ಯೆಹೆಜ್ಕೇಲನು 20:40 - ಪರಿಶುದ್ದ ಬೈಬಲ್40 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಎತ್ತರವಾದ ನನ್ನ ಪವಿತ್ರಪರ್ವತಕ್ಕೆ ಜನರು ಬರಲೇಬೇಕು. ಅಲ್ಲಿ ಅವರು ನನ್ನ ಸೇವೆ ಮಾಡಲೇಬೇಕು. ಇಡೀ ಇಸ್ರೇಲ್ ಜನಾಂಗವು ತಮ್ಮ ದೇಶದಲ್ಲಿರುವುದು. ಅಲ್ಲಿ ನಾನು ಅವರನ್ನು ಸ್ವೀಕರಿಸಿಕೊಳ್ಳುವೆನು. ಅಲ್ಲಿ ನೀವು ನಿಮ್ಮ ಕಾಣಿಕೆಗಳನ್ನು ಪ್ರಥಮ ಫಲಗಳನ್ನು ಮತ್ತು ಎಲ್ಲಾ ಪವಿತ್ರ ಕಾಣಿಕೆಗಳನ್ನು ನನಗೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ, ಉತ್ತಮ ನೈವೇದ್ಯಗಳನ್ನೂ, ಮೀಸಲಾದ ಎಲ್ಲವನ್ನೂ ಬರಮಾಡಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾಡಿನಲ್ಲಿ ಇಸ್ರಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧ ಬೆಟ್ಟದಲ್ಲೇ, ಇಸ್ರಯೇಲಿನ ಪರ್ವತಾಗ್ರದಲ್ಲೇ, ನನ್ನನ್ನು ಪೂಜಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದುದೆಲ್ಲವನ್ನೂ ಅಂಗೀಕರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದದೆಲ್ಲವನ್ನೂ ಬರಮಾಡಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಪರಿಶುದ್ಧ ಪರ್ವತದಲ್ಲಿಯೇ, ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನದವರೆಲ್ಲರೂ, ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ, ನಿಮ್ಮ ಉತ್ತಮ ಅರ್ಪಣೆಗಳನ್ನೂ, ನಿಮ್ಮ ಕಾಣಿಕೆಗಳ ಪ್ರಥಮ ಫಲವನ್ನೂ, ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.