ಯೆಹೆಜ್ಕೇಲನು 20:3 - ಪರಿಶುದ್ದ ಬೈಬಲ್3 “ನರಪುತ್ರನೇ, ಇಸ್ರೇಲಿನ ಹಿರಿಯರೊಂದಿಗೆ ಮಾತಾಡಿ ಅವರಿಗೆ, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನೀವು ನನ್ನ ಬುದ್ಧಿವಾದವನ್ನು ಕೇಳಲು ಬಂದಿರುವಿರಾ? ನನ್ನ ಜೀವದಾಣೆ, ನನ್ನ ಬುದ್ಧಿವಾದವನ್ನು ನಿಮಗೆ ಹೇಳುವದಿಲ್ಲವೆಂದು ನಾನು ಪ್ರಮಾಣಮಾಡುತ್ತೇನೆ. ನನ್ನ ಒಡೆಯನಾದ ಯೆಹೋವನ ವಾಕ್ಯವಿದು.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ನರಪುತ್ರನೇ, ಇಸ್ರಾಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನನ್ನನ್ನು ಪ್ರಶ್ನೆ ಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ’” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ನರಪುತ್ರನೇ, ಇಸ್ರಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನನ್ನು ಪ್ರಶ್ನೆಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ; ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನರಪುತ್ರನೇ, ಇಸ್ರಾಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನನ್ನು ಪ್ರಶ್ನೆಕೇಳುವದಕ್ಕೆ ಬಂದಿರೊ? ನನ್ನ ಜೀವದಾಣೆ, ನಾನು ನಿಮಗೆ ಉತ್ತರಕೊಡುವದೇ ಇಲ್ಲ; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನನ್ನು ಪ್ರಶ್ನೆಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ಅಧ್ಯಾಯವನ್ನು ನೋಡಿ |
ನೀವು ಅವುಗಳಿಗೆ ಅದೇ ರೀತಿಯ ಕಾಣಿಕೆಗಳನ್ನರ್ಪಿಸುತ್ತೀರಿ. ಆ ಸುಳ್ಳು ದೇವರುಗಳಿಗೆ ನೀವು ನಿಮ್ಮ ಮಕ್ಕಳನ್ನು ಬೆಂಕಿಯ ಮೂಲಕ ಆಹುತಿ ಮಾಡುತ್ತೀರಿ. ಈ ಹೊತ್ತಿನ ದಿನದ ತನಕವೂ ಆ ಹೊಲಸು ವಿಗ್ರಹಗಳ ಮೂಲಕ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳುತ್ತಿದ್ದೀರಿ. ನೀವು ನನ್ನ ಬಳಿಗೆ ಬಂದು ನನ್ನ ಸಲಹೆಗಳನ್ನು ಕೇಳಲು ನಿಮ್ಮನ್ನು ನಾನು ಸ್ವಾಗತಿಸಬೇಕೋ? ನಾನು ಒಡೆಯನಾದ ಯೆಹೋವನು. ನನ್ನ ಜೀವದಾಣೆ, ನಾನು ನಿಮಗೆ ಉತ್ತರಿಸುವುದಿಲ್ಲ; ನಿಮಗೆ ಸಲಹೆಗಳನ್ನೂ ಕೊಡುವದಿಲ್ಲ.