ಯೆಹೆಜ್ಕೇಲನು 20:34 - ಪರಿಶುದ್ದ ಬೈಬಲ್34 ಪರದೇಶಗಳಿಂದ ನಾನು ನಿಮ್ಮನ್ನು ಹೊರತರುವೆನು. ನಾನು ಆ ದೇಶಗಳಲ್ಲಿ ನಿಮ್ಮನ್ನು ಚದರಿಸಿದೆನು. ಆದರೆ ಆ ದೇಶಗಳಿಂದ ನಾನು ನಿಮ್ಮನ್ನು ಒಟ್ಟುಗೂಡಿಸಿ ಹಿಂದಕ್ಕೆ ಬರಮಾಡುವೆನು. ನನ್ನ ಬಲವಾದ ಕೈಯನ್ನು ಮತ್ತು ಶಕ್ತಿಯುತವಾದ ತೋಳನ್ನು ಮೇಲೆತ್ತಿ ನಿಮ್ಮನ್ನು ಶಿಕ್ಷಿಸಿ ನನ್ನ ಕೋಪವನ್ನು ಪ್ರದರ್ಶಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ ದೇಶಗಳಿಂದ ನಿಮ್ಮನ್ನು ಕೂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಹರಿಸುತ್ತಾ, ನಿಮ್ಮನ್ನು ಜನಾಂಗಗಳಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ನಿಮ್ಮನ್ನು ಒಂದುಗೂಡಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಸುರಿಸಿದ ರೋಷದಿಂದಲೂ, ನಿಮ್ಮನ್ನು ಜನರೊಳಗಿಂದ ಹೊರತಂದು ನೀವು ಚದರಿಹೋಗಿರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸುವೆನು. ಅಧ್ಯಾಯವನ್ನು ನೋಡಿ |
“ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನ್ನ ಕೋಪವನ್ನು ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನ್ನ ಕೋಪವನ್ನು ತೋರಿಸುವೆನು. ಬೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಬೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನ್ನು ಕೊಡುವರು. ನೀವು ಒಂದು ಶಾಪದ ಶಬ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನ್ನು ಅಪಮಾನ ಮಾಡುವರು. ಯೆಹೂದವನ್ನು ಪುನಃ ನೀವು ಎಂದೂ ನೋಡುವದಿಲ್ಲ.’
‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.