ಯೆಹೆಜ್ಕೇಲನು 20:39 - ಪರಿಶುದ್ದ ಬೈಬಲ್39 ಇಸ್ರೇಲ್ ಜನರೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ಹೊಲಸು ವಿಗ್ರಹಗಳನ್ನು ಆರಾಧಿಸಬೇಕೆನ್ನುವವನು ಹೋಗಿ ಆರಾಧಿಸಲಿ. ಮುಂದಿನ ಕಾಲದಲ್ಲಂತೂ ನೀವು ನನ್ನ ಬುದ್ಧಿಮಾತನ್ನು ಕೇಳೇ ಕೇಳುವಿರಿ. ನನ್ನ ಪರಿಶುದ್ಧ ಹೆಸರನ್ನು ನೀವು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 “ಇಸ್ರಯೇಲ್ ವಂಶದವರೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹೋಗಿರಿ, ನಿಮ್ಮ ವಿಗ್ರಹಗಳನ್ನು ಪೂಜಿಸಿರಿ; ಮುಂದಕ್ಕಾದರು ನನ್ನ ಮಾತನ್ನು ಕೇಳಿಯೇ ಕೇಳುವಿರಿ; ಇನ್ನು ಮೇಲಾದರು ನನ್ನ ಪರಿಶುದ್ಧನಾಮವನ್ನು ನಿಮ್ಮ ಬಲಿಗಳಿಂದ ಹಾಗೂ ವಿಗ್ರಹಗಳಿಂದ ನೀವು ಅಪಕೀರ್ತಿಗೆ ಒಳಪಡಿಸಲಾರಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹೋಗಿರಿ, ನಿಮ್ಮ ಬೊಂಬೆಗಳನ್ನು ಸೇವಿಸಿಕೊಳ್ಳಿರಿ; ಮುಂದಂತು ನನ್ನ ಮಾತನ್ನು ಕೇಳೇ ಕೇಳುವಿರಿ, ಇನ್ನು ಮೇಲೆ ನನ್ನ ಪರಿಶುದ್ಧನಾಮವನ್ನು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 “ ‘ನಿಮ್ಮ ವಿಷಯವಾಗಿ, ಓ ಇಸ್ರಾಯೇಲಿನ ಮನೆತನದವರೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೋಗಿರಿ, ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ. ಆದರೆ ನಂತರ ನೀವು ಖಂಡಿತವಾಗಿಯೂ ನನ್ನ ಮಾತನ್ನು ಕೇಳುತ್ತೀರಿ ಮತ್ತು ನಿಮ್ಮ ದಾನಗಳಿಂದಲೂ, ನಿಮ್ಮ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ. ಅಧ್ಯಾಯವನ್ನು ನೋಡಿ |
ಆಲಯದೊಳಗಿಂದ ಬಂದ ಸ್ವರವು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇದು ನನ್ನ ಸಿಂಹಾಸನವೂ ಪಾದಪೀಠವೂ ಇರುವ ಸ್ಥಳ. ನಾನು ಇಲ್ಲಿ ನನ್ನ ಜನರಾದ ಇಸ್ರೇಲರ ಮಧ್ಯದಲ್ಲಿ ನಿರಂತರವೂ ವಾಸಿಸುವೆನು. ಇಸ್ರೇಲ್ ಜನಾಂಗವು ಇನ್ನು ಮುಂದೆ ನನ್ನ ಪವಿತ್ರವಾದ ಹೆಸರನ್ನು ಹಾಳುಮಾಡುವದಿಲ್ಲ. ರಾಜರೂ ಅವರ ಜನರೂ ಲೈಂಗಿಕ ಪಾಪಗಳನ್ನು ಮಾಡಿ ನನ್ನನ್ನು ಅವಮಾನಪಡಿಸರು. ಅವರ ರಾಜರುಗಳ ಮೃತಶರೀರವನ್ನು ಇಲ್ಲಿ ಸಮಾಧಿ ಮಾಡುವದಿಲ್ಲ.
ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.
ಎಲೀಷನು ಇಸ್ರೇಲಿನ ರಾಜನಿಗೆ, “ನನ್ನಿಂದ ನಿನಗೆ ಏನು ಬೇಕಾಗಿದೆ? ನಿನ್ನ ತಂದೆತಾಯಿಯರ ಪ್ರವಾದಿಗಳ ಬಳಿಗೆ ಹೋಗು!” ಎಂದು ಹೇಳಿದನು. ಇಸ್ರೇಲಿನ ರಾಜನು ಎಲೀಷನಿಗೆ, “ಇಲ್ಲ, ನಾವು ನಿನ್ನನ್ನು ನೋಡಲೆಂದು ಇಲ್ಲಿಗೆ ಬಂದಿದ್ದೇವೆ, ಏಕೆಂದರೆ ಯೆಹೋವನು ಮೂವರು ರಾಜರನ್ನು ಒಟ್ಟಿಗೆ ಬರಮಾಡಿ, ನಮ್ಮನ್ನು ಮೋವಾಬ್ಯರು ಸೋಲಿಸುವಂತೆ ಮಾಡಿದ್ದಾನೆ. ನಾವು ನಿನ್ನ ಸಹಾಯವನ್ನು ಬಯಸಿದ್ದೇವೆ” ಎಂದನು.
ಒಬ್ಬ ವ್ಯಕ್ತಿಯು ಸತ್ತಾಗ ಅವನ ಸಂಬಂಧಿಕರಲ್ಲಿ ಒಬ್ಬನು ಬಂದು ಶವವನ್ನು ಸುಡಲು ತೆಗೆದುಕೊಂಡು ಹೋಗುವನು. ಸಂಬಂಧಿಕನು ಬಂದು ಎಲುಬುಗಳನ್ನು ಕೊಂಡೊಯ್ಯುವನು. ಮನೆಯೊಳಗೆ ಅವಿತುಕೊಂಡಿರುವವರನ್ನು ಕರೆಯುವನು. “ಇನ್ನೂ ಸತ್ತ ಹೆಣಗಳು ಒಳಗಿವೆಯೋ?” ಎಂದು ವಿಚಾರಿಸುವನು. ಒಳಗಿದ್ದವರು “ಇಲ್ಲ” ಎಂದು ಉತ್ತರಿಸುವರು. ಆಗ ಆ ಸಂಬಂಧಿಕನು ಅವರನ್ನು ತಡೆದು, “ಯೆಹೋವನ ನಾಮವನ್ನು ನಾವು ಉಚ್ಚರಿಸಬಾರದು” ಎಂದು ಹೇಳುವನು.
“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.