Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:21 - ಪರಿಶುದ್ದ ಬೈಬಲ್‌

21 “‘ಆದರೆ ಅವರ ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ಅವರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನ್ನು ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನ್ನ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಆದ್ದರಿಂದ ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನ್ನ ಕೋಪದ ತೀಕ್ಷ್ಣತೆಯನ್ನು ಅವರು ತಿಳಿದುಕೊಳ್ಳಬೇಕೆಂದು ತೀರ್ಮಾನಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು” ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಆದರೆ ಆ ಸಂತಾನದವರು ನನ್ನನ್ನು ಪ್ರತಿಭಟಿಸಿದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆದುದರಿಂದ ನಾನು ‘ಮರುಭೂಮಿಯಲ್ಲೇ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಎಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ಸಂತಾನದವರಾದರೋ ನನ್ನ ಮೇಲೆ ತಿರುಗಿಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಕೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಕೈಕೊಂಡು ನಡಿಸಲಿಲ್ಲ; ನಾನು ನೇವಿುಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದರು; ಆದದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ ‘ಆದರೆ ಮಕ್ಕಳು ನನಗೆ ವಿರೋಧವಾಗಿ ತಿರುಗಿಬಿದ್ದರು. ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ, ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಪಾಲಿಸಿ ನಡೆಯಲಿಲ್ಲ. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದಿರಿ. ಆಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ, ನನ್ನ ಕೋಪವನ್ನು ಮರುಭೂಮಿಯಲ್ಲಿ ಅವರ ಮೇಲೆ ತೀರಿಸಿ ಬಿಡುವೆನೆಂದೂ ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:21
22 ತಿಳಿವುಗಳ ಹೋಲಿಕೆ  

“‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.


ಆದರೆ ಅವರು ನನ್ನ ವಿರುದ್ಧವಾಗಿ ಎದ್ದು ನನ್ನ ಮಾತುಗಳನ್ನು ಕೇಳದೆ ಹೋದರು. ತಮ್ಮ ವಿಗ್ರಹಗಳನ್ನು ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಆದ್ದರಿಂದ ನಾನು ಅವರನ್ನು (ಇಸ್ರೇಲರನ್ನು) ಈಜಿಪ್ಟಿನಲ್ಲಿಯೇ ನಾಶಮಾಡಿ ನನ್ನ ರೋಷಾಗ್ನಿಯನ್ನು ತೀರಿಸಿಕೊಳ್ಳಲು ಆಲೋಚಿಸಿದೆನು.


ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ, “ಈ ಮರುಭೂಮಿಯಲ್ಲಿ ಸಾಯಲೆಂದು ನಮ್ಮನ್ನು ಈಜಿಪ್ಟಿನಿಂದ ಯಾಕೆ ಬರಮಾಡಿದೆ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.


ನೀವು ಹಠಮಾರಿಗಳೆಂದು ನಾನು ಬಲ್ಲೆನು. ನಾನು ನಿಮ್ಮೊಂದಿಗೆ ಇದ್ದಾಗಲೇ ನೀವು ಯೆಹೋವನಿಗೆ ವಿಧೇಯರಾಗಲಿಲ್ಲ. ಆದ್ದರಿಂದ ನಾನು ಸತ್ತ ಬಳಿಕ ಆತನ ಮಾತುಗಳನ್ನು ನೀವು ಕೇಳುವುದಿಲ್ಲ ಎಂದು ನನಗೆ ಚೆನ್ನಾಗಿ ಗೊತ್ತು.


ನಂತರ ಆಲಯದಿಂದ ಒಂದು ಮಹಾಶಬ್ದವು ನನಗೆ ಕೇಳಿಸಿತು. ಆ ಶಬ್ದವು ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿ” ಎಂದು ಹೇಳಿತು.


ಮರಳುಗಾಡಿನಲ್ಲಿ ನಲವತ್ತು ವರ್ಷಗಳ ಕಾಲ ಅವರನ್ನು ಸಹಿಸಿಕೊಂಡನು.


“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.


ನಿನ್ನ ಮೇಲೆ ನನ್ನ ರೌದ್ರವನ್ನು ಸುರಿಸುವೆನು. ನನ್ನ ರೌದ್ರವು ಬಿಸಿಗಾಳಿಯಂತೆ ನಿನ್ನನ್ನು ಸುಡುವದು. ನಾನು ನಿನ್ನನ್ನು ಕ್ರೂರ ಮನುಷ್ಯರ ಕೈಗೆ ಒಪ್ಪಿಸುವೆನು. ಅವರು ಜನರನ್ನು ಕೊಲ್ಲುವುದರಲ್ಲಿ ನಿಪುಣರು.


ಅಲ್ಲಿ ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟೆನು. ನನ್ನ ವಿಧಿನಿಯಮಗಳನ್ನು ತಿಳಿಸಿದೆನು. ಅವುಗಳನ್ನು ಕೈಕೊಂಡು ನಡೆಯುವ ಎಲ್ಲರೂ ಜೀವಿಸುತ್ತಾರೆ.


ಗೋಡೆಗೆ ಗಾರೆ ಬಳಿಯುವವರ ಮೇಲೂ, ಗೋಡೆಯ ಮೇಲೂ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ಆಗ ನಾನು, ‘ಈಗ ಗೋಡೆ ಇಲ್ಲ. ಅದಕ್ಕೆ ಗಾರೆ ಹಾಕುವವರೂ ಇಲ್ಲ’ ಎಂದು ಹೇಳುವೆನು.


ಇನ್ನು ಸ್ವಲ್ಪ ಸಮಯದಲ್ಲಿ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂದು ನಿಮಗೆ ತೋರಿಸುವೆನು. ನನ್ನ ಕೋಪವನ್ನೆಲ್ಲಾ ನಿಮಗೆ ತೋರಿಸುವೆನು. ನಿಮ್ಮ ದುಷ್ಕ್ರಿಯೆಗಳಿಗಾಗಿ ನಾನು ನಿಮ್ಮನ್ನು ಶಿಕ್ಷಿಸುವೆನು. ನಿಮ್ಮ ಅಸಹ್ಯಕೃತ್ಯಗಳಿಗಾಗಿ ನಾನು ಸೇಡನ್ನು ತೀರಿಸಿಕೊಳ್ಳುವೆನು.


ಯೆಹೋವನು ತನ್ನ ಕೋಪವನ್ನೆಲ್ಲ ಉಪಯೋಗಿಸಿದನು; ತನ್ನ ಕೋಪವನ್ನೆಲ್ಲಾ ಸುರಿದುಬಿಟ್ಟನು. ಆತನು ಚೀಯೋನಿನಲ್ಲಿ ಬೆಂಕಿ ಹೊತ್ತಿಸಿದನು. ಆ ಬೆಂಕಿಯು ಚೀಯೋನಿನ ಅಡಿಪಾಯಗಳವರೆಗೂ ದಹಿಸಿಬಿಟ್ಟಿತು.


ಯಾಕೆಂದರೆ ಜನರು ನನ್ನನ್ನು ತೊರೆದು ಸುಳ್ಳುದೇವರುಗಳಿಗೆ ಧೂಪಹಾಕಿದರು. ಅವರು ತಮ್ಮ ಕೆಟ್ಟಕಾರ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ನನ್ನ ಕೋಪಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ಉರಿಯುವ ಬೆಂಕಿಯಂತಿರುವ ನನ್ನ ಕೋಪಾಗ್ನಿಯನ್ನು ಆರಿಸಲು ಸಾಧ್ಯವಿಲ್ಲ.’


“ಹೋಗಿ ನನ್ನ ವಿಷಯವಾಗಿಯೂ ಇಸ್ರೇಲ್ ಮತ್ತು ಯೆಹೂದದಲ್ಲಿರುವ ಜನರಿಗೋಸ್ಕರವಾಗಿಯೂ ಯೆಹೋವನಲ್ಲಿ ವಿಚಾರಿಸಿರಿ. ಯೆಹೋವನು ನಮ್ಮ ಮೇಲೆ ಕೋಪಗೊಂಡಿದ್ದಾನೆ. ಯಾಕೆಂದರೆ ನಮ್ಮ ಪೂರ್ವಿಕರು ಆತನ ಧರ್ಮಶಾಸ್ತ್ರದ ಪ್ರಕಾರ ನಡೆದುಕೊಂಡಿಲ್ಲ. ಈ ಪುಸ್ತಕದಲ್ಲಿ ಮಾಡಬೇಕೆಂದು ಹೇಳಿದ್ದನ್ನು ಅವರು ಮಾಡದೆ ಹೋಗಿದ್ದಾರೆ” ಎಂದು ಹೇಳಿದನು.


ಯೇಸು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ಕೇಳುವುದೇಕೆ? ದೇವರೊಬ್ಬನೇ ಒಳ್ಳೆಯವನು. ಆದರೆ ನೀನು ನಿತ್ಯಜೀವವನ್ನು ಹೊಂದಬೇಕೆಂದಿದ್ದರೆ ಈ ಆಜ್ಞೆಗಳಿಗೆ ವಿಧೇಯನಾಗು” ಎಂದು ಉತ್ತರಕೊಟ್ಟನು.


ನಾನು ಈಜಿಪ್ಟಿನ ಮರುಭೂಮಿಯಲ್ಲಿ ನಿಮ್ಮ ಪೂರ್ವಿಕರನ್ನು ದಂಡಿಸಿದಂತೆ ನಿಮ್ಮನ್ನೂ ದಂಡಿಸುವೆನು.” ನನ್ನ ಒಡೆಯನಾದ ಯೆಹೋವನು ಇವುಗಳನ್ನು ಹೇಳಿದನು.


ನೀವು ನನ್ನ ಪವಿತ್ರ ವಸ್ತುಗಳನ್ನು ಕಡೆಗಾಣಿಸಿರುವಿರಿ. ನಾನು ನೇಮಿಸಿರುವ ವಿಶೇಷ ವಿಶ್ರಾಂತಿಯ ದಿವಸಗಳನ್ನು ಅಲಕ್ಷ್ಯ ಮಾಡುತ್ತೀರಿ.


ದೇವರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಅವರು ಪಾಲಿಸಲಿಲ್ಲ. ಅವರು ಆತನ ಉಪದೇಶಗಳಿಗೆ ವಿಧೇಯರಾಗಲಿಲ್ಲ.


ಇಸ್ರೇಲಿನ ಜನರು ಈ ಪ್ರದೇಶಕ್ಕೆ ಬಂದು ಅದನ್ನು ತಮ್ಮದನ್ನಾಗಿ ಮಾಡಿಕೊಂಡರು. ಆದರೆ ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ; ನಿನ್ನ ಉಪದೇಶಗಳನ್ನು ಅನುಸರಿಸಲಿಲ್ಲ; ನಿನ್ನ ಆಜ್ಞೆಯಂತೆ ಮಾಡಲಿಲ್ಲ. ಆದ್ದರಿಂದ ನೀನು ಇಸ್ರೇಲರಿಗೆ ಇಂಥಾ ದುರ್ಗತಿ ಬರುವಂತೆ ಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು