ಯೆಹೆಜ್ಕೇಲನು 20:41 - ಪರಿಶುದ್ದ ಬೈಬಲ್41 ಆಗ ನಿಮ್ಮ ಕಾಣಿಕೆಯ ಸುವಾಸನೆಯಿಂದ ಸಂತೋಷಭರಿತನಾಗುವೆನು. ಇದು ನಿಮ್ಮನ್ನು ಹಿಂದಕ್ಕೆ ನಿಮ್ಮ ದೇಶಕ್ಕೆ ಕರೆತಂದಾಗ ಆಗುವದು. ನಾನು ನಿಮ್ಮನ್ನು ಅನೇಕ ದೇಶಗಳಲ್ಲಿ ಚದರಿಸಿದೆನು. ಆದರೆ ನಾನು ನಿಮ್ಮನ್ನು ಒಟ್ಟುಗೂಡಿಸಿ ನಿಮ್ಮ ಮೂಲಕ ನನ್ನ ಪವಿತ್ರತೆಯನ್ನು ಪ್ರದರ್ಶಿಸುವೆನು. ಆ ಎಲ್ಲಾ ದೇಶಗಳವರು ಇದನ್ನು ನೋಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಅಂಗೀಕರಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಸೇರಿಸುವಾಗ, ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ, ನಿಮ್ಮ ರಕ್ಷಣೆಯ ಮೂಲಕ, ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ನಾನು ನಿಮ್ಮನ್ನು ಇತರ ಜನಾಂಗಗಳೊಳಗಿಂದ ಹೊರತಂದು, ನೀವು ಚದರಿಸುವ ದೇಶದೊಳಗಿಂದ ಕೂಡಿಸುವಾಗ, ನಿಮ್ಮನ್ನು ಸುವಾಸನೆಯಂತೆ ಅಂಗೀಕರಿಸುವೆನು. ಇತರ ಜನಾಂಗಗಳ ಮುಂದೆ ನನ್ನನ್ನು ಪರಿಶುದ್ಧನೆಂದು ತೋರಿಸುವೆನು. ಅಧ್ಯಾಯವನ್ನು ನೋಡಿ |
‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.
ಬಹುಕಾಲದ ನಂತರ, ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಅನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣಹೊಂದಿರುವ ದೇಶಕ್ಕೆ ಬರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಬಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಬರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನ್ನು ಮತ್ತೆ ಕರೆದುಕೊಂಡು ಬರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.
ಆಗಲೇ ನಾನು ಯೆಹೋವನೆಂದು ನೀವು ಅರಿಯುವಿರಿ. ಅವರ ದೇಶದಲ್ಲಿರುವವರ ಹೆಣಗಳು ಅವರ ಹೊಲಸು ವಿಗ್ರಹಗಳ ಸುತ್ತಲೂ ಯಜ್ಞವೇದಿಗಳ ಸುತ್ತಲೂ ಎತ್ತರವಾದ ಸ್ಥಳಗಳ ಮೇಲೆಯೂ ಬೆಟ್ಟಗಳಲ್ಲಿಯೂ ಮತ್ತು ಪ್ರತಿಯೊಂದು ಹಸಿರು ಮರದ ಕೆಳಗೂ ಬೀಳುವಾಗ ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು. ಅವರು ಈ ಎಲ್ಲಾ ಸ್ಥಳಗಳಲ್ಲಿ ತಮ್ಮ ಎಲ್ಲಾ ಹೊಲಸು ವಿಗ್ರಹಗಳಿಗೆ ಪರಿಮಳಭರಿತವಾದ ಯಜ್ಞಗಳನ್ನು ಅರ್ಪಿಸಿದರು.
ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’”