ಯೆಹೆಜ್ಕೇಲನು 21:11 - ಪರಿಶುದ್ದ ಬೈಬಲ್11 ಖಡ್ಗವು ಉಜ್ಜಲ್ಪಟ್ಟಿದೆ. ಅದು ಈಗ ಉಪಯೋಗಿಸಲ್ಪಡುತ್ತದೆ. ಖಡ್ಗವು ಹರಿತಮಾಡಲ್ಪಟ್ಟು ಚೆನ್ನಾಗಿ ಉಜ್ಜಲ್ಪಟ್ಟಿದೆ. ಅದನ್ನು ಈಗ ಕೊಲ್ಲುವವನ ಕೈಯಲ್ಲಿ ಕೊಡಲಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಖಡ್ಗವು ಕೈಗೆ ಸಿಗುವಂತೆ ಮಸೆದು ಸಿದ್ಧವಾಗಿದೆ, ಘಾತಕನ ಕೈಗೆ ಈಡಾಗುವ ಹಾಗೆ ಸಾಣೆಹಿಡಿದಿದೆ, ಮಸೆದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬಳಕೆಗೆ ಸಿದ್ಧವಿರಲೆಂದು ಕೊಡಲಾಗಿದೆ ಆ ಖಡ್ಗ ಮಸೆಯಲಿಕ್ಕೆ ಮಸೆದು, ಸಾಣೆ ಹಿಡಿದು, ಸಜ್ಜಾಗಿದೆ ಅದು ಹತ್ಯಗಾರನ ಹಿಡಿತಕ್ಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಖಡ್ಗವು ಕೈಗೆ ಸಿದ್ಧವಾಗುವಂತೆ ತಿಕ್ಕುವದಕ್ಕೆ ಕೊಟ್ಟಿದೆ, ಘಾತಕನ ಕೈಗೆ ಈಡಾಗುವ ಹಾಗೆ ಸಾಣೆಹಿಡಿದಿದೆ, ತಿಕ್ಕಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ ‘ಖಡ್ಗವು ಕೈಯಲ್ಲಿ ಅದು ಹಿಡಿಯಲಾಗುವ ಹಾಗೆ ಮಸೆಯಲು ಕೊಡಲಾಗಿದೆ. ಕೊಲ್ಲುವವನ ಕೈಗೆ ಕೊಡುವ ಹಾಗೆ ಆ ಖಡ್ಗಕ್ಕೆ ಹದವನ್ನೂ, ಸಾಣೆಯನ್ನೂ ಮಾಡಲಾಗಿದೆ. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.