ಯೆಹೆಜ್ಕೇಲನು 20:29 - ಪರಿಶುದ್ದ ಬೈಬಲ್29 ನಾನು ಇಸ್ರೇಲರಿಗೆ, “ನೀವು ಎತ್ತರದಲ್ಲಿರುವ ಪೂಜಾಸ್ಥಳಗಳಿಗೆ ಯಾಕೆ ಹೋಗುತ್ತೀರಿ?” ಎಂದು ಪ್ರಶ್ನಿಸಿದೆನು. ಆ ಪೂಜಾಸ್ಥಳಗಳು ಇಂದಿಗೂ “ಎತ್ತರವಾದ ಸ್ಥಳ” ಎಂದು ಕರೆಯಲ್ಪಡುತ್ತಿವೆ. ಈಗಲೂ ಆ ಪೂಜಾಸ್ಥಳಗಳು ಅಲ್ಲಿವೆ.’” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನೀವು ಹೋಗುವ, ‘ಬಾಮಾ ಎಂಬ ಪೂಜಾಸ್ಥಾನ ಇದು ಎಂಥ ಸ್ಥಳ?’” (ಇಂದಿನ ವರೆಗೂ ಇಂಥಾ ಪೂಜಾಸ್ಥಾನಗಳಿಗೆ ಬಾಮಾ ಎಂದೇ ಹೆಸರು). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ನೀವು ಹೋಗುವ ‘ಬಾ - ಮಾ’ ಎಂಬ ಪೂಜಾಸ್ಥಳ ಎಂಥ ಸ್ಥಳ? (ಇಂದಿನವರೆಗೂ ಇಂಥಾ ಪೂಜಾಸ್ಥಳಗಳಿಗೆ ಬಾಮಾ ಎಂದೇ ಹೆಸರು). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನೀವು ಹೋಗುವ ಬಾ-ಮಾ [ಎಂಬ ಪೂಜಾಸ್ಥಾನ] ಏನು ಸ್ಥಾನ? (ಇಂದಿನವರೆಗೂ ಇಂಥಾ ಪೂಜಾಸ್ಥಾನಗಳಿಗೆ ಬಾಮಾ ಎಂಬದು ಹೆಸರು). ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆಗ ನಾನು ಅವರಿಗೆ ಹೇಳಿದ್ದೇನೆಂದರೆ: ನೀವು ಹೋಗುವ ಈ ಎತ್ತರವಾದ ಸ್ಥಳವು ಏನು? ಅದಕ್ಕೆ ಈ ದಿನದವರೆಗೂ ಬಾಮಾ ಎಂದು ಕರೆಯುವರು.’ ” ಅಧ್ಯಾಯವನ್ನು ನೋಡಿ |
ದೇವರು ಹೇಳಿದ್ದೇನೆಂದರೆ, “ಇಸ್ರೇಲ್ ಜನರು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಆದ್ದರಿಂದ ನೀನು ಹೋಗಿ ಅವರಿಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಿಮ್ಮ ಪೂರ್ವಿಕರು ಮಾಡಿದಂತೆಯೇ ನೀವು ನಿಮ್ಮನ್ನು ಅಪವಿತ್ರರನ್ನಾಗಿ ಮಾಡಿಕೊಳ್ಳುತ್ತಿದ್ದೀರಿ. ನೀವು ಸೂಳೆಯರ ಹಾಗೆ ವರ್ತಿಸಿರುತ್ತೀರಿ. ನಿಮ್ಮ ಪೂರ್ವಿಕರು ಪೂಜಿಸಿದ ಆ ಭಯಂಕರವಾದ ವಿಗ್ರಹಗಳೊಂದಿಗೆ ಇರುವದಕ್ಕಾಗಿ ನನ್ನನ್ನು ನೀವು ತೊರೆದುಬಿಟ್ಟಿರಿ.