ಯೆಹೆಜ್ಕೇಲನು 20:31 - ಪರಿಶುದ್ದ ಬೈಬಲ್31 ನೀವು ಅವುಗಳಿಗೆ ಅದೇ ರೀತಿಯ ಕಾಣಿಕೆಗಳನ್ನರ್ಪಿಸುತ್ತೀರಿ. ಆ ಸುಳ್ಳು ದೇವರುಗಳಿಗೆ ನೀವು ನಿಮ್ಮ ಮಕ್ಕಳನ್ನು ಬೆಂಕಿಯ ಮೂಲಕ ಆಹುತಿ ಮಾಡುತ್ತೀರಿ. ಈ ಹೊತ್ತಿನ ದಿನದ ತನಕವೂ ಆ ಹೊಲಸು ವಿಗ್ರಹಗಳ ಮೂಲಕ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳುತ್ತಿದ್ದೀರಿ. ನೀವು ನನ್ನ ಬಳಿಗೆ ಬಂದು ನನ್ನ ಸಲಹೆಗಳನ್ನು ಕೇಳಲು ನಿಮ್ಮನ್ನು ನಾನು ಸ್ವಾಗತಿಸಬೇಕೋ? ನಾನು ಒಡೆಯನಾದ ಯೆಹೋವನು. ನನ್ನ ಜೀವದಾಣೆ, ನಾನು ನಿಮಗೆ ಉತ್ತರಿಸುವುದಿಲ್ಲ; ನಿಮಗೆ ಸಲಹೆಗಳನ್ನೂ ಕೊಡುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನೀವು ಬಲಿಯರ್ಪಿಸುತ್ತಾ ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧ ಮಾಡಿಕೊಳ್ಳುತ್ತಿದ್ದೀರೋ? ಇಸ್ರಾಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೋ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ನೀವು ಬಲಿಯರ್ಪಿಸುತ್ತಾ, ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧಮಾಡಿಕೊಂಡಿರಿ. ಹೀಗಿರುವಾಗ ಇಸ್ರಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೇ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸೆನು; ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನೀವು ಬಲಿಯರ್ಪಿಸುತ್ತಾ ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧಮಾಡಿಕೊಳ್ಳುತ್ತಿದ್ದೀರೋ? ಇಸ್ರಾಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೋ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸೆನು; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ನಿಮ್ಮ ದಾನಗಳನ್ನು ತರುವಾಗಲೂ, ಬೆಂಕಿಯಲ್ಲಿ ನಿಮ್ಮ ಮಕ್ಕಳನ್ನು ಯಜ್ಞವಾಗಿ ಅರ್ಪಿಸುವಾಗಲೂ, ನೀವು ಇಂದಿನವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿಕೊಳ್ಳುತ್ತಿದ್ದೀರಿ. ಹೀಗಿರುವಾಗ ಇಸ್ರಾಯೇಲ್ ವಂಶದವರೇ, ನೀವು ನನ್ನನ್ನು ವಿಚಾರಿಸಲು ಅನುಮತಿಸಬೇಕೆ? ನನ್ನ ಜೀವದಾಣೆ ನಾನು ನಿಮ್ಮನ್ನು ವಿಚಾರಿಸಲು ಅನುಮತಿಸುವುದಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.