ಯೆಹೆಜ್ಕೇಲನು 20:43 - ಪರಿಶುದ್ದ ಬೈಬಲ್43 ನಿಮ್ಮನ್ನು ನಿಮ್ಮ ದುಷ್ಟತ್ವದಿಂದ ಹೊಲಸು ಮಾಡಿಕೊಂಡದ್ದನ್ನು ಅಲ್ಲಿ ಜ್ಞಾಪಕಮಾಡಿಕೊಳ್ಳುವಿರಿ. ಆಗ ನೀವು ನಾಚಿಕೆಪಡುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ನೀವು ನಿಮ್ಮನ್ನು ಹೊಲಸು ಮಾಡಿಕೊಂಡಿರುವ ನಿಮ್ಮ ನಡತೆಯನ್ನೂ, ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ನಿಮ್ಮನ್ನು ಅಪವಿತ್ರಗೊಳಿಸಿರುವ ನಿಮ್ಮ ನಡತೆಯನ್ನೂ ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ನೆನಪಿಗೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ, ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ನೀವು ನಿಮ್ಮನ್ನು ಹೊಲಸುಮಾಡಿಕೊಂಡಿರುವ ನಿಮ್ಮ ನಡತೆಯನ್ನೂ ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು ನೀವು ನಡಿಸಿರುವ ಸಕಲ ದುಷ್ಕೃತ್ಯಗಳ ನಿವಿುತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು, ನೀವು ಯಾವ ಸಂಗತಿಗಳಿಂದ ಅಶುದ್ಧವಾಗಿದ್ದೀರೋ, ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕ ಮಾಡಿಕೊಳ್ಳುವಿರಿ. ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿಯಲ್ಲಿಯೇ ನೀವು ಅಸಹ್ಯರಾಗುವಿರಿ. ಅಧ್ಯಾಯವನ್ನು ನೋಡಿ |
ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.
“ಎಫ್ರಾಯೀಮ್ ಅಳುವುದನ್ನು ನಾನು ಕೇಳಿದ್ದೇನೆ. ಎಫ್ರಾಯೀಮು ಹೀಗೆ ಹೇಳುವದನ್ನು ನಾನು ಕೇಳಿದ್ದೇನೆ. ‘ಯೆಹೋವನೇ, ನೀನು ನಿಜವಾಗಿ ನನ್ನನ್ನು ದಂಡಿಸಿದೆ. ನಾನು ಪಾಠವನ್ನು ಕಲಿತೆನು. ನಾನು ತರಬೇತಿ ಹೊಂದದ ಒಂದು ಹೋರಿಯುಂತಿದ್ದೆನು. ನನ್ನನ್ನು ದಂಡಿಸುವದನ್ನು ದಯವಿಟ್ಟು ನಿಲ್ಲಿಸು. ನಾನು ನಿನ್ನಲ್ಲಿಗೆ ಹಿಂದಿರುಗಿ ಬರುತ್ತೇನೆ. ನಿಜವಾಗಿಯೂ ನೀನೇ ನನ್ನ ದೇವರಾದ ಯೆಹೋವನು.
ನೀವು ಯಾವ ದುಃಖವನ್ನು ಹೊಂದಿರಬೇಕೆಂದು ದೇವರು ಬಯಸಿದ್ದನೋ ಅದೇ ದುಃಖವನ್ನು ನೀವು ಹೊಂದಿದ್ದೀರಿ. ಆ ದುಃಖವು ನಿಮ್ಮನ್ನು ಬಹು ಆಸಕ್ತಿಯುಳ್ಳವರನ್ನಾಗಿ ಮಾಡಿತು; ನೀವು ತಪ್ಪಿತಸ್ಥರಾಗಿರಲಿಲ್ಲವೆಂದು ನಿರೂಪಿಸಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನಿಮ್ಮನ್ನು ಕೋಪಗೊಳಿಸಿತು ಮತ್ತು ಭಯಗೊಳಿಸಿತು; ನನ್ನನ್ನು ನೋಡಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನನ್ನ ಬಗ್ಗೆ ಚಿಂತಿಸುವಂತೆ ಮಾಡಿತು; ತಪ್ಪಿತಸ್ಥರನ್ನು ದಂಡಿಸಬೇಕೆಂಬ ಬಯಕೆಯನ್ನು ಉಂಟು ಮಾಡಿತು. ಆ ಸಮಸ್ಯೆಯ ಯಾವ ವಿಷಯದಲ್ಲಿಯೂ ನೀವು ಅಪರಾಧಿಗಳಾಗಿರಲಿಲ್ಲವೆಂದು ನಿರೂಪಿಸಿದಿರಿ.