಯಲ್ಲಿಯೇ ಬೀಳುವವು. ನೀವು ನನಗೆ ವಿರೋಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಲೆಕ್ಕಿಸಲ್ಪಟ್ಟವರೆಲ್ಲರೂ ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ ಮರುಭೂಮಿಯಲ್ಲೇ ಸಾಯುವರು.


ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಾನು ನಡಿಸಿರುವ ಮಹಾತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಜನರೆಲ್ಲರೂ ಪದೇಪದೇ ನನ್ನನ್ನು ಪರೀಕ್ಷಿಸಿದ್ದರಿಂದ ಮತ್ತು ನನಗೆ ವಿಧೇಯರಾಗದಿದ್ದ ಕಾರಣ,


ಆದ್ದರಿಂದ ನಾನು ಅವರನ್ನು ಕೋಪದಿಂದ ನಾಶಮಾಡಿಬಿಡುತ್ತೇನೆ. ನನ್ನನ್ನು ತಡೆಯಬೇಡ. ಬಳಿಕ ನಾನು ನಿನ್ನಿಂದ ಒಂದು ಮಹಾಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.


ಆದುದರಿಂದ ಈ ಉಪದೇಶವನ್ನು ಅನುಸರಿಸದವನು ಅವಿಧೇಯನಾಗಿರುವುದು ದೇವರಿಗೇ ಹೊರತು ಮಾನವನಿಗಲ್ಲ. ನಮಗೆ ತನ್ನ ಪವಿತ್ರಾತ್ಮನನ್ನು ನೀಡಿದಾತನು ದೇವರೇ.


ಯೆಹೋವನು ಹೇಳುವುದೇನೆಂದರೆ, “ಯೆಹೂದ ಜನರ ಅನೇಕ ಅಪರಾಧಗಳಿಗಾಗಿ ಅವರನ್ನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲಿಲ್ಲ. ಅವರ ಪೂರ್ವಿಕರು ಸುಳ್ಳನ್ನು ನಂಬಿದರು. ಆ ಸುಳ್ಳುಗಳಿಂದ ಅವರು ನನ್ನನ್ನು ಹಿಂಬಾಲಿಸಲಿಲ್ಲ.


“‘ಇಸ್ರೇಲ್ ಜನರು ನನ್ನ ಆಜ್ಞೆಗಳಿಗೆ ವಿಧೇಯರಾಗಲು ನಿರಾಕರಿಸಿದರು. ನನ್ನ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಅವರ ಮನಸ್ಸು ಆ ಹೊಲಸು ದೇವರುಗಳ ಮೇಲೆ ನೆಟ್ಟಿದ್ದರಿಂದ ಅವರು ಹಾಗೆಲ್ಲಾ ಮಾಡಿದರು.


ಆದರೆ ಜನರು ಯೆಹೋವನಿಗೆ ವಿರುದ್ಧವಾಗಿ ಎದ್ದರು. ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಯೆಹೋವನು ಅವರ ಶತ್ರುವಾಗಿ ಪರಿಣಮಿಸಿದನು. ಅಂಥಾ ಜನರಿಗೆ ವಿರುದ್ಧವಾಗಿ ಯೆಹೋವನು ಯುದ್ಧಮಾಡಿದನು.


ಬುದ್ಧಿಮಾತನ್ನು ಕೇಳದವನು ತನಗೆ ತೊಂದರೆಯನ್ನು ಬರಮಾಡಿಕೊಳ್ಳುವನು. ಬುದ್ಧಿವಾದವನ್ನು ಗೌರವಿಸುವವನು ಪ್ರತಿಫಲವನ್ನು ಹೊಂದುವನು.


ನೀವು ನನಗೆ ಮುಖ ತಿರುವಿಕೊಂಡಿರಿ; ನನ್ನ ಸಲಹೆಗಳನ್ನೆಲ್ಲ ಕಡೆಗಣಿಸಿದಿರಿ; ನನ್ನ ತಿದ್ದುಪಾಟನ್ನು ತಿರಸ್ಕರಿಸಿದಿರಿ.


ನೀನು ಯೆಹೋವನ ಆಜ್ಞೆಯನ್ನು ಏಕೆ ಕಡೆಗಣಿಸಿದೆ? ಆತನು ತಪ್ಪೆಂದು ಹೇಳಿದ ಕಾರ್ಯವನ್ನು ಏಕೆ ಮಾಡಿದೆ? ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ನೀನು ಕೊಲ್ಲಿಸಿದೆ. ಅವನ ಪತ್ನಿಯನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಿದೆ. ಹೌದು, ನೀನು ಅಮ್ಮೋನಿಯರ ಕತ್ತಿಯಿಂದ ಊರೀಯನನ್ನು ಕೊಲ್ಲಿಸಿದೆ.


ಅವರು ಯಾವಾಗಲೂ ಮಾಡಿದಂತೆ ಈಗಲೂ ಮಾಡುತ್ತಿದ್ದಾರೆ. ಅವರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ಆದರೆ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳ ಸೇವೆ ಮಾಡಿದರು. ಅವರು ನಿನಗೂ ಹೀಗೆಯೇ ಮಾಡುತ್ತಿದ್ದಾರೆ.


ನೀವು ಹಠಮಾರಿಗಳೆಂದು ನಾನು ಬಲ್ಲೆನು. ನಾನು ನಿಮ್ಮೊಂದಿಗೆ ಇದ್ದಾಗಲೇ ನೀವು ಯೆಹೋವನಿಗೆ ವಿಧೇಯರಾಗಲಿಲ್ಲ. ಆದ್ದರಿಂದ ನಾನು ಸತ್ತ ಬಳಿಕ ಆತನ ಮಾತುಗಳನ್ನು ನೀವು ಕೇಳುವುದಿಲ್ಲ ಎಂದು ನನಗೆ ಚೆನ್ನಾಗಿ ಗೊತ್ತು.


ಇಸ್ಸಾಕಾರ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 64,300 ಮಂದಿ.


“ಆ ಜನರಿಂದ ನೀವಿಬ್ಬರೂ ದೂರಹೋಗಿರಿ. ನಾನು ಈಗ ಅವರನ್ನು ನಾಶಮಾಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಆರೋನರು ಅಡ್ಡಬಿದ್ದರು.


“ದೇಶವು ಬರಿದಾಗಿದ್ದು ವಿಶ್ರಾಂತಿಯನ್ನು ಅನುಭವಿಸುವುದು. ಆಗ ಜೀವಂತವಾಗಿ ಉಳಿದವರು ತಮ್ಮ ಪಾಪಗಳಿಗೆ ಬರತಕ್ಕ ಶಿಕ್ಷೆಯನ್ನು ಅನುಭವಿಸುವರು. ನನ್ನ ನಿಯಮಗಳನ್ನು ದ್ವೇಷಿಸಿ ನನ್ನ ವಿಧಿಗಳಿಗೆ ಅವಿಧೇಯರಾದ್ದರಿಂದ ತಮಗೆ ಶಿಕ್ಷೆಯಾಯಿತೆಂದು ಅವರು ಅರಿತುಕೊಳ್ಳುವರು.


ನೀವು ನನ್ನ ಕಟ್ಟಳೆಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗದಿದ್ದರೆ, ಆಗ ನೀವು ನನ್ನ ಒಡಂಬಡಿಕೆಯನ್ನು ಮುರಿದವರಾಗುತ್ತೀರಿ.


ನಾನು ಅವರಿಗೆ ಆಜ್ಞಾಪಿಸಿದವುಗಳಿಗೆ ಬಹುಬೇಗನೆ ಅವಿಧೇಯರಾಗಿದ್ದಾರೆ. ಚಿನ್ನವನ್ನು ಕರಗಿಸಿ ಅದರಿಂದ ಬಸವನನ್ನು ಮಾಡಿಕೊಂಡು ಅದನ್ನು ಪೂಜಿಸುತ್ತಾ ಅದಕ್ಕೆ ಯಜ್ಞಗಳನ್ನು ಸಮರ್ಪಿಸುತ್ತಿದ್ದಾರೆ. ‘ಇಸ್ರೇಲರೇ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳು’ ಎಂದು ಜನರು ಹೇಳುತ್ತಿದ್ದಾರೆ” ಎಂದನು.


ಧರ್ಮಶಾಸ್ತ್ರದಿಂದಾಗುವ ನೀತಿಯ ಬಗ್ಗೆ, “ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಜೀವವನ್ನು ಪಡೆದುಕೊಳ್ಳಲು ಬಯಸುವವನು, ಧರ್ಮಶಾಸ್ತವು ಹೇಳುವ ಕಾರ್ಯಗಳನ್ನು ಮಾಡಲೇಬೇಕು” ಎಂದು ಮೋಶೆ ಹೇಳಿದ್ದಾನೆ.


ಆದ್ದರಿಂದ ನೀವು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯರಾಗಬೇಕು. ಒಬ್ಬನು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯನಾದರೆ, ಅವನು ಜೀವಿಸುವನು! ನಾನೇ ಯೆಹೋವನು!


ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದ ಕಾರಣ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಇದಕ್ಕೆ ನೀವೇ ಸಾಕ್ಷಿಗಳು.


“ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಂಡರು. ಅವರು ಒಳ್ಳೆಯವರಾಗಲಿಲ್ಲ. ಅವರು ಇನ್ನೂ ಕೆಟ್ಟವರಾದರು. ಅವರು ಹಿಂದಕ್ಕೆ ಸರಿದರು, ಮುಂದಕ್ಕೆ ಬರಲಿಲ್ಲ.


ಅಲ್ಲಿ ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟೆನು. ನನ್ನ ವಿಧಿನಿಯಮಗಳನ್ನು ತಿಳಿಸಿದೆನು. ಅವುಗಳನ್ನು ಕೈಕೊಂಡು ನಡೆಯುವ ಎಲ್ಲರೂ ಜೀವಿಸುತ್ತಾರೆ.


ಆದರೆ ನಾನು ಅವರನ್ನು ನಾಶಮಾಡಲಿಲ್ಲ. ಬೇರೆ ದೇಶದವರು ನಾನು ಅವರನ್ನು ಈಜಿಪ್ಟಿನಿಂದ ಬಿಡಿಸಿ ತರುವುದನ್ನು ನೋಡಿದರು. ನನ್ನ ಒಳ್ಳೆಯ ಹೆಸರನ್ನು ಅವರೆದುರಿನಲ್ಲಿ ಅವಮಾನಪಡಿಸುವದಕ್ಕೆ ನನಗೆ ಇಷ್ಟವಿರಲಿಲ್ಲ. ಆದ್ದರಿಂದ ಅವರ ಮುಂದೆ ಇಸ್ರೇಲನ್ನು ನಾಶಮಾಡಲಿಲ್ಲ.


ನಾನು ಈಜಿಪ್ಟಿನ ಮರುಭೂಮಿಯಲ್ಲಿ ನಿಮ್ಮ ಪೂರ್ವಿಕರನ್ನು ದಂಡಿಸಿದಂತೆ ನಿಮ್ಮನ್ನೂ ದಂಡಿಸುವೆನು.” ನನ್ನ ಒಡೆಯನಾದ ಯೆಹೋವನು ಇವುಗಳನ್ನು ಹೇಳಿದನು.


ನೀವು ನನ್ನ ಪವಿತ್ರ ವಸ್ತುಗಳನ್ನು ಕಡೆಗಾಣಿಸಿರುವಿರಿ. ನಾನು ನೇಮಿಸಿರುವ ವಿಶೇಷ ವಿಶ್ರಾಂತಿಯ ದಿವಸಗಳನ್ನು ಅಲಕ್ಷ್ಯ ಮಾಡುತ್ತೀರಿ.


ಅಲ್ಲದೆ ನನ್ನ ಪವಿತ್ರ ಆಲಯವನ್ನೂ ನನ್ನ ಪವಿತ್ರವಾದ ವಿಶೇಷ ವಿಶ್ರಾಂತಿ ದಿವಸಗಳನ್ನೂ ಆಲಕ್ಷ್ಯ ಮಾಡಿ ಅದಕ್ಕೆ ಮಹತ್ವವನ್ನು ಕೊಡದೆ ಹೋದರು.


“ನೀವು ಅರಣ್ಯದಲ್ಲಿ ಪ್ರಯಾಣ ಮಾಡುತ್ತಿದ್ದಾಗ ನಿಮ್ಮ ದೇವರಾದ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸಿದ್ದನ್ನು ಮರೆಯಬೇಡಿರಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟುಬಂದಂದಿನಿಂದ ಈ ದಿನದ ತನಕವೂ ಆತನ ಮಾತನ್ನು ಅನುಸರಿಸಲು ನಿರಾಕರಿಸಿರುವಿರಿ.


ನಾನು ಯೆಹೂದ ಪ್ರಾಂತದ ಗೌರವಸ್ಥ ಜನರಿಗೆ, “ಇದು ತಪ್ಪು, ನೀವು ತಪ್ಪು ಕೆಲಸ ಮಾಡುತ್ತಿದ್ದೀರಿ. ನೀವು ಸಬ್ಬತ್ ದಿನವನ್ನು ಅಶುದ್ಧವನ್ನಾಗಿ ಮಾಡುತ್ತಿದ್ದೀರಿ. ಅದನ್ನು ಸಾಮಾನ್ಯ ದಿನದಂತೆ ಮಾಡುತ್ತಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು