ಯೆಹೆಜ್ಕೇಲನು 20:14 - ಪರಿಶುದ್ದ ಬೈಬಲ್14 ಆದರೆ ನಾನು ಅವರನ್ನು ನಾಶಮಾಡಲಿಲ್ಲ. ಬೇರೆ ದೇಶದವರು ನಾನು ಅವರನ್ನು ಈಜಿಪ್ಟಿನಿಂದ ಬಿಡಿಸಿ ತರುವುದನ್ನು ನೋಡಿದರು. ನನ್ನ ಒಳ್ಳೆಯ ಹೆಸರನ್ನು ಅವರೆದುರಿನಲ್ಲಿ ಅವಮಾನಪಡಿಸುವದಕ್ಕೆ ನನಗೆ ಇಷ್ಟವಿರಲಿಲ್ಲ. ಆದ್ದರಿಂದ ಅವರ ಮುಂದೆ ಇಸ್ರೇಲನ್ನು ನಾಶಮಾಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ‘ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಬರಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ, ಆ ಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು. ಅಧ್ಯಾಯವನ್ನು ನೋಡಿ |
“‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.