Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:32 - ಪರಿಶುದ್ದ ಬೈಬಲ್‌

32 ನಾವು ಮರದ ಮತ್ತು ಕಲ್ಲಿನ ವಸ್ತುಗಳನ್ನು ಪೂಜಿಸುತ್ತಾ ಇತರ ಜನಾಂಗಗಳಂತೆ ಇರೋಣ ಎಂದು ನೀವು ಯೋಚಿಸುತ್ತಲೇ ಇರುತ್ತೀರಿ. ನಿಮ್ಮ ಮನಸ್ಸುಗಳಲ್ಲಿರುವ ಈ ಆಲೋಚನೆಯು ಎಂದಿಗೂ ನೆರವೇರುವುದಿಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಖಂಡಿತ ನೆರವೇರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ‘ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರ, ಕಲ್ಲುಗಳ ವಿಗ್ರಹಗಳನ್ನು ಪೂಜಿಸುವೆವು’ ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆ ಎಷ್ಟು ಮಾತ್ರವೂ ನೆರವೇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟುಮಾತ್ರವೂ ಸಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 “ ‘ “ನಾವು ಇತರ ಜನಾಂಗಗಳ ಹಾಗೆ ಮತ್ತು ಇತರ ದೇಶಗಳವರ ಹಾಗೆ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ನೆರವೇರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:32
19 ತಿಳಿವುಗಳ ಹೋಲಿಕೆ  

ಆಗ ಯೆಹೋವನ ಆತ್ಮನು ನನ್ನ ಮೇಲೆ ಬಂದನು. ಆತನು ಹೇಳಿದ್ದೇನೆಂದರೆ, “ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನರಿಗೆ ತಿಳಿಸು: ಇಸ್ರೇಲ್ ಮನೆತನವೇ, ನೀನು ದೊಡ್ಡದೊಡ್ಡ ವಿಷಯಗಳನ್ನು ಆಲೋಚಿಸುತ್ತೀ. ನೀನು ಏನೂ ಯೋಚಿಸುತ್ತೀ ಎಂದು ನಾನು ಬಲ್ಲೆನು.


ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನ್ನೆಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನ್ನು ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನ್ನು ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಧಿಕಾರಿಗಳು ಮೊದಲು ಮಾಡಿದಂತೆಯೇ ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಸ್ವರ್ಗದ ರಾಣಿಯನ್ನು ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ.


ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.


ಅವರು ಕುಡಿಯುವಾಗ ತಮ್ಮ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸುತ್ತಿದ್ದರು.


ನಾನು ಕುಳಿತುಕೊಳ್ಳುವುದೂ ಎದ್ದೇಳುವುದೂ ನಿನಗೆ ತಿಳಿದಿದೆ. ನೀನು ಬಹುದೂರದಿಂದಲೇ ನನ್ನ ಆಲೋಚನೆಗಳನ್ನು ತಿಳಿದಿರುವೆ.


ಅಲ್ಲಿ, ಮನುಷ್ಯರು ಕೈಯಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಅವು ಮರಕಲ್ಲುಗಳಿಂದ ರೂಪಿಸಲ್ಪಟ್ಟಿವೆ. ಅವು ನೋಡಲಾರವು, ಕೇಳಲಾರವು, ತಿನ್ನಲಾರವು ಮತ್ತು ಮೂಸಿನೋಡಲಾರವು!


ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ಆ ಸಮಯದಲ್ಲಿ ನಿನ್ನ ಮನಸ್ಸಿಗೆ ಒಂದು ಆಲೋಚನೆಯು ಹೊಳೆಯುವುದು. ನೀನು ಒಂದು ದುಷ್ಟ ಯೋಜನೆಯನ್ನು ಮಾಡುವಿ.


ಯಾರೇ ಆಗಲಿ ತಾವು ಮುಂತಿಳಿಸಿದ್ದನ್ನು ಯೆಹೋವನು ಆಜ್ಞಾಪಿಸದ ಹೊರತು ಅದು ನೆರವೇರುವುದಿಲ್ಲ.


ನಾನು ನಿಮ್ಮನ್ನು ಇಲ್ಲಿ ಈಜಿಪ್ಟಿನಲ್ಲಿ ದಂಡಿಸುತ್ತೇನೆಂದು ಪ್ರಮಾಣ ಮಾಡುತ್ತೇನೆ. ಆಗ ನಾನು ನಿಮ್ಮನ್ನು ದಂಡಿಸುವೆನೆಂದು ಮಾಡಿದ ಪ್ರತಿಜ್ಞೆ ಈಡೇರುವದೆಂದು ನಿಮಗೆ ತಿಳಿಯುವುದು.’ ಇದು ಯೆಹೋವನ ನುಡಿ.


ಅಶ್ಶೂರದ ಅರಸರು ಆ ಜನಾಂಗಗಳ ದೇವರುಗಳನ್ನು ಸುಟ್ಟುಹಾಕಿದರು. ಆದರೆ ಆ ದೇವರುಗಳು ಸತ್ಯವಾದುವುಗಳಲ್ಲ. ಅವುಗಳು ಮನುಷ್ಯರು ಕಲ್ಲಿನಿಂದ ಮತ್ತು ಮರದಿಂದ ಕೆತ್ತಿದ ವಿಗ್ರಹಗಳಾಗಿದ್ದವು. ಆದ್ದರಿಂದ ಅಶ್ಶೂರದ ಅರಸರು ಅವುಗಳನ್ನು ನಾಶಮಾಡಲು ಸಾಧ್ಯವಾಯಿತು.


ಹಿರಿಯರು ಸಮುವೇಲನಿಗೆ, “ನೀನು ಮುದುಕನಾಗಿರುವೆ ಮತ್ತು ನಿನ್ನ ಮಕ್ಕಳು ಒಳ್ಳೆಯ ಮಾರ್ಗದಲ್ಲಿ ನಡೆಯುತ್ತಿಲ್ಲ, ಅವರು ನಿನ್ನಂತಲ್ಲ. ಈಗ, ಬೇರೆ ದೇಶಗಳಂತೆ ಒಬ್ಬ ರಾಜನನ್ನು ನಮ್ಮನ್ನಾಳಲು ನೇಮಿಸು” ಎಂದು ಹೇಳಿದರು.


ನೀವು ಅವರ ಅಸಹ್ಯವಾದ ವಿಗ್ರಹಗಳನ್ನು ನೋಡಿದಿರಿ. ಅವುಗಳು ಮರ, ಕಲ್ಲು, ಬೆಳ್ಳಿಬಂಗಾರಗಳಿಂದ ಕೆತ್ತಲ್ಪಟ್ಟವುಗಳಾಗಿದ್ದವು.


ಯೆಹೋವನು ನಿಮ್ಮನ್ನು ಲೋಕದ ಎಲ್ಲಾ ದೇಶಗಳಿಗೆ ಚದರಿಸಿಬಿಡುವನು. ಆತನು ಪ್ರಪಂಚದ ಒಂದು ಕಡೆಯಿಂದ ಇನ್ನೊಂದು ಕಡೆಯ ತನಕ ನಿಮ್ಮನ್ನು ಚದರಿಸುವನು. ಅಲ್ಲಿ ನೀವು ಕಲ್ಲುಮರಗಳಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಆ ಸುಳ್ಳುದೇವರುಗಳನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಎಂದೂ ಪೂಜಿಸಿರಲಿಲ್ಲ.


“ಯೆಹೋವನು ನಿಮ್ಮನ್ನೂ ನಿಮ್ಮ ಅರಸನನ್ನೂ ನೀವು ಅರಿಯದ ದೇಶಕ್ಕೆ ಅಟ್ಟಿಬಿಡುವನು. ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಆ ದೇಶವನ್ನು ಎಂದೂ ನೋಡಲಿಲ್ಲ. ಅಲ್ಲಿ ಮರ, ಕಲ್ಲುಗಳಿಂದ ಮಾಡಿದ ಸುಳ್ಳುದೇವರನ್ನು ಆರಾಧಿಸುವಿರಿ.


ಜನರು ಅನೇಕ ಆಲೋಚನೆಗಳನ್ನು ಮಾಡಿಕೊಂಡರೂ ಯೆಹೋವನ ಇಚ್ಛೆಯೇ ನೆರವೇರುವುದು.


ಯೆಹೂದವೇ, ವಿಗ್ರಹಗಳ ಬೆನ್ನುಹತ್ತಿ ಹೋಗುವದನ್ನು ನಿಲ್ಲಿಸು! ಆ ಅನ್ಯದೇವರುಗಳ ಬಗ್ಗೆ ನಿನ್ನಲ್ಲಿರುವ ಬಯಕೆಯನ್ನು ತೊರೆದುಬಿಡು. ಆದರೆ ನೀನು ‘ಹಾಗೆ ಮಾಡಿದರೆ ಪ್ರಯೋಜನವೇನು? ನಾನು ಅವುಗಳನ್ನು ಬಿಡಲಾರೆ. ನಾನು ಆ ಅನ್ಯದೇವರುಗಳನ್ನು ಪ್ರೀತಿಸುತ್ತೇನೆ. ನಾನು ಅವುಗಳನ್ನು ಪೂಜಿಸಬಯಸುತ್ತೇನೆ’ ಎಂದು ಹೇಳುವೆ.


ಯೆಹೋವನು ಜನಾಂಗಗಳ ಉದ್ದೇಶಗಳನ್ನು ವ್ಯರ್ಥಗೊಳಿಸಬಲ್ಲನು; ಅವರ ಆಲೋಚನೆಗಳನ್ನು ನಿಷ್ಪಲ ಮಾಡಬಲ್ಲನು.


ನನ್ನ ಜನರು ಮರದ ತುಂಡುಗಳಿಂದ ಸಲಹೆಗಳನ್ನು ಕೇಳುವರು. ಆ ಮರದ ತುಂಡುಗಳು ಅವರಿಗೆ ಉತ್ತರಿಸುವವು ಎಂದು ಅವರು ನೆನಸುತ್ತಾರೆ. ಯಾಕೆಂದರೆ, ವೇಶ್ಯೆಯರಂತೆ ಅವರು ಆ ಸುಳ್ಳು ದೇವರುಗಳನ್ನು ಹಿಂದಟ್ಟಿಕೊಂಡು ಹೋಗುವರು. ಅವರು ತಮ್ಮ ದೇವರುಗಳನ್ನು ಬಿಟ್ಟು ವೇಶ್ಯೆಯರಂತೆ ವರ್ತಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು