ಯೆಹೆಜ್ಕೇಲನು 20:47 - ಪರಿಶುದ್ದ ಬೈಬಲ್47 ನೆಗೆವ್ ಅಡವಿಗೆ ಹೀಗೆ ಹೇಳು: ‘ಯೆಹೋವನ ಮಾತುಗಳನ್ನು ಆಲೈಸು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನ ಅಡವಿಯಲ್ಲಿ ಬೆಂಕಿಯನ್ನು ಹಾಕುತ್ತೇನೆ. ಆ ಬೆಂಕಿಯು ಪ್ರತಿಯೊಂದು ಹಸಿರು ಮರವನ್ನೂ ಪ್ರತಿಯೊಂದು ಒಣಗಿದ ಮರವನ್ನೂ ಸುಟ್ಟುಬಿಡುವುದು. ಆ ಬೆಂಕಿಯನ್ನು ನಂದಿಸಲಾಗುವದಿಲ್ಲ. ದಕ್ಷಿಣದಿಂದ ಉತ್ತರದ ತನಕವಿರುವ ಪ್ರತಿಯೊಂದು ಮುಖವು ಅದರ ತಾಪವನ್ನು ಅನುಭವಿಸುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಆ ವನಕ್ಕೆ ಹೀಗೆ ಪ್ರವಾದಿಸು, ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸಿರು ಮರಗಳನ್ನೂ, ಒಣಮರಗಳನ್ನೂ ನುಂಗಿ ಬಿಡುವುದು; ಧಗಧಗಿಸುವ ಉರಿಯು ಆರದೆ ದಕ್ಷಿಣದಿಂದ ಉತ್ತರದವರೆಗೆ ಎಲ್ಲರ ಮುಖಗಳು ಸುಟ್ಟು ಹೋಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಆ ವನಕ್ಕೆ ಹೀಗೆ ಪ್ರವಾದಿಸು: ‘ಸರ್ವೇಶ್ವರನ ಮಾತನ್ನು ಕೇಳು: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು. ಅದು ನಿನ್ನಲ್ಲಿನ ಎಲ್ಲಾ ಹಸಿರುಮರಗಳನ್ನೂ ಒಣಮರಗಳನ್ನೂ ಕಬಳಿಸಿಬಿಡುವುದು; ಧಗಧಗಿಸುವ ಜ್ವಾಲೆ ಆರದೆ, ತೆಂಕಲಿಂದ ಬಡಗಲವರೆಗೆ ಎಲ್ಲರ ಮುಖಗಳನ್ನು ಕುಂದಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸುರುಮರಗಳನ್ನೂ ಒಣಮರಗಳನ್ನೂ ನುಂಗಿಬಿಡುವದು; ಧಗಧಗಿಸುವ ಉರಿಯು ಆರದೆ ತೆಂಕಲಿಂದ ಬಡಗಲವರೆಗೆ ಎಲ್ಲರ ಮುಖಗಳನ್ನು ಕಂದಿಸುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ದಕ್ಷಿಣದ ಮರುಭೂಮಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರ ವಾಕ್ಯವನ್ನು ಕೇಳು. ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ. ಅದು ನಿನ್ನಲ್ಲಿರುವ ಎಲ್ಲಾ ಹಸಿಮರಗಳನ್ನು ಮತ್ತು ಎಲ್ಲಾ ಒಣ ಮರಗಳನ್ನು ತಿಂದುಬಿಡುವುದು. ಉರಿಯುವ ಜ್ವಾಲೆ ಆರಿಹೋಗುವುದಿಲ್ಲ. ದಕ್ಷಿಣ ಮೊದಲುಗೊಂಡು ಉತ್ತರದವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟುಹೋಗುವುವು. ಅಧ್ಯಾಯವನ್ನು ನೋಡಿ |
“‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್‌ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’”